ಹೊಸ ವರ್ಷ ಸಂಭ್ರಮಾಚರಣೆ; ಬ್ರಿಗೇಡ್ ರಸ್ತೆಯಲ್ಲಿ ಪೊಲೀಸ್ ತಯಾರಿ ಅಹಿತಕರ ಘಟನೆಗಳಿಗೆ ಅವಕಾಶ ನೀಡದು

ಅರುಣ್​ ಕುಮಾರ್​ ಬೆಳ್ಳಿ

Updated on: Dec 31, 2024 | 12:49 PM

ಶ್ರೀಕರ ಹೇಳುವ ಪ್ರಕಾರ ಅವರ ಸಂಸ್ಥೆಯು ಬ್ರಿಗೇಡ್ ರಸ್ತೆಯಲ್ಲಿ ಸುಮಾರು 65 ಮತ್ತು ಎಂಜಿ ರಸ್ತೆಯಲ್ಲಿ ಸುಮಾರು 85 ಸಿಸಿಟಿವಿ ಕೆಮೆರಾಗಳನ್ನು ಅಳವಡಿಸಿದ್ದು ಇವು ಪೊಲೀಸ್ ಕಂಟ್ರೋಲ್ ರೂಮಿಗೆ ಲೈವ್ ಫೀಡ್ ಒದಗಿಸುತ್ತವೆ. ಇವಲ್ಲದೆ ಪೊಲೀಸ್ ಇಲಾಖೆ ಅಳವಡಿಸಿರುವ ಕೆಮೆರಾಗಳು ಸಹ ಕಾರ್ಯನಿರತವಾಗಿರುತ್ತವೆ, ಸಾಯಂಕಾಲದ ನಂತರ ಮೂರು ಡ್ರೋಣ್ ಕೆಮೆರಾಗಳು ಈ ಪ್ರದೇಶಗಳಲ್ಲಿ ಹಾರಾಡುತ್ತಾ ವಿಹಂಗಮ ಫೀಡನ್ನು ಪೊಲೀಸರಿಗೆ ನೀಡಲಿವೆ.

ಬೆಂಗಳೂರು: ಹೊಸ ವರ್ಷದ ಸಂಭ್ರಮಾಚರಣೆಗೆ ಬೆಂಗಳೂರು ಸರ್ವಸನ್ನದ್ಧವಾಗಿದೆ ಮತ್ತು ಆಚರಣೆಯ ಸಂದರ್ಭದಲ್ಲಿ ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆಯಾಗದಿರುವ ಹಾಗೆ ಭದ್ರತೆ ವ್ಯವಸ್ಥೆಯನ್ನು ನಗರ ಪೊಲೀಸ್ ಮಾಡಿದ್ದಾರೆ. ಬ್ರಿಗೇಡ್ ರಸ್ತೆ, ಎಂಜಿ ರೋಡ್ ಮತ್ತು ಚರ್ಚ್ ಸ್ಟ್ರೀಟ್​ಗಳಲ್ಲಿ ಹೆಚ್ಚು ಜನ ಸೇರುತ್ತಾರೆ ಹಾಗಾಗಿ ಈ ಪ್ರದೇಶಗಳಲ್ಲಿ ಹೆಚ್ಚಿನ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ನಮ್ಮ ಬೆಂಗಳೂರು ವರದಿಗಾರ ಬ್ರಿಗೇಡ್ ರಸ್ತೆಯಲ್ಲಿ ಪೊಲೀಸರು ಮಾಡಿರುವ ಭದ್ರತಾ ವ್ಯವಸ್ಥೆಯ ಬಗ್ಗೆ ವಿವರಣೆ ನೀಡಿದ್ದಾರೆ ಮತ್ತು ಸಿಸಿಟಿವಿ ಕೆಮೆರಾ ಅಳವಡಿಸಿ ಅದಕ್ಕೆ ಸಂಬಂಧಿಸಿದ ಎಲ್ಲ ತಂತ್ರಜ್ಞಾನವನ್ನು ಪೊಲೀಸರಿಗೆ ಒದಗಿಸಿರುವ ಸಂಸ್ಥೆಯೊಂದರ ಪ್ರತಿನಿಧಿ ಶ್ರೀಕರ ಅವರೊಂದಿಗೂ ಮಾತಾಡಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಗುಡ್ ನ್ಯೂಸ್: ಹೊಸ ವರ್ಷದ ಸಂಭ್ರಮಾಚರಣೆಗೆ ನಮ್ಮ ಮೆಟ್ರೋ ಸೇವೆ ಅವಧಿ ವಿಸ್ತರಣೆ

Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.