AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಳೆಗಾಲ ಕೊನೆಗೊಂಡರೂ ಬೆಂಗಳೂರು ನಗರ ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ರಾತ್ರಿ ಧಾರಾಕಾರ ಮಳೆ!

ಮಳೆಗಾಲ ಕೊನೆಗೊಂಡರೂ ಬೆಂಗಳೂರು ನಗರ ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ರಾತ್ರಿ ಧಾರಾಕಾರ ಮಳೆ!

ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on: Oct 09, 2023 | 10:55 AM

Share

ನಗರದ ಮೆಜೆಸ್ಟಿಕ್, ಶಾಂತಿನಗರ, ಕೆಆರ್ ಮಾರ್ಕೆಟ್, ಬನಶಂಕರಿ, ಜಯನಗರ, ವಿಜಯನಗರ, ರಾಜಾಜಿನಗರ, ಹೆಗಡೆ ನಗರ, ಕೊತ್ತನೂರು, ಯಲಹಂಕ, ಹೆಣ್ಣೂರು ಪ್ರದೇಶಗಳು ಸೇರಿದಂತೆ ಹಲವಾರು ಭಾಗಗಳಲ್ಲಿ ಧಾರಾಕಾರವಾಗಿ ಮಳೆ ಸುರಿದಿದೆ. ಸೋಮವಾರ ಬೆಳಗ್ಗೆಯೂ ಕೆಲವು ಪ್ರದೇಶಗಳಲ್ಲಿ ತುಂತುರು ಮಳೆಯಾಗುತಿತ್ತು.

ಬೆಂಗಳೂರು:  ಮಳೆಗಾಲದಲ್ಲಿ (rainy season) ಸುರಿಯದ ಮಳೆ ನಿನ್ನೆ ನಗರದಲ್ಲಿ ರಾತ್ರಿ ಸುರಿದಿದೆ. ವೀಕೆಂಡ್ (weekend) ಅಂತ ಹೊರಗಡೆ ಸುತ್ತಲು, ಶಾಪಿಂಗ್ ಮಾಡಲು ಹೋದವರು ಜೋರಾಗಿ ಸುರಿಯಲಾರಂಭಿಸಿದ ಮಳೆಯಿಂದಾಗಿ ತಾವು ಮನೆಯಿಂದ ಹೊರಬಿದ್ದ ಘಳಿಗೆಯನ್ನು ಶಪಿಸಿಕೊಂಡರು. ಆದರೆ, ಸೀಸನ್ (season) ಯಾವುದಾದರೇನು? ಬೆಂಗಳೂರು ಮಾತ್ರವಲ್ಲ, ಇಡೀ ರಾಜ್ಯಕ್ಕೆ ಮಳೆ ಬೇಕಾಗಿದೆ. ಕಾವೇರಿ ಜಲಾನಯನ ಪ್ರದೇಶದಲ್ಲಿ ಕೊರತೆ ಮಳೆಯ ಕಾರಣ ಬೇಸಿಗೆಯಲ್ಲಿ ಬೆಂಗಳೂರು ನಿವಾಸಿಗಳಿಗೆ ಕುಡಿಯಲು ನೀರು ಸಿಗದ ಸ್ಥಿತಿ ನಿರ್ಮಾಣವಾಗುವ ಸಾಧ್ಯತೆ ಇದೆ. ಹಾಗಾಗಿ ಮಳೆ ಬೇಕೇಬೇಕು ವರುಣಮ ಕೃಪೆ ಮುಂದುವರಿಯಬೇಕು. ನಗರದ ಮೆಜೆಸ್ಟಿಕ್, ಶಾಂತಿನಗರ, ಕೆಆರ್ ಮಾರ್ಕೆಟ್, ಬನಶಂಕರಿ, ಜಯನಗರ, ವಿಜಯನಗರ, ರಾಜಾಜಿನಗರ, ಹೆಗಡೆ ನಗರ, ಕೊತ್ತನೂರು, ಯಲಹಂಕ, ಹೆಣ್ಣೂರು ಪ್ರದೇಶಗಳು ಸೇರಿದಂತೆ ಹಲವಾರು ಭಾಗಗಳಲ್ಲಿ ಧಾರಾಕಾರವಾಗಿ ಮಳೆ ಸುರಿದಿದೆ. ಸೋಮವಾರ ಬೆಳಗ್ಗೆಯೂ ಕೆಲವು ಪ್ರದೇಶಗಳಲ್ಲಿ ತುಂತುರು ಮಳೆಯಾಗುತಿತ್ತು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.