ವಿರೋಧ ಪಕ್ಷ ನಾಯಕರ ಟೀಕೆಗಳಿಗೆ ಗ್ರಹ ಲಕ್ಷ್ಮಿ ಯೋಜನೆ ಫಲಾನುಭವಿಗಳೇ ಉತ್ತರ ನೀಡುತ್ತಾರೆ: ಲಕ್ಷ್ಮಿ ಹೆಬ್ಬಾಳ್ಕರ್, ಸಚಿವೆ
ಇಂದು ಏಕಕಾಲಕ್ಕೆ ರಾಜ್ಯದ ಸುಮಾರು 1.20 ಕೋಟಿ ಮಹಿಳೆಯರ ಬ್ಯಾಂಕ್ ಖಾತೆಗಳಲ್ಲಿ ಗೃಹ ಲಕ್ಷ್ಮಿ ಯೋಜನೆ ಅಡಿ ತಲಾ ರೂ. 2,000 ಜಮೆಯಾಗುವುದರಿಂದ ಯೋಜನೆಯನ್ನು ಕಟುವಾಗಿ ಟೀಕಿಸುತ್ತಿದ್ದ ವಿರೋಧ ಪಕ್ಷಗಳ ನಾಯಕರ ಬಾಯಿಗೆ ಬೀಗ ಬೀಳಲಿದೆ, ಬಿಜೆಪಿ ಮತ್ತು ಜೆಡಿಎಸ್ ನಾಯಕರಿಗೆ ತಾವೇನೂ ಹೇಳಬೇಕಿಲ್ಲ, ಫಲಾನುಭವಿಗಳೇ ಉತ್ತರ ನೀಡುತ್ತಾರೆ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು.
ಮೈಸೂರು: ನಾಡಹಬ್ಬ ದಸರಾ ಇನ್ನೂ ದೂರ. ಆದರೆ, ನಗರದಲ್ಲಿ ಇಂದು ಹಬ್ಬ ಮತ್ತು ಸಂಭ್ರಮದ ವಾತಾವವರಣ ಸೃಷ್ಟಿಯಾಗಿದೆ. ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ (Congress government) ತನ್ನ ನಾಲ್ಕನೇ ಗ್ಯಾರಂಟಿ ಗೃಹ ಲಕ್ಷ್ಮಿ ಯೋಜನೆಯನ್ನು (Gruha Lakshmi Scheme) ಜಾರಿಗೊಳಿಸುತ್ತಿದ್ದು ಕಾರ್ಯಕ್ರಮಕ್ಕಾಗಿ ಮಹಾರಾಜಾ ಕಾಲೇಜು ಮೈದಾನದಲ್ಲಿ ಸಕಲ ಸಿದ್ಧತೆಗಳು ಪೂರ್ಣಗೊಂಡಿವೆ. ಸಿದ್ಧತೆಗಳನ್ನು ವೀಕ್ಷಿಸಲು ಬಂದಿದ್ದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ಟಿವಿ9 ಕನ್ನಡ ವಾಹಿನಿಯ ಮೈಸೂರು ಪ್ರತಿನಿಧಿಯೊಂದಿಗೆ ಮಾತಾಡಿದರು. ಇಂದು ಏಕಕಾಲಕ್ಕೆ ರಾಜ್ಯದ ಸುಮಾರು 1.20 ಕೋಟಿ ಮಹಿಳೆಯರ ಬ್ಯಾಂಕ್ ಖಾತೆಗಳಲ್ಲಿ ಗೃಹ ಲಕ್ಷ್ಮಿ ಯೋಜನೆ ಅಡಿ ತಲಾ ರೂ. 2,000 ಜಮೆಯಾಗುವುದರಿಂದ ಯೋಜನೆಯನ್ನು ಕಟುವಾಗಿ ಟೀಕಿಸುತ್ತಿದ್ದ ವಿರೋಧ ಪಕ್ಷಗಳ ನಾಯಕರ ಬಾಯಿಗೆ ಬೀಗ ಬೀಳಲಿದೆ, ಬಿಜೆಪಿ ಮತ್ತು ಜೆಡಿಎಸ್ ನಾಯಕರಿಗೆ ತಾವೇನೂ ಹೇಳಬೇಕಿಲ್ಲ, ಫಲಾನುಭವಿಗಳೇ ಉತ್ತರ ನೀಡುತ್ತಾರೆ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ