Video: ಬಿಜೆಪಿ ಕಾರ್ಯಕರ್ತೆಯನ್ನು ತಾರಸಿಯಿಂದ ತಳ್ಳಿದ ವ್ಯಕ್ತಿ
ಭೂ ವಿವಾದ ತಾರಕಕ್ಕೇರಿ ವ್ಯಕ್ತಿಯೊಬ್ಬ ಬಿಜೆಪಿ ಕಾರ್ಯಕರ್ತೆಯನ್ನು ತಾರಸಿಯಿಂದ ಕೆಳಗೆ ತಳ್ಳಿರುವ ಘಟನೆ ಪಶ್ಚಿಮ ಬಂಗಾಳದ ರಾಯ್ಡಿಘಿ ವಿಧಾನಸಭಾ ಕ್ಷೇತ್ರದಲ್ಲಿ ನಡೆದಿದೆ. ಈ ಘಟನೆ ಬಳಿಕ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ಮತ್ತು ವಿರೋಧ ಪಕ್ಷ ಭಾರತೀಯ ಜನತಾ ಪಕ್ಷದ ನಡುವೆ ಘರ್ಷಣೆ ಉಂಟಾಗಿದೆ.ತನ್ನ ಜಮೀನಿನಲ್ಲಿ ತೃಣಮೂಲ ಪಕ್ಷದ ಕಚೇರಿ ನಿರ್ಮಾಣಕ್ಕೆ ಮಹಿಳೆ ವಿರೋಧ ವ್ಯಕ್ತಪಡಿಸಿದ್ದಾರೆ ಎಂದು ವರದಿಯಾಗಿದೆ.
ಕೋಲ್ಕತ್ತಾ, ನವೆಂಬರ್ 22: ಭೂ ವಿವಾದ ತಾರಕಕ್ಕೇರಿ ವ್ಯಕ್ತಿಯೊಬ್ಬ ಬಿಜೆಪಿ ಕಾರ್ಯಕರ್ತೆಯನ್ನು ತಾರಸಿಯಿಂದ ಕೆಳಗೆ ತಳ್ಳಿರುವ ಘಟನೆ ಪಶ್ಚಿಮ ಬಂಗಾಳದ ರಾಯ್ಡಿಘಿ ವಿಧಾನಸಭಾ ಕ್ಷೇತ್ರದಲ್ಲಿ ನಡೆದಿದೆ. ಈ ಘಟನೆ ಬಳಿಕ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ಮತ್ತು ವಿರೋಧ ಪಕ್ಷ ಭಾರತೀಯ ಜನತಾ ಪಕ್ಷದ ನಡುವೆ ಘರ್ಷಣೆ ಉಂಟಾಗಿದೆ.ತನ್ನ ಜಮೀನಿನಲ್ಲಿ ತೃಣಮೂಲ ಪಕ್ಷದ ಕಚೇರಿ ನಿರ್ಮಾಣಕ್ಕೆ ಮಹಿಳೆ ವಿರೋಧ ವ್ಯಕ್ತಪಡಿಸಿದ್ದಾರೆ ಎಂದು ವರದಿಯಾಗಿದೆ.
ಮಂಗ್ಲಾ ಹಲ್ದರ್ ಎಂದು ಗುರುತಿಸಲ್ಪಟ್ಟ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆಯ ನಂತರ, ರಾಜ್ಯ ಬಿಜೆಪಿ ಎಕ್ಸ್‌ನಲ್ಲಿ ಮಹಿಳೆಯ ಮೇಲೆ ಹಲ್ಲೆ ನಡೆಸಿದ ಸಂಪೂರ್ಣ ಘಟನೆಯನ್ನು ತೋರಿಸುವ ವೀಡಿಯೊವನ್ನು ಪೋಸ್ಟ್ ಮಾಡಿದೆ ಮತ್ತು ರಾಜ್ಯದಲ್ಲಿ ಸರ್ಕಾರವನ್ನು ಬದಲಾಯಿಸಬೇಕೆಂದು ಕರೆ ನೀಡಿದೆ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

