ಬೆಂಗಳೂರು: ಆಕಸ್ಮಿಕ ಬೆಂಕಿಗೆ ಹೊತ್ತಿ ಉರಿದ ಶಂಕಿತ ಬಾಂಗ್ಲಾ ವಲಸಿಗರ ಶೆಡ್​ಗಳು

Edited By:

Updated on: Jan 20, 2026 | 9:57 PM

ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಸಮೀಪದ ಎಸ್.ಬಿಂಗೀಪುರ ಕೆರೆ ಬಳಿ ಸ್ಕ್ರಾಪ್ ಶೆಡ್‌ಗಳಿಗೆ ಆಕಸ್ಮಿಕವಾಗಿ ಬೆಂಕಿ ಬಿದ್ದಿದೆ. ಒಂದು ವಾರದ ಹಿಂದೆ ಶಂಕಿತ ಬಾಂಗ್ಲಾ ವಲಸಿಗರು ವಾಸವಿದ್ದ ಈ ಶೆಡ್‌ಗಳಿಂದ ಅವರನ್ನು ತೆರವುಗೊಳಿಸಲಾಗಿತ್ತು. ಇದೀಗ ಗುಜರಿ ತುಂಬಿದ ಶೆಡ್‌ಗಳು ಸಂಪೂರ್ಣ ಭಸ್ಮವಾಗಿದ್ದು, ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಆನೇಕಲ್​​, ಜನವರಿ 20: ಶಂಕಿತ ಬಾಂಗ್ಲಾ ವಲಸಿಗರು ವಾಸವಿದ್ದ ಶೆಡ್​ಗಳಿಗೆ ಬೆಂಕಿ ಬಿದ್ದಿರುವಂತಹ ಘಟನೆ ಬೆಂಗಳೂರಿನ ಎಲೆಕ್ಟ್ರಾನಿಕ್​ಸಿಟಿ ಬಳಿಯ ಎಸ್​​.ಬಿಂಗೀಪುರ ಕೆರೆ ಸಮೀಪ ಅವಘಡ ಸಂಭವಿಸಿದೆ. ಆಕಸ್ಮಿಕ ಬೆಂಕಿಯಿಂದಾಗಿ ಗುಜರಿ ಶೆಡ್​ಗಳು ಹೊತ್ತಿ ಉರಿದಿವೆ. ಒಂದು ವಾರದ ಹಿಂದೆ ಹಿಂದೂ ಪರ ಸಂಘಟನೆ ಕಾರ್ಯಕರ್ತರು ಶಂಕಿತ ಬಾಂಗ್ಲಾ ವಲಸಿಗರನ್ನು ತೆರವುಗೊಳಿಸಿದ್ದರು. ಸದ್ಯ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಬನ್ನೇರುಘಟ್ಟ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಶಂಕಿತ ಬಾಂಗ್ಲಾ ವಲಸಿಗರನ್ನ ವಶಕ್ಕೆ ಪಡೆದುಕೊಂಡಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.