AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಏರ್‌ಪೋರ್ಟ್​ನಲ್ಲಿ ಕೋಟ್ಯಂತರ ರೂ. ಮೌಲ್ಯದ ಚಿನ್ನ, ವಜ್ರ ಕಳ್ಳತನ! ಸಿಬ್ಬಂದಿ ಮೇಲೆ ಅನುಮಾನ

ಬೆಂಗಳೂರು ಏರ್‌ಪೋರ್ಟ್​ನಲ್ಲಿ ಕೋಟ್ಯಂತರ ರೂ. ಮೌಲ್ಯದ ಚಿನ್ನ, ವಜ್ರ ಕಳ್ಳತನ! ಸಿಬ್ಬಂದಿ ಮೇಲೆ ಅನುಮಾನ

ಭಾವನಾ ಹೆಗಡೆ
|

Updated on: Feb 06, 2026 | 12:59 PM

Share

ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೆಲ ದಿನಗಳ ಹಿಂದೆ ಚಿನ್ನ ಮತ್ತು ವಜ್ರಾಭರಣ ಕಳ್ಳತನವಾಗಿರುವ ಘಟನೆ ವರದಿಯಾಗಿದೆ. ಮಹಿಳಾ ಪ್ರಯಾಣಿಕರೊಬ್ಬರ ಬ್ಯಾಗ್‌ನಿಂದ ಕೋಟಿ ಮೌಲ್ಯದ ಆಭರಣಗಳು ಮಾಯವಾಗಿವೆ. ಬೆಂಗಳೂರಿನಿಂದ ದುಬೈಗೆ ಪ್ರಯಾಣಿಸುತ್ತಿದ್ದ ಹುಬ್ಬಳ್ಳಿ ಮೂಲದ ಮಹಿಳೆಯೊಬ್ಬರಿಗೆ ಈ ಕಹಿ ಅನುಭವವಾಗಿದೆ. ಅವರ ಬ್ಯಾಗ್‌ನಲ್ಲಿದ್ದ 790 ಗ್ರಾಂ ಚಿನ್ನ ಮತ್ತು ಸುಮಾರು 8 ಲಕ್ಷ ರೂಪಾಯಿ ಮೌಲ್ಯದ ವಜ್ರ ಕಳುವಾಗಿದೆ ಎಂದು ತಿಳಿದುಬಂದಿದೆ.

ದೇವನಹಳ್ಳಿ, ಫೆಬ್ರುವರಿ 06: ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೆಲ ದಿನಗಳ ಹಿಂದೆ ಚಿನ್ನ ಮತ್ತು ವಜ್ರಾಭರಣ ಕಳ್ಳತನವಾಗಿರುವ ಘಟನೆ ವರದಿಯಾಗಿದೆ. ಮಹಿಳಾ ಪ್ರಯಾಣಿಕರೊಬ್ಬರ ಬ್ಯಾಗ್‌ನಿಂದ ಕೋಟಿ ಮೌಲ್ಯದ ಆಭರಣಗಳು ಮಾಯವಾಗಿವೆ. ಬೆಂಗಳೂರಿನಿಂದ ದುಬೈಗೆ ಪ್ರಯಾಣಿಸುತ್ತಿದ್ದ ಹುಬ್ಬಳ್ಳಿ ಮೂಲದ ಮಹಿಳೆಯೊಬ್ಬರಿಗೆ ಈ ಕಹಿ ಅನುಭವವಾಗಿದೆ. ಅವರ ಬ್ಯಾಗ್‌ನಲ್ಲಿದ್ದ 790 ಗ್ರಾಂ ಚಿನ್ನ ಮತ್ತು ಸುಮಾರು 8 ಲಕ್ಷ ರೂಪಾಯಿ ಮೌಲ್ಯದ ವಜ್ರ ಕಳುವಾಗಿದೆ ಎಂದು ತಿಳಿದುಬಂದಿದೆ.

ಪ್ರಯಾಣಿಕರ ಬ್ಯಾಗ್‌ನಲ್ಲಿ ಚಿನ್ನಾಭರಣಗಳು ಇರುವುದನ್ನು ವಿಮಾನ ನಿಲ್ದಾಣದ ಸಿಬ್ಬಂದಿ ತಪಾಸಣೆ ಮಾಡಿ, ಟ್ಯಾಗ್ ಮಾಡಿದ್ದರು. ಆದರೆ ದುಬೈ ತಲುಪಿದಾಗ ಬ್ಯಾಗ್‌ನಲ್ಲಿ ಆಭರಣಗಳು ಇರಲಿಲ್ಲ. ಈ ಕಳ್ಳತನದ ಹಿಂದೆ ವಿಮಾನ ನಿಲ್ದಾಣದ ಸಿಬ್ಬಂದಿಯ ಕೈವಾಡವಿರುವ ಬಗ್ಗೆ ಶಂಕೆ ವ್ಯಕ್ತಪಡಿಸಲಾಗಿದೆ. ಸಂತ್ರಸ್ತ ಮಹಿಳೆ ಕೆಂಪೇಗೌಡ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Bhavana Hegde
Bhavana Hegde

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More