ಮಳೆಗೆ ಕಾಂಪೌಂಡ್ ಕುಸಿದು 7 ಜನ ಸಾವು: ಮೃತರ ಕುಟುಂಬಕ್ಕೆ 5 ಲಕ್ಷ ರೂ ಪರಿಹಾರ ಘೋಷಿಸಿದ ಸಿಎಂ

Updated on: Apr 29, 2026 | 8:27 PM

ಬೆಂಗಳೂರಿನ ಬೌರಿಂಗ್ ಆಸ್ಪತ್ರೆ ಆವರಣ ಗೋಡೆ ಕುಸಿದು ಏಳು ಮಂದಿ ದುರ್ಮರಣಕ್ಕೀಡಾಗಿದ್ದಾರೆ. ಭಾರೀ ಮಳೆಯಿಂದಾದ ಈ ದುರಂತದಲ್ಲಿ ಮೃತಪಟ್ಟ ಬಡ ಬೀದಿಬದಿ ವ್ಯಾಪಾರಿಗಳು ಹಾಗೂ ದಾರಿಹೋಕರಿಗೆ ಸರ್ಕಾರ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದೆ. ಇಂತಹ ಘಟನೆಗಳ ಬಗ್ಗೆ ತನಿಖೆಗೆ ಆದೇಶಿಸಲಾಗಿದ್ದು, ಸಂಬಂಧಿತ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವ ಭರವಸೆ ನೀಡಲಾಗಿದೆ.

ಬೆಂಗಳೂರು, ಏಪ್ರಿಲ್​ 29: ಬಿರುಗಾಳಿ, ಗುಡುಗು, ಸಿಡಿಲು, ಆಲಿಕಲ್ಲು ಸಹಿತ ಅಬ್ಬರಿಸಿದ ಮಳೆಗೆ ನಗರದ ಬೌರಿಂಗ್ ಆಸ್ಪತ್ರೆ ಬಳಿ ಕಾಂಪೌಂಡ್ ಕುಸಿದು ಬರೋಬ್ಬರಿ 7 ಜನರು ಮೃತಪಟ್ಟಿದ್ದಾರೆ. ದುರಂತ ನಡೆದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಸಿಎಂ ಸಿದ್ದರಾಮಯ್ಯ (Siddaramaiah) ಮೃತರ ಕುಟುಂಬದವರಿಗೆ 5 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದಾರೆ. ಇನ್ನು ಘಟನೆಯಲ್ಲಿ ಗಾಯಗೊಂಡಿರುವ 7 ಜನರಿಗೆ ಉಚಿತ ಚಿಕಿತ್ಸೆ ನೀಡುವಂತೆ ಸೂಚನೆ ನೀಡಿದ್ದಾರೆ. ಅಧಿಕಾರಿಗಳ ಅಜಾಗರೂಕತೆ ಸಾಬೀತಾದರೆ ಅವರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ, ಅಗತ್ಯವಿದ್ದರೆ ಅಮಾನತುಗೊಳಿಸುವುದಾಗಿಯೂ ಸಿಎಂ ತಿಳಿಸಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Loading...
Unable to load recommendations.
Follow Us
ಗಂಗಾಧರ​ ಬ. ಸಾಬೋಜಿ

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More