ಬೆಂಕಿ ಅವಘಡ: ಪ್ರಾಣ ಲೆಕ್ಕಿಸದೇ ಪಿಜಿಯಿಂದ ಹಾರಿ ಜೀವ ಉಳಿಸಿಕೊಂಡ ಯುವತಿಯರು, 50 ಮಂದಿ ಜಸ್ಟ್ ಮಿಸ್

Updated on: Apr 28, 2026 | 9:14 AM

ಬೆಂಗಳೂರಿನ ನಂದಿನಿ ಲೇಔಟ್‌ನ ಬ್ಯಾನರ್ ಗೋದಾಮಿನಲ್ಲಿ ಸಂಭವಿಸಿದ ಅಗ್ನಿ ಅವಘಡದಿಂದ ಭಾರಿ ದುರಂತವೊಂದು ತಪ್ಪಿದೆ. ಗೋಡೌನ್‌ಗೆ ಹತ್ತಿದ ಬೆಂಕಿ ಪಕ್ಕದ ಪಿಜಿಗೆ ವ್ಯಾಪಿಸಿತು. ಬೆಂಕಿ ಕಾಣಿಸಿಕೊಂಡ ತಕ್ಷಣವೇ, ಅಲ್ಲಿ ವಾಸವಿದ್ದ 50 ಯುವತಿಯರು ಪ್ರಾಣ ಲೆಕ್ಕಿಸದೆ ಹೊರಗೋಡಿ ಬಚಾವಾಗಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳಲ್ಲಿ ಯುವತಿಯರು ಜಿಗಿದು ಪಾರಾಗುತ್ತಿರುವುದು ಕಾಣಿಸಿದೆ.

ಬೆಂಗಳೂರು, ಏಪ್ರಿಲ್ 28: ಬೆಂಗಳೂರಿನ ನಂದಿನಿ ಲೇಔಟ್‌ನಲ್ಲಿರುವ ರಾಜಕುಮಾರ್ ಸ್ಮಾರಕದ ಸಮೀಪದ ಬ್ಯಾನರ್ ಗೋದಾಮಿನಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಸುಮಾರು 50 ಯುವತಿಯರು ಅಪಾಯದಿಂದ ಪಾರಾಗಿದ್ದು, ಭಾರಿ ದುರಂತ ತಪ್ಪಿದೆ. ಬೆಂಕಿ ಗೋದಾಮಿಗೆ ಹತ್ತಿಕೊಂಡು ಪಕ್ಕದಲ್ಲಿದ್ದ ನಾಲ್ಕು ಅಂತಸ್ತಿನ ಪಿಜಿ ಕಟ್ಟಡಕ್ಕೂ ವ್ಯಾಪಿಸಲು ಶುರುವಾಗಿತ್ತು. ಬೆಂಕಿ ಹೊತ್ತಿಕೊಳ್ಳುವುದನ್ನು ಗಮನಿಸಿದ ತಕ್ಷಣ, ಪಿಜಿಯಲ್ಲಿ ವಾಸವಿದ್ದ ಯುವತಿಯರು ಪ್ರಾಣದ ಹಂಗು ತೊರೆದು ಕಟ್ಟಡದಿಂದ ಹೊರಗೆ ಜಿಗಿದು ಓಡಿದ್ದಾರೆ. ಕೆಲವರು ಜೀವ ಉಳಿಸಿಕೊಳ್ಳಲು ಜಿಗಿದು ಪಾರಾಗಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳಲ್ಲಿ ಯುವತಿಯರು ಚೀರಾಡುತ್ತಾ ಕಟ್ಟಡದಿಂದ ಹೊರಬರುವುದು ಸ್ಪಷ್ಟವಾಗಿ ದಾಖಲಾಗಿದೆ ಸಿಸಿಟಿವಿ ದೃಶ್ಯಾವಳಿ ಸಹಿತ ವರದಿ ಇಲ್ಲಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More