ಮಳೆಗೆ ಕಾಂಪೌಂಡ್ ಕುಸಿದು 7 ಜನ ಸಾವು: ಮೃತರ ಬಗ್ಗೆ ಮಾಹಿತಿ ನೀಡಿದ ಡಿಕೆ ಶಿವಕುಮಾರ್​​

Edited By:

Updated on: Apr 29, 2026 | 10:34 PM

ಬೆಂಗಳೂರಿನಲ್ಲಿ ಭಾರಿ ಮಳೆಯಿಂದಾಗಿ ಕಾಂಪೌಂಡ್ ಕುಸಿದು ಏಳು ಮಂದಿ ಸಾವನ್ನಪ್ಪಿದ್ದಾರೆ. ಘಟನೆ ನಡೆದ ಸ್ಥಳಕ್ಕೆ ಭೇಟಿ ನೀಡಿದ ಸಚಿವ ಡಿಕೆ ಶಿವಕುಮಾರ್ ಅವರು ಮೃತರ ಬಗ್ಗೆ ಮಾಹಿತಿ ನೀಡಿದ್ದಾರೆ. ಸಾವನ್ನಪ್ಪಿದವರಲ್ಲಿ ಸ್ಥಳೀಯ ವ್ಯಾಪಾರಿಗಳು, ಕೇರಳದ ಪ್ರವಾಸಿಗರು ಮತ್ತು ಆರು ವರ್ಷದ ಮಗು ಸೇರಿದ್ದಾರೆ. ಮಳೆಯಿಂದ ಆಶ್ರಯ ಪಡೆಯಲು ಗೋಡೆಯ ಬಳಿ ನಿಂತಿದ್ದಾಗ ದುರಂತ ಸಂಭವಿಸಿದೆ.

ಬೆಂಗಳೂರು, ಏಪ್ರಿಲ್​ 29: ಮಳೆಯಿಂದಾಗಿ ಬೌರಿಂಗ್ ಆಸ್ಪತ್ರೆಯ ಎಮರ್ಜೆನ್ಸಿ ವಿಭಾಗದ ಬಳಿ ಕಾಂಪೌಂಡ್ ಕುಸಿತಗೊಂಡು ಬೀದಿಬದಿ ವ್ಯಾಪಾರ ಮಾಡಿತ್ತಿದ್ದ ಐವರು ಹಾಗೂ ಇಬ್ಬರು ಪಾದಚಾರಿಗಳು ಸೇರಿದಂತೆ 7 ಮಂದಿ ಉಸಿರು ನಿಲ್ಲಿಸಿದ್ದಾರೆ. ಬೆಂಗಳೂರು ಅಭಿವೃದ್ಧಿ ಸಚಿವರು ಆಗಿರುವ ಡಿಸಿಎಂ ಡಿಕೆ ಶಿವಕುಮಾರ್‌, ಸ್ಥಳಕ್ಕೆ ಆಗಮಿಸಿ ಮಾಹಿತಿ ಪಡೆದರು. ಬಳಿಕ ಮಾತನಾಡಿದ ಅವರು, ಮೃತರ ಪೈಕಿ ನಾಲ್ವರು ಸ್ಥಳೀಯ ವ್ಯಾಪಾರಿಗಳು, ಇಬ್ಬರು ಕೇರಳದವರು ಮತ್ತು ಮತ್ತೊಬ್ಬರ ಗುರುತು ಪತ್ತೆಯಾಗಿಲ್ಲ. ಆರು ವರ್ಷದ ಮಗು ಕೂಡ ಸಾವನ್ನಪ್ಪಿದೆ. ಮೃತಪಟ್ಟವರು ಒಬ್ಬರು ಪಾದರಕ್ಷೆ ವ್ಯಾಪಾರಿ ಮತ್ತು ಇನ್ನೊಬ್ಬರು ಬಟ್ಟೆ ವ್ಯಾಪಾರಿಯಾಗಿದ್ದರು. ಮಳೆಯಿಂದ ರಕ್ಷಿಸಿಕೊಳ್ಳಲು ಗೋಡೆಯ ಬಳಿ ನಿಂತಿದ್ದಾಗ ಸುಮಾರು ಎಂಟು ಅಡಿ ಎತ್ತರದ ಗೋಡೆ ಕುಸಿದು ಈ ದುರಂತ ಸಂಭವಿಸಿದೆ ಎಂದು ಡಿಕೆ ಶಿವಕುಮಾರ್‌ ಮಾಹಿತಿ ನೀಡಿದರು.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Loading...
Unable to load recommendations.
Follow Us
ಶಿವಪ್ರಸಾದ್​ ಬಿ.

2015 ರಲ್ಲಿ ಸಮಯ ವಾಹಿನಿ ಮೂಲಕ ಎಲೆಕ್ಟ್ರಾನಿಕ್ ಮಾಧ್ಯಮದಲ್ಲಿ ವರದಿಗಾರನಾಗಿ ವೃತ್ತಿ ಆರಂಭಿಸಿದೆ. ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಹಿರಿಯ ಕ್ರೈಮ್ ವರದಿಗಾರನಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ . ಬೆಂಗಳೂರು ನಗರದಲ್ಲಿ ನಡೆಯುವ ಅಪರಾಧ ಕೃತ್ಯಗಳ ಬಗ್ಗೆ ನಿರಂತರ ವರದಿಗಳನ್ನು ಮಾಡುತ್ತಿದ್ದೇನೆ. ಮೂಲತಃ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನವನಾಗಿದ್ದು, ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಎಂಎಸ್ (ಕಮ್ಯೂನಿಕೇಷನ್) ಸ್ನಾತಕೋತ್ತರ ಪದವಿ ಹಾಗೂ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದಲ್ಲಿ ಕಾನೂನು ಪದವೀಧರನಾಗಿದ್ದೇನೆ.

Read More