ಬೆಂಗಳೂರು: ಮೇಲ್ಸೇತುವೆಯಲ್ಲಿ ಚಲಿಸುತ್ತಿದ್ದಾಗ ರೈಲಿನಿಂದ ಕೆಳಗೆ ಜಿಗಿದ ವ್ಯಕ್ತಿ
ಬೆಂಗಳೂರಿನ ಮೆಜೆಸ್ಟಿಕ್ ಹಾಗೂ ಮಲ್ಲೇಶ್ವರಂ ಮಧ್ಯೆ ವ್ಯಕ್ತಿಯೊಬ್ಬ ಚಲಿಸುತ್ತಿದ್ದ ರೈಲಿನಿಂದ ಮೇಲ್ಸೇತುವೆಯಿಂದ ಕೆಳಕ್ಕೆ ಹಾರಿದ ಘಟನೆ ನಡೆದಿದೆ. ಮೇಲ್ನೋಟಕ್ಕೆ ವ್ಯಕ್ತಿಗೆ ಗಂಭೀರ ಗಾಯಗಳಾಗಿರುವಂತೆ ಕಂಡುಬಂದಿದ್ದು, ಸ್ಥಳಕ್ಕೆ ಪೊಲೀಸರು ಧಾವಿಸಿದ್ದಾರೆ. ಮದ್ಯಪಾನದ ಅಮಲಿನಲ್ಲಿ ಆತ ಹಾರಿರುವ ಶಂಕೆ ವ್ಯಕ್ತವಾಗಿದೆ. ಹೆಚ್ಚಿನ ಮಾಹಿತಿ ಕಲೆಹಾಕಲು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.
ಬೆಂಗಳೂರು, ಜನವರಿ 22: ವ್ಯಕ್ತಿಯೊಬ್ಬ ಚಲಿಸುತ್ತಿದ್ದ ರೈಲಿನಿಂದ (ಮೇಲ್ಸೇತುವೆಯಲ್ಲಿ ಚಲಿಸುತ್ತಿದ್ದಾಗ) ಸುಮಾರು 25 ರಿಂದ 30 ಅಡಿ ಕೆಳಗೆ ಜಿಗಿದ ಘಟನೆ ಬೆಂಗಳೂರಿನ ಮೆಜೆಸ್ಟಿಕ್ನಿಂದ ಮಲ್ಲೇಶ್ವರಂ ಕಡೆ ತೆರಳುವ ಮಾರ್ಗದಲ್ಲಿ ಸಂಭವಿಸಿದೆ. ರೈಲಿನಿಂದ ಕೆಳಗೆ ಬಿದ್ದ ರಭಸಕ್ಕೆ ವ್ಯಕ್ತಿಯ ಸೊಂಟ, ಬಲಭಾಗದ ಕಾಲಿಗೆ ತೀವ್ರ ಗಾಯಗಳಾಗಿದೆ. ಕುಡಿದ ಅಮಲಿನಲ್ಲಿ ಚಲಿಸುತ್ತಿದ್ದ ರೈಲಿನಿಂದ ಕೆಳಕ್ಕೆ ಜಿಗಿದಿರುವ ಶಂಕೆ ವ್ಯಕ್ತವಾಗಿದೆ. ಸದ್ಯ ಸ್ಥಳಕ್ಕೆ ಧಾವಿಸಿರುವ ಪೊಲೀಸರು ರೈಲಿನಿಂದ ಕೆಳಗೆ ಬಿದ್ದ ವ್ಯಕ್ತಿಯ ಹೆಸರು, ವಿಳಾಸ ಪತ್ತೆ ಹಚ್ಚುತ್ತಿದ್ದಾರೆ. ಶೇಷಾದ್ರಿಪುಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
Latest Videos