Congress Protest; ಶಕ್ತಿ ಯೋಜನೆಯ ಫಲಾನುಭವಿಗಳು ಪುಣ್ಯಕ್ಷೇತ್ರಗಳಿಗೆ ತೆರಳಿ ಸಿದ್ದರಾಮಯ್ಯ ಸರ್ಕಾರವನ್ನು ಹರಸುತ್ತಿದ್ದಾರೆ: ಡಿಕೆ ಶಿವಕುಮಾರ್
ಗೃಹಜ್ಯೋತಿ ಯೋಜನೆಯ ಪ್ರಕ್ರಿಯೆ ಆರಂಭವಾಗಿದೆ ಮತ್ತು ಗೃಹಲಕ್ಷ್ಮಿ ಯೋಜನೆಯನ್ನು ಆರಂಭಿಸಲು ಸ್ವಲ್ಪ ಸಮಯ ಹಿಡಿಯುತ್ತದೆ ಎಂದು ಶಿವಕುಮಾರ್ ಹೇಳಿದರು.
ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಕಾಂಗ್ರೆಸ್ ನಾಯಕರು ರಾಜ್ಯ ಸರ್ಕಾರದ ಅನ್ನಭಾಗ್ಯ ಯೋಜನೆಗೆ (Anna Bhagya Scheme) ಕೇಂದ್ರ ಸರ್ಕಾರ ಅಕ್ಕಿ ಒದಗಿಸಲು ನಿರಾಕರಿಸಿರುವುದನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ನಗರದ ಫ್ರೀಡಂ ಪಾರ್ಕ್ನಲ್ಲಿ ಮಾತಾಡಿದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಕೇಂದ್ರದ ಮಲತಾಯಿ ಧೋರಣೆ ಅನುಸರಿಸುತ್ತಿದೆ ಎಂದರು. ಕಾಂಗ್ರೆಸ್ ರಾಜ್ಯದ ಜನತೆಗೆ ನೀಡಿದ 5 ಗ್ಯಾರಂಟಿಗಳಲ್ಲಿ ಶಕ್ತಿ ಯೋಜನೆಯನ್ನು ಜಾರಿ ಮಾಡಿಲಾಗಿದೆ. ಇದುವರೆಗೆ ಸುಮಾರು ಮೂರು ಕೋಟಿ ಮಹಿಳೆಯರು ಯೋಜನೆಯ ಪ್ರಯೋಜನ ಪಡೆದುಕೊಂಡಿದ್ದಾರೆ. ಧರ್ಮಸ್ಥಳ, ಶ್ರೀಕ್ಷೇತ್ರಗಳಿಗೆ ಪ್ರಯಾಣಿಸಿ ಸಿದ್ದರಾಮಯ್ಯ (Siddaramaiah) ನೇತೃತ್ವದ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸುತ್ತಿದ್ದಾರೆ ಎಂದು ಶಿವಕುಮಾರ್ ಹೇಳಿದರು. ಅನ್ನಭಾಗ್ಯ ಯೋಜನೆಗೆ ತಡವಾದರೂ ಜಾರಿಗೊಳಿಸಿಯೇ ಸಿದ್ಧ ಎಂದ ಶಿವಕುಮಾರ್ ಗೃಹಜ್ಯೋತಿ ಯೋಜನೆಯ ಪ್ರಕ್ರಿಯೆ ಆರಂಭವಾಗಿದೆ ಮತ್ತು ಗೃಹಲಕ್ಷ್ಮಿ ಯೋಜನೆಯನ್ನು ಆರಂಭಿಸಲು ಸ್ವಲ್ಪ ಸಮಯ ಹಿಡಿಯುತ್ತದೆ ಎಂದರು.
ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ