ಏರ್‌ಪೋರ್ಟ್‌ನಲ್ಲೇ ಹೈಟೆಕ್ ಭಿಕ್ಷಾಟನೆ: ಸಿಐಎಸ್‌ಎಫ್‌ ಕೈಗೆ ಸಿಕ್ಕಿಬಿದ್ದ ದೆಹಲಿ ಮೂಲದ ಖದೀಮ!

Edited By:

Updated on: Oct 10, 2026 | 11:19 AM

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದೆಹಲಿ ಮೂಲದ ಅಮೀನ್ ಎಂಬ ವ್ಯಕ್ತಿಯನ್ನು ಹೈಟೆಕ್ ಭಿಕ್ಷಾಟನೆ ಆರೋಪದಡಿ ವಶಕ್ಕೆ ಪಡೆಯಲಾಗಿದೆ. ಬ್ಯಾಗ್, ಪರ್ಸ್ ಕಳೆದು ಹೋಗಿದೆ ಎಂದು ಹೇಳಿ ಪ್ರಯಾಣಿಕರಿಂದ QR ಕೋಡ್ ಮೂಲಕ ಹಣ ಹಾಕಿಸಿಕೊಂಡು ವಂಚಿಸುತ್ತಿದ್ದ. ಈತನ ಮೊಬೈಲ್ ಪರಿಶೀಲಿಸಿದಾಗ ಹಲವು ಹಣಕಾಸಿನ ವಹಿವಾಟುಗಳು ಪತ್ತೆಯಾಗಿವೆ. ಇದೊಂದು ದೊಡ್ಡ ಜಾಲದ ಭಾಗವಾಗಿರುವ ಶಂಕೆ ವ್ಯಕ್ತವಾಗಿದೆ.

ದೇವನಹಳ್ಳಿ, ಅಕ್ಟೋಬರ್ 10: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿನೂತನ ಮಾದರಿಯ ಭಿಕ್ಷಾಟನೆ ನಡೆಸುತ್ತಿದ್ದ ದೆಹಲಿ ಮೂಲದ ಅಮೀನ್ ಎಂಬ ವ್ಯಕ್ತಿಯನ್ನು ವಶಕ್ಕೆ ಪಡೆಯಲಾಗಿದೆ. ಪ್ರಯಾಣಿಕರ ಬಳಿ ಬ್ಯಾಗ್ ಅಥವಾ ಪರ್ಸ್ ಕಳೆದುಹೋಗಿದೆ ಎಂದು ಹೇಳಿ ಹಣವನ್ನು ಕೇಳುತ್ತಿದ್ದ ಈತ, QR ಕೋಡ್ ಮೂಲಕ ಹಣ ಹಾಕಿಸಿಕೊಂಡು ಸಾವಿರಾರು ರೂಪಾಯಿ ಸಂಗ್ರಹಿಸುತ್ತಿದ್ದ.

ಸಿಐಎಸ್ಎಫ್ ಸಿಬ್ಬಂದಿ ಈತನ ನಡವಳಿಕೆಯ ಬಗ್ಗೆ ಸಂಶಯಗೊಂಡು ಮೊಬೈಲ್ ಪರಿಶೀಲನೆ ನಡೆಸಿದಾಗ, ಹಲವು ಹಣಕಾಸಿನ ವಹಿವಾಟುಗಳು ಬೆಳಕಿಗೆ ಬಂದಿವೆ. ಅಮೀನ್ ಬೆಂಗಳೂರಿನಿಂದ ಮುಂಬೈಗೆ ವಿಮಾನ ಟಿಕೆಟ್ ಅನ್ನು ಸಹ ಬುಕ್ ಮಾಡಿಕೊಂಡಿದ್ದ. ನಿಗದಿತ ಸಮಯಕ್ಕಿಂತ ಬಹಳ ಮುಂಚೆಯೇ ವಿಮಾನ ನಿಲ್ದಾಣಕ್ಕೆ ಬಂದು ಭಿಕ್ಷಾಟನೆ ನಡೆಸುತ್ತಿದ್ದ. ವಿಮಾನ ನಿಲ್ದಾಣ ಪೊಲೀಸರು ಈತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ, ಮುಂಬೈ ಸೇರಿದಂತೆ ಇತರೆ ಏರ್‌ಪೋರ್ಟ್‌ಗಳಲ್ಲೂ ಇದೇ ರೀತಿಯ ಭಿಕ್ಷಾಟನೆ ದಂಧೆಯಲ್ಲಿ ತೊಡಗಿರುವ ಗ್ಯಾಂಗ್ ಇದೆ ಎಂದು ಪ್ರಾಥಮಿಕ ಮಾಹಿತಿ ಸಿಕ್ಕಿದೆ. ಎಚ್ಚರಿಕೆ ನೀಡಿ ಪೊಲೀಸರು ಆತನನ್ನು ಕಳುಹಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ನವೀನ್ ಕುಮಾರ್ ಟಿ.

ನವೀನ್ ಕುಮಾರ್ ಟಿ ರವರು ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡದ ದೇವನಹಳ್ಳಿ, ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಎಂಎಸ್​ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ಇವರು ಪದವಿ ಶಿಕ್ಷಣ ಮುಗಿದ ನಂತರ ಟಿವಿ9 ಕನ್ನಡದಲ್ಲಿ ವರದಿಗಾರರಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದಾರೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಹುದ್ದೆಯನ್ನು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಿದ್ದಾರೆ.

Read More