ಒಬ್ಬಂಟಿಯಾಗಿ ವಾಸವಿದ್ದ ವೃದ್ಧೆ ಕೊಂದು ಮನೆಯಲ್ಲಿದ್ದ ಚಿನ್ನಾಭರಣ ದರೋಡೆ ಮಾಡಿದ ದುರುಳರು
ಬೆಂಗಳೂರಿನ ಬ್ಯಾಟರಾಯನಪುರದ ಹೊಸಗುಡ್ಡದಹಳ್ಳಿಯಲ್ಲಿ 70 ವರ್ಷದ ವೆಂಕಟಲಕ್ಷ್ಮಮ್ಮ ಎಂಬ ವೃದ್ಧೆಯನ್ನು ಚಿನ್ನಾಭರಣಕ್ಕಾಗಿ ಕೊಲೆ ಮಾಡಲಾಗಿದೆ. ಒಂಟಿಯಾಗಿ ವಾಸಿಸುತ್ತಿದ್ದ ಅವರ ಮನೆಯ ಬೀರುಗಳನ್ನು ಒಡೆದು ಹಾಕಿ, ಚಿನ್ನಾಭರಣ ದೋಚಲಾಗಿದೆ. ತಲೆ ಮತ್ತು ಕತ್ತಿನ ಭಾಗದಲ್ಲಿ ಗಾಯಗಳಾಗಿ ತೀವ್ರ ರಕ್ತಸ್ರಾವದಿಂದ ವೃದ್ಧೆ ಮೃತಪಟ್ಟಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.
ಬೆಂಗಳೂರು, ಅಕ್ಟೋಬರ್ 26: ಬ್ಯಾಟರಾಯನಪುರ ಪೊಲೀಸ್ ಠಾಣೆ ವ್ಯಾಪ್ತಿಯ ಹೊಸಗುಡ್ಡದಹಳ್ಳಿಯಲ್ಲಿ ಚಿನ್ನಾಭರಣಕ್ಕಾಗಿ 70 ವರ್ಷದ ವೃದ್ಧೆಯೊಬ್ಬರ ಕೊಲೆ ನಡೆದಿದೆ. ವೆಂಕಟಲಕ್ಷ್ಮಮ್ಮ ಮೃತರು. ಇವರು ತಮ್ಮ ಮನೆಯಲ್ಲಿ ಒಂಟಿಯಾಗಿ ವಾಸಿಸುತ್ತಿದ್ದರು. ಶನಿವಾರ ಸಂಜೆ ಘಟನೆ ಸಂಭವಿಸಿದ್ದು, ದುಷ್ಕರ್ಮಿಗಳು ವೃದ್ಧೆ ಮೇಲೆ ಹಲ್ಲೆ ಮಾಡಿ, ಮನೆಯಲ್ಲಿದ್ದ ಚಿನ್ನಾಭರಣಗಳನ್ನು ದರೋಡೆ ಮಾಡಿದ್ದಾರೆ ಎನ್ನಲಾಗಿದೆ. ತಲೆ ಮತ್ತು ಕತ್ತಿನ ಭಾಗದಲ್ಲಿ ಗಾಯಗಳಾಗಿ ತೀವ್ರ ರಕ್ತಸ್ರಾವದಿಂದ ವೆಂಕಟಲಕ್ಷ್ಮಮ್ಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ದುಷ್ಕರ್ಮಿಗಳು ಮನೆಯಲ್ಲಿದ್ದ ಬೀರುಗಳನ್ನು ಒಡೆದು ಚಿನ್ನಾಭರಣಗಳನ್ನು ಕದ್ದೊಯ್ದಿದ್ದಾರೆ. ಈ ಸಂಬಂಧ ಬ್ಯಾಟರಾಯನಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Published on: Oct 26, 2026 01:00 PM
Follow Us
Latest Videos

