ಬಳ್ಳಾರಿ ಗಲಭೆ: ಮೃತ ರಾಜಶೇಖರ್ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್
ಬಳ್ಳಾರಿ ಬ್ಯಾನರ್ ಗಲಾಟೆಯಲ್ಲಿ ಮೃತಪಟ್ಟ ರಾಜಶೇಖರ್ ಕುಟುಂಬಕ್ಕೆ ಸಚಿವ ಜಮೀರ್ ಭೇಟಿ ನೀಡಿದರು. ಕುಟುಂಬಕ್ಕೆ 25 ಲಕ್ಷ ರೂಪಾಯಿ ಪರಿಹಾರ ನೀಡಿ, ಸಾಲ, ಮಕ್ಕಳ ವಿದ್ಯಾಭ್ಯಾಸ ಮತ್ತು ಮನೆ ವ್ಯವಸ್ಥೆಗೆ ಸಂಪೂರ್ಣ ಸಹಕಾರ ನೀಡುವುದಾಗಿ ಭರವಸೆ ನೀಡಿದರು. ಶಾಸಕರಾದ ಭರತ್ ರೆಡ್ಡಿ, ಗಣೇಶ್ ಈ ವೇಳೆ ಜಮೀರ್ ಜೊತೆಗಿದ್ದರು.
ಬಳ್ಳಾರಿ, ಜನವರಿ 03: ಬಳ್ಳಾರಿಯಲ್ಲಿ ನಡೆದ ಬ್ಯಾನರ್ ಗಲಾಟೆಯಲ್ಲಿ ಮೃತಪಟ್ಟ ರಾಜಶೇಖರ್ ಮನೆಗೆ ಇಂದು ಸಚಿವ ಜಮೀರ್ ಅಹ್ಮದ್ ಖಾನ್ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ. ಈ ವೇಳೆ ಮೃತನ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ ನೀಡಿದ್ದಾರೆ. ನಿಮ್ಮೊಂದಿಗೆ ನಮ್ಮ ಸರ್ಕಾರ ಇರುತ್ತೆ, ನಮ್ಮ ಶಾಸಕರು ಇದ್ದಾರೆ ಎಂದು ಧೈರ್ಯ ತುಂಬಿದ್ದಾರೆ. ಸಚಿವ ಜಮೀರ್‌ಗೆ ಶಾಸಕರಾದ ಭರತ್ ರೆಡ್ಡಿ ಮತ್ತು ಗಣೇಶ್ ಸಾಥ್ ನೀಡಿದರು.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
