ಬಳ್ಳಾರಿ ರಸ್ತೆಯಲ್ಲಿ ಎಲಿವೇಟೆಡ್ ಕಾಮಗಾರಿ ಆರಂಭ: ಏರ್​ಪೋರ್ಟ್ ಪ್ರಯಾಣಿಕರಿಗೆ ಇಂದಿನಿಂದ ತಟ್ಟಲಿದೆ ಟ್ರಾಫಿಕ್ ಬಿಸಿ

Updated on: Nov 07, 2026 | 9:14 AM

ಬೆಂಗಳೂರಿನ ಬಳ್ಳಾರಿ ರಸ್ತೆಯಲ್ಲಿ ನಾಲ್ಕು ಪಥದ ಎಲಿವೇಟೆಡ್ ಕಾರಿಡಾರ್ ಕಾಮಗಾರಿ ಆರಂಭವಾಗಿದೆ. ಹೆಬ್ಬಾಳದಿಂದ ಮೆಖ್ರಿ ಸರ್ಕಲ್ ನಡುವೆ ಸಾಗುವ ಈ ರಸ್ತೆಯಲ್ಲಿ ಮುಂದಿನ 18 ತಿಂಗಳ ಕಾಲ ಸರಕು ಸಾಗಣೆ ವಾಹನಗಳು ಹಾಗೂ ಬಸ್‌ಗಳ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ. ಇದರಿಂದ ಸರ್ವೀಸ್ ರಸ್ತೆಯಲ್ಲಿ ಸಂಚಾರ ದಟ್ಟಣೆ ಉಂಟಾಗುವ ಸಾಧ್ಯತೆ ಇದ್ದು, ಬೆಂಗಳೂರು ಟ್ರಾಫಿಕ್ ಪೊಲೀಸರು ಪರ್ಯಾಯ ಮಾರ್ಗಗಳನ್ನು ಪ್ರಕಟಿಸಿದ್ದಾರೆ.

ಬೆಂಗಳೂರು, ನವೆಂಬರ್ 7: ಬೆಂಗಳೂರಿನಿಂದ ದೇವನಹಳ್ಳಿಯ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಬಳ್ಳಾರಿ ರಸ್ತೆಯಲ್ಲಿ ಬಹುನಿರೀಕ್ಷಿತ ನಾಲ್ಕು ಪಥದ ಎಲಿವೇಟೆಡ್ ಕಾರಿಡಾರ್ ಕಾಮಗಾರಿ ಆರಂಭವಾಗಿದೆ. ಹೆಬ್ಬಾಳ ಮತ್ತು ಮೆಖ್ರಿ ಸರ್ಕಲ್ ನಡುವಿನ ಯುಎಎಸ್ ಸ್ಟಾಫ್ ಕ್ವಾಟ್ರಸ್‌ನಿಂದ ಮೆಖ್ರಿ ಸರ್ಕಲ್ ವರೆಗೆ ಬಿಡಿಎ ವತಿಯಿಂದ ಈ ಯೋಜನೆಯನ್ನು ಕೈಗೊಳ್ಳಲಾಗಿದೆ. ನವೆಂಬರ್ 6ರಿಂದ ಆರಂಭವಾಗಿರುವ ಈ ಕಾಮಗಾರಿಯು ಮುಂದಿನ 18 ತಿಂಗಳ ಕಾಲ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಬಳ್ಳಾರಿ ರಸ್ತೆ ಸರ್ವೀಸ್ ರಸ್ತೆಯಲ್ಲಿ ಸಂಚಾರ ದಟ್ಟಣೆ ಉಂಟಾಗುವ ಸಾಧ್ಯತೆಗಳಿದ್ದು, ವಾಹನ ಸವಾರರು ಎಚ್ಚರಿಕೆ ವಹಿಸಬೇಕಿದೆ. ನಿರ್ಮಾಣ ಕಾರ್ಯದಿಂದಾಗಿ ಕೆಎಸ್ಆರ್‌ಟಿಸಿ, ಬಿಎಂಟಿಸಿ, ಖಾಸಗಿ ಬಸ್‌ಗಳು ಹಾಗೂ ಎಲ್ಲಾ ರೀತಿಯ ಸರಕು ಸಾಗಣೆ ವಾಹನಗಳ ಸಂಚಾರಕ್ಕೆ ಸಂಪೂರ್ಣವಾಗಿ ನಿರ್ಬಂಧ ವಿಧಿಸಲಾಗಿದೆ. ಕಾರುಗಳು, ದ್ವಿಚಕ್ರ ವಾಹನಗಳು ಮತ್ತು ಆಟೋರಿಕ್ಷಾಗಳಂತಹ ಲಘು ವಾಹನಗಳಿಗೆ ಮಾತ್ರ ಸಂಚಾರಕ್ಕೆ ಅನುಮತಿ ಇರಲಿದೆ.

ಟ್ರಾಫಿಕ್ ಪೊಲೀಸರು ಈಗಾಗಲೇ ಪರ್ಯಾಯ ಮಾರ್ಗಗಳ ಬಗ್ಗೆ ಸೂಚನೆಗಳನ್ನು ನೀಡಿದ್ದಾರೆ. ವಿಮಾನ ನಿಲ್ದಾಣದಿಂದ ನಗರದ ಕಡೆಗೆ ಬರುವ ವಾಹನಗಳು ಮತ್ತು ಯಶವಂತಪುರದಿಂದ ವಿಮಾನ ನಿಲ್ದಾಣಕ್ಕೆ ತೆರಳುವ ವಾಹನಗಳು ಸೂಚಿತ ಪರ್ಯಾಯ ಮಾರ್ಗಗಳನ್ನು ಬಳಸಬೇಕಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More