AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಏರ್​ಪೋರ್ಟ್ ಪ್ರಯಾಣಿಕರೇ ಗಮನಿಸಿ: ಈ ರಸ್ತೆ 18 ತಿಂಗಳು ಬಂದ್, ಸವಾರರಿಗೆ ಬದಲಿ ಮಾರ್ಗ

ಬೆಂಗಳೂರು ಏರ್​ಪೋರ್ಟ್ ಪ್ರಯಾಣಿಕರೇ ಗಮನಿಸಿ: ಈ ರಸ್ತೆ 18 ತಿಂಗಳು ಬಂದ್, ಸವಾರರಿಗೆ ಬದಲಿ ಮಾರ್ಗ

ಪ್ರಜ್ವಲ್​ ಕುಮಾರ್ ಎನ್​ ವೈ
| Edited By: |

Updated on: Nov 06, 2026 | 8:13 AM

Share

ಮೇಖ್ರಿ ಸರ್ಕಲ್‌ನಿಂದ ಹೆಬ್ಬಾಳದವರೆಗಿನ ಏರ್ಪೋರ್ಟ್ ರಸ್ತೆಯು ಮುಂದಿನ 18 ತಿಂಗಳ ಕಾಲ ಸಂಚಾರಕ್ಕೆ ಮುಕ್ತವಾಗಿರುವುದಿಲ್ಲ. ನಾಲ್ಕು ಪಥದ ಎಲಿವೇಟೆಡ್ ಕಾರಿಡಾರ್ ನಿರ್ಮಾಣ ಕಾಮಗಾರಿಯ ಹಿನ್ನೆಲೆಯಲ್ಲಿ ಸಂಚಾರ ನಿರ್ಬಂಧ ಹೇರಲಾಗಿದೆ. ಭಾರೀ ವಾಹನಗಳಿಗೆ ಸಂಪೂರ್ಣ ನಿಷೇಧವಿದ್ದು, ವಾಹನ ಸವಾರರು ಸೂಚಿತ ಪರ್ಯಾಯ ಮಾರ್ಗಗಳನ್ನು ಕಡ್ಡಾಯವಾಗಿ ಬಳಸಬೇಕು.

ಬೆಂಗಳೂರು, ನವೆಂಬರ್ 6: ಬೆಂಗಳೂರು ನಗರದ ಪ್ರಮುಖ ರಸ್ತೆಗಳಲ್ಲಿ ಒಂದಾದ ಮೇಖ್ರಿ ಸರ್ಕಲ್‌ನಿಂದ ಹೆಬ್ಬಾಳದವರೆಗಿನ ರಸ್ತೆಯನ್ನು ಮುಂದಿನ 18 ತಿಂಗಳ ಕಾಲ ಸಂಚಾರಕ್ಕೆ ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತೆರಳುವ ಪ್ರಮುಖ ಮಾರ್ಗ ಇದಾಗಿದ್ದು, ನಾಲ್ಕು ಪಥದ ಎಲಿವೇಟೆಡ್ ಕಾರಿಡಾರ್ ನಿರ್ಮಾಣ ಕಾಮಗಾರಿಯ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಈ ಕಾಮಗಾರಿಯಿಂದಾಗಿ ಮುಂದಿನ ಒಂದೂವರೆ ವರ್ಷಗಳ ಕಾಲ ಬಳ್ಳಾರಿ ರಸ್ತೆಯಲ್ಲಿ ಭಾರಿ ಸಂಚಾರ ದಟ್ಟಣೆ ಉಂಟಾಗುವ ಸಾಧ್ಯತೆ ಇದೆ. ಬಸ್, ಲಾರಿ ಸೇರಿದಂತೆ ಎಲ್ಲಾ ಸರಕು ಸಾಗಣೆ ವಾಹನಗಳಿಗೂ ಈ ಮಾರ್ಗದಲ್ಲಿ ಸಂಪೂರ್ಣ ನಿಷೇಧ ಹೇರಲಾಗಿದೆ. ವಾಹನ ಸವಾರರು ಸರ್ವಿಸ್ ರಸ್ತೆಯನ್ನು ಮಾತ್ರ ಬಳಸಲು ಅವಕಾಶವಿದ್ದು, ಅದಕ್ಕೂ ಸೀಮಿತ ವಾಹನಗಳಿಗೆ ಮಾತ್ರ ಪ್ರವೇಶವಿದೆ.

ಬಿಡಿಎ ವತಿಯಿಂದ ನಡೆಯುತ್ತಿರುವ ಈ ಕಾಮಗಾರಿಯು ಸಂಚಾರ ಸುಗಮಗೊಳಿಸುವ ಉದ್ದೇಶದಿಂದ ಕೈಗೊಳ್ಳಲಾಗಿದೆ. ಸದ್ಯಕ್ಕೆ, ವಾಹನ ಸವಾರರು ಹಲವಾರು ಪರ್ಯಾಯ ಮಾರ್ಗಗಳನ್ನು ಬಳಸಬೇಕಾಗಿದೆ. ಹೆಬ್ಬಾಳದಿಂದ ವಿಮಾನ ನಿಲ್ದಾಣದತ್ತ ತೆರಳುವವರು ಹಾಗೂ ವಿಮಾನ ನಿಲ್ದಾಣದಿಂದ ನಗರ ಕೇಂದ್ರಕ್ಕೆ ಬರುವವರಿಗಾಗಿ ವಿವಿಧ ಮಾರ್ಗಗಳನ್ನು ಪ್ರಕಟಿಸಲಾಗಿದೆ. ನಿತ್ಯ ಲಕ್ಷಾಂತರ ವಾಹನಗಳು ಓಡಾಡುವ ಈ ರಸ್ತೆಯಲ್ಲಿನ ಬದಲಾವಣೆಯು ಬೆಂಗಳೂರಿನ ಸಂಚಾರ ವ್ಯವಸ್ಥೆಯ ಮೇಲೆ ಭಾರಿ ಪರಿಣಾಮ ಬೀರಲಿದೆ. ಮುಖ್ಯವಾಗಿ, ವಿಮಾನ ನಿಲ್ದಾಣಕ್ಕೆ ಪ್ರಯಾಣಿಸುವವರು ಮುಂಚಿತವಾಗಿ ಪ್ಲಾನ್ ಮಾಡಿಕೊಂಡು ಸಾಕಷ್ಟು ಮೊದಲೇ ಪ್ರಯಾಣಿಸುವುದು ಉತ್ತಮ ಎಂದು ಸಲಹೆ ನೀಡಲಾಗಿದೆ.

ಪರ್ಯಾಯ ಮಾರ್ಗ ಹಾಗೂ ಇತರ ಹೆಚ್ಚಿನ ಮಾಹಿತಿಗೆ ಈ ಲಿಂಕ್ ಕ್ಲಿಕ್ ಮಾಡಿ

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪ್ರಜ್ವಲ್​ ಕುಮಾರ್ ಎನ್​ ವೈ
ಪ್ರಜ್ವಲ್​ ಕುಮಾರ್ ಎನ್​ ವೈ

2017 ಜೂನ್​ನಿಂದ ಟಿವಿ9 ಕನ್ನಡ ವಾಹಿನಿಯಲ್ಲಿ ಕ್ರೈಮ್ ವರದಿಗಾರನಾಗಿ ವೃತ್ತಿ. ಬೆಂಗಳೂರು ನಗರದಲ್ಲಿ ನಡೆಯುವ ಅಪರಾಧ ಕೃತ್ಯಗಳ ಬಗ್ಗೆ ನಿರಂತರ ವರದಿ ಮಾಡುತಿದ್ದೇನೆ. ಮೂಲತಃ ಹಾಸನ ಜಿಲ್ಲೆ ಬೇಲೂರು ತಾಲ್ಲೂಕಿನವನಾಗಿದ್ದು ಹಾಸನ ಮತ್ತು ತುಮಕೂರಿನಲ್ಲಿ ವಿದ್ಯಾಭ್ಯಾಸ ಮುಗಿಸಿದ ನಂತರ ಒಂದು ವರ್ಷ ಜನಶ್ರೀ ಸುದ್ದಿ ವಾಹಿನಿಯಲ್ಲಿ ಕ್ರೈಮ್ ರಿಪೋರ್ಟರ್ ಆಗಿ ಕೆಲಸ ಮಾಡಿ ನಂತರ 2017 ರಿಂದ ಇಲ್ಲಿಯವರೆಗೆ ಟಿವಿ9 ನಲ್ಲಿ ಕೆಲಸ ಮಾಡುತಿದ್ದೇನೆ.

Read More