ಬಾಗಲಕೋಟೆಯಲ್ಲಿ ಎದೆ ಝಲ್​ ಎನಿಸುವ ಟ್ಯ್ರಾಕ್ಟರ್​ ರೇಸ್​: ವಿಡಿಯೋ ನೋಡಿ

Edited By: ವಿವೇಕ ಬಿರಾದಾರ

Updated on: Jan 22, 2025 | 2:56 PM

ಆ ಹಳ್ಳಿಯಲ್ಲಿ ಹಳ್ಳಿಯಲ್ಲಿ ಡೆಡ್ಲಿ ಟ್ರ್ಯಾಕ್ಟರ್​ ರೇಸ್ ಆಯೋಜಿಸಲಾಗಿತ್ತು. ಈ ರೇಸ್ ನೋಡುವುದಕ್ಕೂ ಗುಂಡಿಗೆ ಗಟ್ಟಿಯಿರಬೇಕು. ರಸ್ತೆ ಬಿಟ್ಟು ಮೇಲಕ್ಕೆ ಹಾರುವ ಗಾಲಿಗಳು, ದೂಳೆಬ್ಬಿಸುವ ಚಕ್ರಗಳು. ಅಬ್ಬಾ ನೋಡುವುದೇ ಒಂದು ರೋಮಾಂಚನಕಾರಿ ದೃಶ್ಯ. ಟ್ರ್ಯಾಕ್ಟರ್​ ರೇಸ್ ನಡೆದದ್ದು ಎಲ್ಲಿ? ವಿಡಿಯೋ ನೋಡಿ.

ಬಾಗಲಕೋಟೆ ತಾಲ್ಲೂಕಿನ ಬೆನಕಟ್ಟಿ ಗ್ರಾಮದಲ್ಲಿ ವೇಮನ ಜಯಂತಿ ಪ್ರಯುಕ್ತ ಟ್ರ್ಯಾಕ್ಟರ್ ರೇಸ್ ಸ್ಪರ್ಧೆ ಆಯೋಜಿಸಲಾಗಿತ್ತು. ಎರಡು ಟ್ರ್ಯಾಕ್ಟರ್​ಗಳನ್ನು ಹಿಂಬದಿ ಜೋಡಿಸಿ, ಹಗ್ಗಜಗ್ಗಾಟದಂತೆ ಓಡಿಸುವ ಸ್ಪರ್ಧೆ ರಣರೋಚಕವಾಗಿತ್ತು. ಟ್ರ್ಯಾಕ್ಟರ್​ನ ಮುಂದಿನ ಗಾಲಿಗಳು ಮೇಲಕ್ಕೆ ಎದ್ದಿದ್ದರೂ ಚಾಲಕರು ​ಚಲಾಯಿಸುತ್ತಾ ಸಾಹಸ ತೋರಿದರು.

ಗ್ರಾಮದಲ್ಲಿ ಇದೇ ಮೊದಲ ಬಾರಿಗೆ ಈತರಹದ ರೇಸ್ ಆಯೋಜಿಲಾಗಿದ್ದು, ಬಾಗಲಕೋಟೆ, ವಿಜಯಪುರ ಜಿಲ್ಲೆಗಳಿಂದ ಟ್ರ್ಯಾಕ್ಟರ್​​ಗಳು ಬಂದಿದ್ವು. ರೇಸ್​​​ಗೆ ಮೊದಲ ನಾಲ್ಕು ಸ್ಥಾನ ಪಡೆದವರಿಗೆ ಬಹುಮಾನ ನೀಡಲಾಯ್ತು. ಈ ರೇಸ್ ನೋಡೋದಕ್ಕೆ ಸಾವಿರಾರು ಜನ ಸೇರಿದ್ದರು. ಟ್ರ್ಯಾಕ್ಟರ್ ರೇಸ್​ ಕಂಡು ನೆರದಿದ್ದ ಜನರು ಶಿಳ್ಳೆ, ಕೇಕೆ ಹಾಕಿ ಸಂಭ್ರಮಿಸಿದರು. ಜಾತ್ರೆ ಪ್ರಯುಕ್ತ ನಡೆದ ರೇಸ್ ನೋಡುಗರನ್ನು ತುದಿಗಾಲ ಮೇಲೆ ನಿಲ್ಲಿಸಿತ್ತು.

Loading...
Unable to load recommendations.
Follow Us
ರವಿ ಹೆಚ್ ಮೂಕಿ, ಕಲಘಟಗಿ

ರವಿ ಹೆಚ್ ಮೂಕಿ. ಮೂಲತಃ ಧಾರವಾಡ ಜಿಲ್ಲೆ ಕಲಘಟಗಿ ತಾಲ್ಲೂಕಿನ ಪರಸಾಪುರ ಗ್ರಾಮದವರು.ರವಿ ಮೂಕಿ ಪ್ರಸ್ತುತ ಟಿವಿ9 ನ್ಯೂಜ್ ಚಾನಲ್‌ ನಲ್ಲಿ ಬಾಗಲಕೋಟೆ ವರದಿಗಾರರು.ಪದವಿ ಮುಗಿಸಿ ಕೆಲ ತಿಂಗಳು ರಿಲಯನ್ಸ್ ಕಂಪನಿಯಲ್ಲಿ ಕೆಲಸ, ನಂತರ ಜನಶ್ರೀ ನ್ಯೂಜ್‌ ಹಾವೇರಿ ಜಿಲ್ಲಾ ವರದಿಗಾರರಾಗಿ ೨೦೧೦ ರಿಂದ ೨೦೧೫ ರವರೆಗೆ ಕೆಲಸ ಮಾಡಿದ್ದಾರೆ.೨೦೧೫ ರಿಂದ‌ ಟಿವಿ ೯ ಬಾಗಲಕೋಟೆ ಜಿಲ್ಲಾ ವರದಿಗಾರರಾಗಿ ‌ಕೆಲಸ ಮುಂದುವರೆಸಿದ್ದಾರೆ.ಮಾದ್ಯಮದಲ್ಲಿ ಸಕ್ರಿಯರಾಗಿದ್ದು,ಹಾವೇರಿ ಬಾಗಲಕೋಟೆ ಜಿಲ್ಲೆ ಸೇರಿ ಒಟ್ಟು.೧೪ ವರ್ಷ ಮಾದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಣೆ.ರಾಜಕೀಯ,ಕೃಷಿ,ಗ್ರಾಮೀಣ ಕ್ರೀಡೆ,ಮಾನವೀಯ ಸ್ಟೋರಿಗಳ ವರದಿ ಮಾಡಲು ಹೆಚ್ಚು ಆಸಕ್ತಿ.ಸಿನಿಮಾ ನೋಡುವುದು,ಸಂಗೀತ ಕೇಳೋದು ಹಾಡೋದು ಇಷ್ಟ. ಟಿರ್ವಿ ಬಾಗಲಕೋಟೆ ಜಿಲ್ಲಾ ವರದಿಗಾರನಾಗಿ ಉತ್ತರಕರ್ನಾಟಕ ದಲ್ಲಿನ ಪ್ರವಾಹ ಸಂಕಷ್ಟ ಕವರೇಜ್. ,ಬಾದಾಮಿ ಸಿದ್ದರಾಮಯ್ಯ- ರಾಮುಲು ಹೈವೋಲ್ಟೇಜ್ ಚುನಾವಣೆ ಕವರೇಜ್,ಅದೇ ಚುನಾವಣೆಯಲ್ಲಿ ಜೆಪಿ ಕೇಂದ್ರ ನಾಯಕ ಅಮಿತ್ ಷಾ ಇಂಟರ್ ವ್ಯೂ ಮಾಡೋಕೆ ಸಂಸ್ಥೆಯಲ್ಲಿ ಅವಕಾಶ ಸಿಕ್ಕಿದ್ದು ಖುಷಿ ಹೆಮ್ಮೆ.

Read More