AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಿಂದ ವಿದೇಶಕ್ಕೆ ಹೋಗುವ, ಬರುವ ಒಟ್ಟು 24 ವಿಮಾನಗಳು ರದ್ದು: ನಿಲ್ದಾಣದಲ್ಲಿ ಪ್ರಯಾಣಿಕರ ಪರದಾಟ

ಬೆಂಗಳೂರಿನಿಂದ ವಿದೇಶಕ್ಕೆ ಹೋಗುವ, ಬರುವ ಒಟ್ಟು 24 ವಿಮಾನಗಳು ರದ್ದು: ನಿಲ್ದಾಣದಲ್ಲಿ ಪ್ರಯಾಣಿಕರ ಪರದಾಟ

ನವೀನ್ ಕುಮಾರ್ ಟಿ
| Edited By: |

Updated on: Mar 02, 2026 | 12:37 PM

Share

ಇರಾನ್-ಇಸ್ರೇಲ್ ಯುದ್ಧದ ಕಾರಣ ಪಶ್ಚಿಮ ಏಷ್ಯಾದ ವಾಯುನೆಲೆಗಳು ಮುಚ್ಚಿದ್ದು, ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಿಂದ 24 ವಿಮಾನಗಳು ರದ್ದಾಗಿವೆ. ಮಧ್ಯಪ್ರಾಚ್ಯಕ್ಕೆ ತೆರಳಬೇಕಿದ್ದ ಪ್ರಯಾಣಿಕರು ತೊಂದರೆಗೊಳಗಾಗಿದ್ದಾರೆ. ದುಬೈ ಮತ್ತು ಬಹ್ರೇನ್‌ಗಳಲ್ಲಿ 100ಕ್ಕೂ ಹೆಚ್ಚು ಕನ್ನಡಿಗರು ಸಿಲುಕಿದ್ದಾರೆ. ಪ್ರಯಾಣಿಕರು ವಿಮಾನದ ಸ್ಥಿತಿಗತಿಯನ್ನು ಖಚಿತಪಡಿಸಿಕೊಂಡು ವಿಮಾನ ನಿಲ್ದಾಣಕ್ಕೆ ಬರುವಂತೆ ಸೂಚಿಸಲಾಗಿದೆ.

ದೇವನಹಳ್ಳಿ, ಮಾ.2 : ಇರಾನ್ ಮತ್ತು ಇಸ್ರೇಲ್ ನಡುವೆ ಯುದ್ಧ ತಾರಕಕ್ಕೇರಿರುವ ಹಿನ್ನೆಲೆಯಲ್ಲಿ ಪಶ್ಚಿಮ ಏಷ್ಯಾದ ವಾಯುನೆಲೆಗಳನ್ನು ಮುಚ್ಚಲಾಗಿದೆ. ಇದರ ನೇರ ಪರಿಣಾಮ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೆ ಬೀರಿದ್ದು, ಇಂದು ಸಹ ಸರಣಿ ವಿಮಾನಗಳ ಹಾರಾಟವನ್ನು ರದ್ದುಗೊಳಿಸಲಾಗಿದೆ. ಬೆಂಗಳೂರಿನಿಂದ ವಿದೇಶಕ್ಕೆ ತೆರಳಬೇಕಿದ್ದ 09 ವಿಮಾನಗಳು ಹಾಗೂ ವಿದೇಶದಿಂದ ಆಗಮಿಸಬೇಕಿದ್ದ 15 ವಿಮಾನಗಳು ಸೇರಿದಂತೆ ಒಟ್ಟು 24 ವಿಮಾನಗಳ ಸಂಚಾರವನ್ನು ಇಂದು ರದ್ದುಗೊಳಿಸಲಾಗಿದೆ. ಅಬುಧಾಬಿ, ಜಿದ್ದಾ, ದೋಹಾ, ದುಬೈ ಮತ್ತು ಬಹ್ರೇನ್‌ ಸೇರಿದಂತೆ ಮಧ್ಯಪ್ರಾಚ್ಯದ ಪ್ರಮುಖ ನಗರಗಳಿಗೆ ಸಂಪರ್ಕ ಕಲ್ಪಿಸುವ ವಿಮಾನಗಳು ರದ್ದಾಗಿವೆ. ಏರ್ ಇಂಡಿಯಾ, ಎಮಿರೇಟ್ಸ್, ಇಂಡಿಗೋ ಮತ್ತು ಖತಾರ್ ಏರ್ವೇಸ್ ಸೇರಿದಂತೆ ಹಲವು ಪ್ರಮುಖ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಿವೆ. ರದ್ದಾದ ವಿಮಾನಗಳಲ್ಲಿ ಟಿಕೆಟ್ ಬುಕ್ ಮಾಡಿದ್ದ ಪ್ರಯಾಣಿಕರಿಗೆ ಟಿಕೆಟ್ ಮರು ಬುಕ್ಕಿಂಗ್ ಅಥವಾ ಪೂರ್ಣ ಹಣ ವಾಪಸ್ (Refund) ಪಡೆಯಲು ಏರ್‌ಲೈನ್ಸ್‌ಗಳು ಅವಕಾಶ ಕಲ್ಪಿಸಿವೆ.

ಯುದ್ಧದ ಪರಿಸ್ಥಿತಿಯಿಂದಾಗಿ ವಿಮಾನಗಳ ಹಾರಾಟ ಅನಿಶ್ಚಿತವಾಗಿದೆ. ಹೀಗಾಗಿ ಪ್ರಯಾಣಿಕರು ತಮ್ಮ ವಿಮಾನದ ಸ್ಥಿತಿಗತಿಯನ್ನು (Flight Status) ಅಧಿಕೃತವಾಗಿ ಖಚಿತಪಡಿಸಿಕೊಳ್ಳದೆ ವಿಮಾನ ನಿಲ್ದಾಣಕ್ಕೆ ಬರಬಾರದು ಎಂದು ಆಡಳಿತ ಮಂಡಳಿ ವಿನಂತಿಸಿದೆ. ಸಹಾಯಕ್ಕಾಗಿ ಸಾಮಾಜಿಕ ಜಾಲತಾಣ ಮತ್ತು ಏರ್‌ಪೋರ್ಟ್‌ನಲ್ಲಿ ಹೆಲ್ಪ್‌ಡೆಸ್ಕ್ ತೆರೆಯಲಾಗಿದೆ. ಇನ್ನು ದುಬೈನಲ್ಲಿ ಒಟ್ಟು 100 ಮಂದಿ ಕನ್ನಡಿಗರು ಸಿಲುಕಿದ್ದಾರೆ. ಬಳ್ಳಾರಿಯ 32 ಮಂದಿ, ಬೆಂಗಳೂರಿನ 25 ಮಂದಿ, ದಾವಣಗೆರೆಯ 9 ಮಂದಿ, ಚಿಕ್ಕಮಗಳೂರಿನ 5 ಮಂದಿ, ವಿಜಯಪುರದ 4 ಮಂದಿ, ಕೊಡಗಿನ 4 ಮಂದಿ, ದಕ್ಷಿಣ ಕನ್ನಡದ 3 ಮಂದಿ, ಶಿವಮೊಗ್ಗದ 3 ಮಂದಿ, ರಾಯಚೂರಿನ 3 ಮಂದಿ, ಚಿಕ್ಕಬಳ್ಳಾಪುರದ 2 ಮಂದಿ, ಚಿತ್ರದುರ್ಗದ 2 ಮಂದಿ, ಕಲಬುರಗಿಯ 2 ಮಂದಿ, ಉಡುಪಿಯ 2 ಮಂದಿ, ತುಮಕೂರಿನ 1 ಮಂದಿ, ಮತ್ತೆ ಮೂರು ಜನರ ಜಿಲ್ಲೆಯಾವುದು ಎಂದು ತಿಳಿದಿಲ್ಲ. ಇದರ ಬಹ್ರೇನ್‌ನಲ್ಲಿ ಒಟ್ಟು 9 ಮಂದಿ ಸಿಲುಕಿದ್ದಾರೆ. ಹಾಸನದ 4 ಮಂದಿ ಉಡುಪಿಯ 3 ಮಂದಿ ಕೊಡಗಿನ 1 ಮಂದಿ, ಮತ್ತೆ ಒಬ್ಬರ ಜಿಲ್ಲೆ ಯಾವುದು ಎಂಬ ಬಗ್ಗೆ ಮಾಹಿತಿ ಸಿಕ್ಕಿಲ್ಲ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Naveen Kumar
Naveen Kumar

ನವೀನ್ ಕುಮಾರ್ ಟಿ ಎಂಬ ನಾನು ಮೂಲತಃಹ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ನಮ್ಮ ಹೆಮ್ಮೆಯ ಟಿವಿನೈನ್ ನ ದೇವನಹಳ್ಳಿ ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಎಂಎಸ್ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ನಾನು ಪದವಿ ಮುಗಿಯುತ್ತಿದ್ದಂತೆ ಟಿವಿನೈನ್ ನಲ್ಲಿ ವರದಿಗಾರನಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದೇನೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಉದ್ದೇಯನ್ನ ಪಡೆದು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡ್ತಿದ್ದೀನಿ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಾ ಬಂದಿದ್ದೇನೆ.

Read More