ಕಿರುಕುಳ ತಾಳಲಾರದೇ ಮೇಲಧಿಕಾರಿಯ ಮುಖಕ್ಕೆ ರಾಜೀನಾಮೆ ಪತ್ರ ಬಿಸಾಕಿದ ಮಹಿಳಾ ಸಿಬ್ಬಂದಿ

Edited By:

Updated on: Jun 14, 2026 | 2:15 PM

ಮೇಲಧಿಕಾರಿಯ ಕಿರುಕುಳದಿಂದ ಮಹಿಳಾ ಸಿಬ್ಬಂದಿ ರಾಜೀನಾಮೆ ನೀಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕು ಆಸ್ಪತ್ರೆಯ ಔಷಧ ಉಗ್ರಾಣ ವಿಭಾಗದ ಮುಖ್ಯಸ್ಥ ಚಂದ್ರಶೇಖರ್ ಲೈಂಗಿಕ ಕಿರುಕುಳಕ್ಕೆ ಬೇಸತ್ತು ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ ಮಹಿಳಾ ಸಿಬ್ಬಂದಿ ರಾಜೀನಾಮೆ ನೀಡಿದ್ದಾರೆ. ಲೈಂಗಿಕ ಕಿರುಕುಳದ ಬಗ್ಗೆ ಯಾರಿಗಾದರೂ ಹೇಳಿದರೆ ಕೆಲಸದಿಂದ ವಜಾ ಮಾಡುವುದಾಗಿ ಬೆದರಿಕೆ‌ ಹಾಕಿದ್ದ. ಕೊನೆಗೆ ಹಿಂಸೆ ತಾಳಲಾರದೇ ಸಿಬ್ಬಂದಿಯೇ ಚಂದ್ರಶೇಖರ್ ಮುಖಕ್ಕೆ ರಾಜೀನಾಮೆ ಪತ್ರವನ್ನು ಎಸೆದಿದ್ದಾರೆ.

ಮಂಗಳೂರು, (ಜೂನ್ 14): ಮೇಲಧಿಕಾರಿಯ ಕಿರುಕುಳದಿಂದ ಮಹಿಳಾ ಸಿಬ್ಬಂದಿ ರಾಜೀನಾಮೆ ನೀಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕು ಆಸ್ಪತ್ರೆಯ ಔಷಧ ಉಗ್ರಾಣ ವಿಭಾಗದ ಮುಖ್ಯಸ್ಥ ಚಂದ್ರಶೇಖರ್ ಲೈಂಗಿಕ ಕಿರುಕುಳಕ್ಕೆ ಬೇಸತ್ತು ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ ಮಹಿಳಾ ಸಿಬ್ಬಂದಿ ರಾಜೀನಾಮೆ ನೀಡಿದ್ದಾರೆ. ಲೈಂಗಿಕ ಕಿರುಕುಳದ ಬಗ್ಗೆ ಯಾರಿಗಾದರೂ ಹೇಳಿದರೆ ಕೆಲಸದಿಂದ ವಜಾ ಮಾಡುವುದಾಗಿ ಬೆದರಿಕೆ‌ ಹಾಕಿದ್ದ. ಕೊನೆಗೆ ಹಿಂಸೆ ತಾಳಲಾರದೇ ಸಿಬ್ಬಂದಿಯೇ ಚಂದ್ರಶೇಖರ್ ಮುಖಕ್ಕೆ ರಾಜೀನಾಮೆ ಪತ್ರವನ್ನು ಎಸೆದಿದ್ದಾರೆ. ಇನ್ನು ಸಂಬಂಧ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ. ಆದ್ರೆ, ಇತ್ತ ಅಧಿಕಾರಿ ಚಂದ್ರಶೇಖರ್ ತಲೆಮರೆಸಿಕೊಂಡಿದ್ದಾನೆ. ಈ ಬಗ್ಗೆ ಬೆಳ್ತಂಗಡಿ ತಾಲೂಕು ಆಸ್ಪತ್ರೆ ಬಳಿಯಿಂದ ನಮ್ಮ ಪ್ರತಿನಿಧಿ ಪೃಥ್ವಿರಾಜ್ ನೀಡಿರೋ ವರದಿ ಇಲ್ಲಿದೆ.

Loading...
Unable to load recommendations.
Follow Us
ಪೃಥ್ವಿರಾಜ್​ ಬಿ.ಯು. ಮಂಗಳೂರು

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More