ನನ್ನನ್ನು ಮುಗಿಸಲೆಂದೇ ಫೈರಿಂಗ್ ಮಾಡಿದ್ದಾರೆ; ಜನಾರ್ದನ ರೆಡ್ಡಿ ಆರೋಪ
ಶಾಸಕ ಜನಾರ್ದನ ರೆಡ್ಡಿ ಮನೆ ಮುಂದೆ ಘಟನೆ ನಡೆದಿದ್ದು, ಈ ಬಗ್ಗೆ ಶಾಸಕ ಗಾಲಿ ಜನಾರ್ದನ ರೆಡ್ಡಿ ಪ್ರತಿಕ್ರಿಯೆ ನೀಡಿದ್ದಾರೆ. ಬಳ್ಳಾರಿ ನಗರದ ಶಾಸಕ ನಾರಾ ಭರತ್ ರೆಡ್ಡಿ ಹಾಗೂ ನಾರಾ ಭರತ್ ರೆಡ್ಡಿಯ ತಂದೆ ಸೂರ್ಯನಾರಾಯಣ ರೆಡ್ಡಿ ಈ ದಾಳಿ ಮಾಡಿಸಿದ್ದಾರೆ. ಭರತ್ ರೆಡ್ಡಿ ಅಪ್ತ ಸತೀಶ್ ರೆಡ್ಡಿಯಿಂದ ನನ್ನ ಹತ್ಯೆಗೆ ಸಂಚು ರೂಪಿಸಲಾಗಿದೆ. ನನ್ನನ್ನು ಫಿನಿಶ್ ಮಾಡಲೆಂದೇ ಈ ದಾಳಿ ನಡೆಸಿದ್ದಾರೆ. ಬ್ಯಾನರ್ ಗಲಾಟೆ ನೆಪದಲ್ಲಿ ನಮ್ಮ ಮನೆ ಬಳಿ ಗುಂಡಿನ ದಾಳಿ ನಡೆಸಲಾಗಿದೆ ಎಂದು ಆರೋಪಿಸಿದ್ದಾರೆ.
ಬಳ್ಳಾರಿ, ಜನವರಿ 1: ಬ್ಯಾನರ್ ಕಟ್ಟುವ ವಿಚಾರಕ್ಕೆ ಬಳ್ಳಾರಿಯಲ್ಲಿ 2 ಗುಂಪುಗಳ ನಡುವೆ ಗಲಾಟೆ ನಡೆದಿದೆ. ಶಾಸಕ ಜನಾರ್ದನ ರೆಡ್ಡಿ (Janardhan Reddy) ಮನೆ ಮುಂದೆ ಘಟನೆ ನಡೆದಿದ್ದು, ಈ ಬಗ್ಗೆ ಶಾಸಕ ಗಾಲಿ ಜನಾರ್ದನ ರೆಡ್ಡಿ ಪ್ರತಿಕ್ರಿಯೆ ನೀಡಿದ್ದಾರೆ. ಬಳ್ಳಾರಿ ನಗರದ ಶಾಸಕ ನಾರಾ ಭರತ್ ರೆಡ್ಡಿ ಹಾಗೂ ನಾರಾ ಭರತ್ ರೆಡ್ಡಿಯ ತಂದೆ ಸೂರ್ಯನಾರಾಯಣ ರೆಡ್ಡಿ ಈ ದಾಳಿ ಮಾಡಿಸಿದ್ದಾರೆ. ಭರತ್ ರೆಡ್ಡಿ ಅಪ್ತ ಸತೀಶ್ ರೆಡ್ಡಿಯಿಂದ ನನ್ನ ಹತ್ಯೆಗೆ ಸಂಚು ರೂಪಿಸಲಾಗಿದೆ. ನನ್ನನ್ನು ಫಿನಿಶ್ ಮಾಡಲೆಂದೇ ಈ ದಾಳಿ ನಡೆಸಿದ್ದಾರೆ. ಬ್ಯಾನರ್ ಗಲಾಟೆ ನೆಪದಲ್ಲಿ ನಮ್ಮ ಮನೆ ಬಳಿ ಗುಂಡಿನ ದಾಳಿ ನಡೆಸಲಾಗಿದೆ ಎಂದು ಆರೋಪಿಸಿದ್ದಾರೆ.
ಗಂಗಾವತಿಯಿಂದ ಕಾರಿನಲ್ಲಿ ಬಂದು ಇಳಿಯುತ್ತಿದ್ದಂತೆ ಸತೀಶ್ ರೆಡ್ಡಿಯ ಗನ್ಮ್ಯಾನ್ಗಳು ಗುಂಡಿನ ದಾಳಿ ನಡೆಸಿದರು. ಗನ್ಮ್ಯಾನ್ಗಳು 4 ಸುತ್ತು ಗುಂಡು ಹಾರಿಸಿದ್ದಾರೆ ಎಂದ ಜನಾರ್ದನ ರೆಡ್ಡಿ ಫೈರ್ ಮಾಡಿದ ಬುಲೆಟ್ ಪ್ರದರ್ಶಿಸಿದ್ದಾರೆ. ವಾಲ್ಮೀಕಿ ಪುತ್ಥಳಿ ಪ್ರತಿಷ್ಠಾಪನೆ ಹೆಸರಲ್ಲಿ ಬೆಂಕಿ ಹಚ್ಚುವ ಕೆಲಸವಾಗುತ್ತಿದೆ. ಕೊಲೆಗಡುಕರನ್ನು ಹಿಂದಿಟ್ಟುಕೊಂಡು ದಬ್ಬಾಳಿಕೆ ನಡೆಸ್ತಿದ್ದಾರೆ ಎಂದು ಶಾಸಕ ನಾರಾ ಭರತ್ ರೆಡ್ಡಿ ವಿರುದ್ಧ ಜನಾರ್ದನ ರೆಡ್ಡಿ ಕಿಡಿ ಕಾರಿದ್ದಾರೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
