ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ, ಸ್ಥಳದಲ್ಲೇ ಪ್ರಾಣ ಬಿಟ್ಟ ಇಬ್ಬರು ಯುವಕರು
ಬೆಂಗಳೂರಿನ ಮಾಚೋಹಳ್ಳಿ ಬಳಿ ಭೀಕರ ರಸ್ತೆ ಅಪಘಾತದಲ್ಲಿ ಗಗನ್ (27) ಮತ್ತು ದರ್ಶನ್ (26) ಎಂಬ ಇಬ್ಬರು ಯುವಕರು ಮೃತಪಟ್ಟಿದ್ದಾರೆ. ಮಾಗಡಿ ರಸ್ತೆಯಲ್ಲಿ ಬೊಲೆರೊ ವಾಹನ ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಇವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳಿಸಲಾಗಿದ್ದು, ಮಾದನಾಯಕನಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ. ಇದು ನಗರದಲ್ಲಿ ನಡೆದ ಮತ್ತೊಂದು ದುರಂತ ರಸ್ತೆ ಅಪಘಾತ.
ಬೆಂಗಳೂರು,ಜ.5: ಬೊಲೆರೋ ವಾಹನವೊಂದು ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದು ಇಬ್ಬರ ಯುವಕರು ಸಾವನ್ನಪ್ಪಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಮಾಚೋಹಳ್ಳಿ ಬಳಿ ನಡೆದಿದೆ. ಗಗನ್ (27), ದರ್ಶನ್ (26) ಮೃತರು ಎಂದು ಹೇಳಲಾಗಿದೆ. ಚನ್ನರಾಯಪಟ್ಟಣದ ಮೂಲದ ಗಗನ್ ಮಾದನಾಯಕನಹಳ್ಳಿ ಖಾಸಗಿ ಬಾರ್ನಲ್ಲಿ ಕೆಲಸ ಮಾಡುತ್ತಿದ್ದ ಎಂದು ಹೇಳಲಾಗಿದೆ. ದರ್ಶನ್ ಕೋಳಿ ಸಪ್ಲೈ ಮಾಡುವ ವಾಹನ ಡ್ರೈವರ್ ಆಗಿದ್ದ. ಎಲೆಕ್ಟ್ರಾನಿಕ್ ಸಿಟಿ ಬಳಿ ಇರುವ ಸ್ನೇಹಿತನ ರೂಂಗೆ ತೆರಳುತ್ತಿದ್ದ ವೇಳೆ, ಮಾಗಡಿ ರಸ್ತೆಯ ಮಾಚೋಹಳ್ಳಿ ಬೊಲೆರೋ ವಾಹನ ಬಂದು ಇವರ ಕಾರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ್ದಾರೆ. ಸದ್ಯ ಇಬ್ಬರ ಮೃತ ದೇಹ ನೆಲಮಂಗಲ ಶವಾಗಾರಕ್ಕೆ ರವಾನೆ ಮಾಡಲಾಗಿದೆ. ಮಾದನಾಯಕನಹಳ್ಳಿ ಪೊಲೀಸರು ಮರಣೋತ್ತರ ಪರೀಕ್ಷೆ ಕಳಿಸಿದ್ದಾರೆ.
ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

