AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಮ ಪಾಶದಂತೆ ಹಾರಿ ಬಂದ ಓಮ್ನಿ: ಪಾದಚಾರಿಗಳ ಮೇಲೆ ಎರಗಿದ ಭಯಾನಕ ದೃಶ್ಯ

ಯಮ ಪಾಶದಂತೆ ಹಾರಿ ಬಂದ ಓಮ್ನಿ: ಪಾದಚಾರಿಗಳ ಮೇಲೆ ಎರಗಿದ ಭಯಾನಕ ದೃಶ್ಯ

ಅಕ್ಷಯ್​ ಪಲ್ಲಮಜಲು​​
|

Updated on: Apr 13, 2026 | 2:43 PM

Share

ಬೆಳ್ತಂಗಡಿಯ ಕೊಡಬೈಲಿನಲ್ಲಿ ಭೀಕರ ಅಪಘಾತ ಸಂಭವಿಸಿದೆ. ಅತಿ ವೇಗದ ಓಮ್ನಿ ಕಾರು ನಿಯಂತ್ರಣ ತಪ್ಪಿ ಪಲ್ಟಿಯಾಗಿ, ರಸ್ತೆ ಬದಿಯ ಪಾದಚಾರಿಗಳ ಮೇಲೆ ಉರುಳಿದೆ. ಓರ್ವ ಮಹಿಳೆಗೆ ಗಂಭೀರ ಗಾಯಗಳಾಗಿದ್ದು, ಇಬ್ಬರು ಮಕ್ಕಳು ಸೇರಿ ಇತರರು ಅಪಾಯದಿಂದ ಪಾರಾಗಿದ್ದಾರೆ. ಸ್ಥಳೀಯರು ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಬೆಳ್ತಂಗಡಿ, ಏ.13: ತಾಲೂಕಿನ ಕೊಡಬೈಲು ಎಂಬಲ್ಲಿ ಭಾನುವಾರ ಮಧ್ಯಾಹ್ನ ಅತೀ ವೇಗವಾಗಿ ಬಂದ ಓಮ್ನಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿದ್ದ ಪಾದಚಾರಿಗಳ ಮೇಲೆ ಉರುಳಿ ಬಿದ್ದಿರುವ ಭೀಕರ ಘಟನೆ ನಡೆದಿದೆ. ಈ ಘಟನೆಯಲ್ಲಿ ಓರ್ವ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದಾರೆ. ವರದಿಗಳ ಪ್ರಕಾರ, ಇಬ್ಬರು ಮಹಿಳೆಯರು ಮತ್ತು ಇಬ್ಬರು ಮಕ್ಕಳು ಬೊಲೆರೋ ಜೀಪ್‌ನಿಂದ ಇಳಿದು ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದರು. ಈ ವೇಳೆ ಅತೀ ವೇಗವಾಗಿ ಬಂದ ಮಾರುತಿ ಓಮ್ನಿ ಕಾರು, ತೀಕ್ಷ್ಣವಾದ ತಿರುವಿನಲ್ಲಿ ನಿಯಂತ್ರಣ ಕಳೆದುಕೊಂಡು ಪಲ್ಟಿಯಾಗಿದೆ. ಉರುಳುತ್ತಾ ಬಂದ ಕಾರು ಹಠಾತ್ತಾಗಿ ಪಾದಚಾರಿಗಳ ಗುಂಪಿನ ಮೇಲೆ ಹರಿದಿದೆ. ಈ ಭೀಕರ ಅಪಘಾತದಲ್ಲಿ ಇಬ್ಬರು ಮಕ್ಕಳು ಮತ್ತು ಒಬ್ಬ ಮಹಿಳೆ ಕೂದಲೆಳೆ ಅಂತರದಲ್ಲಿ ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದಾರೆ. ಆದರೆ, ದುರದೃಷ್ಟವಶಾತ್ ಮತ್ತೊಬ್ಬ ಮಹಿಳೆ ಪಲ್ಟಿಯಾದ ಕಾರಿನ ಅಡಿಯಲ್ಲಿ ಸಿಲುಕಿಕೊಂಡಿದ್ದು, ಗಂಭೀರವಾಗಿ ಗಾಯಗೊಂಡಿದ್ದಾರೆ. ಅಪಘಾತ ಸಂಭವಿಸುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಸ್ಥಳೀಯರು, ಕಾರಿನ ಅಡಿಯಲ್ಲಿ ಸಿಲುಕಿದ್ದ ಮಹಿಳೆಯನ್ನು ಹೊರತೆಗೆದು ತಕ್ಷಣವೇ ಆಟೋರಿಕ್ಷಾ ಮೂಲಕ ಬೆಳ್ತಂಗಡಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ಇಡೀ ಘಟನೆಯ ಭಯಾನಕ ದೃಶ್ಯಗಳು ಸಮೀಪದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿವೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಅಕ್ಷಯ್​ ಪಲ್ಲಮಜಲು​​
ಅಕ್ಷಯ್​ ಪಲ್ಲಮಜಲು​​

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More