ಬಳ್ಳಾರಿ ಗಲಭೆ: ಪೊಲೀಸ್ ವಶದಲ್ಲಿದ್ದ 9 ಗನ್ಮ್ಯಾನ್ ಪೈಕಿ ಓರ್ವ ಅರೆಸ್ಟ್
ಬಳ್ಳಾರಿಯಲ್ಲಿ ಬ್ಯಾನರ್ ಗಲಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಸಾವು ಪ್ರಕರಣದ ತನಿಖೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಈಗಾಗಲೇ ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷದ ಒಟ್ಟು 26 ಜನರನ್ನು ಬಂಧಿಸಲಾಗಿದೆ. ಪ್ರಮುಖವಾಗಿ ಘಟನೆ ನಡೆದಾಗ ಸ್ಥಳದಲ್ಲಿದ್ದ 9 ಗನ್ಮ್ಯಾನ್ಗಳ ಪೈಕಿ ಓರ್ವನ ಬಂಧನವಾಗಿದೆ. ಹೌದು..ಕಾಂಗ್ರೆಸ್ ಶಾಸಕ ಭರತ್ ರೆಡ್ಡಿ ಆಪ್ತ ಸತೀಶ್ ರೆಡ್ಡಿ ಗನ್ಮ್ಯಾನ್ ನನ್ನು ಪೊಲೀಸರು ಬಂಧಿಸಿದ್ದಾರೆ. ಗಲಾಟೆ ವೇಳೆ ಸತೀಶ್ ರೆಡ್ಡಿ ಖಾಸಗಿ ಗನ್ ಮ್ಯಾನ್ ಗುರುಚರಣ್ ಸಿಂಗ್ ಹಾರಿಸಿದ ಗುಂಡಿಗೆ ರಾಜಶೇಖರ್ ಸಾವನ್ನಪ್ಪಿರುವುದು ದೃಢಪಟ್ಟಿದೆ. ಹೀಗಾಗಿ ಗುರುಚರಣ್ ಸಿಂಗ್ ನನ್ನು ಬಂಧಿಸಿದ್ದಾರೆ.
ಬಳ್ಳಾರಿ, (ಜನವರಿ 04): ಬಳ್ಳಾರಿ ಬ್ಯಾನರ್ ಗಲಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಸಾವು ಪ್ರಕರಣದ ತನಿಖೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಈಗಾಗಲೇ ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷದ ಒಟ್ಟು 26 ಜನರನ್ನು ಬಂಧಿಸಲಾಗಿದೆ. ಪ್ರಮುಖವಾಗಿ ಘಟನೆ ನಡೆದಾಗ ಸ್ಥಳದಲ್ಲಿದ್ದ 9 ಗನ್ಮ್ಯಾನ್ಗಳ ಪೈಕಿ ಓರ್ವನ ಬಂಧನವಾಗಿದೆ. ಹೌದು..ಕಾಂಗ್ರೆಸ್ ಶಾಸಕ ಭರತ್ ರೆಡ್ಡಿ ಆಪ್ತ ಸತೀಶ್ ರೆಡ್ಡಿ ಗನ್ಮ್ಯಾನ್ ನನ್ನು ಪೊಲೀಸರು ಬಂಧಿಸಿದ್ದಾರೆ. ಗಲಾಟೆ ವೇಳೆ ಸತೀಶ್ ರೆಡ್ಡಿ ಖಾಸಗಿ ಗನ್ ಮ್ಯಾನ್ ಗುರುಚರಣ್ ಸಿಂಗ್ ಹಾರಿಸಿದ ಗುಂಡಿಗೆ ರಾಜಶೇಖರ್ ಸಾವನ್ನಪ್ಪಿರುವುದು ದೃಢಪಟ್ಟಿದೆ. ಹೀಗಾಗಿ ಗುರುಚರಣ್ ಸಿಂಗ್ ನನ್ನು ಬಂಧಿಸಿದ್ದಾರೆ.
ಭರತ್ ರೆಡ್ಡಿ ಆಪ್ತ ಸತೀಶ್ ರೆಡ್ಡಿಯ ನಾಲ್ವರು ಗನ್ಮ್ಯಾನ್, ಶಾಸಕ ಭರತ್ ರೆಡ್ಡಿ ಸರ್ಕಾರಿ ಗನ್ಮ್ಯಾನ್ ಬಸವರಾಜ್, ಶಾಸಕ ಜನಾರ್ದನ ರೆಡ್ಡಿಯ ನಾಲ್ವರು ಸರ್ಕಾರಿ ಗನ್ಮ್ಯಾನ್ ಹಾಗೂ ಮಾಜಿ ಸಚಿವ ಬಿ.ಶ್ರೀರಾಮುಲು ಅಂಗರಕ್ಷ ಸೇರಿದಂತೆ ಒಟ್ಟು 9 ಗನ್ಮ್ಯಾನ್ಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಆದ್ರೆ, ಈ ಪೈಕಿ ಇದೀಗ ಸತೀಶ್ ರೆಡ್ಡಿಯ ಅಂಗರಕ್ಷಕ ಗುರುಚರಣ್ ಸಿಂಗ್ ಬಂಧನವಾಗಿದೆ.

