ಕನ್ನಡ ಮಾತನಾಡದಂತೆ ಹಾಸ್ಟೆಲ್ ವಾರ್ಡನ್ ಧಮ್ಕಿ: ಬೆಂಗಳೂರಿನ ಕಾಲೇಜು ಮುಂಭಾಗ ಭಾರಿ ಪ್ರತಿಭಟನೆ
ಬನ್ನೇರುಘಟ್ಟ ರಸ್ತೆಯ ಕಲ್ಕೆರೆ ಬಳಿ ಇರುವ ಪ್ರತಿಷ್ಠಿತ ಕಾಲೇಜಿನಲ್ಲಿ ಕನ್ನಡ ಮಾತನಾಡದಂತೆ ಹಾಸ್ಟೆಲ್ ವಾರ್ಡನ್ ಧಮ್ಕಿ ಹಾಕಿರುವ ವಿಚಾರ ಇದೀಗ ತೀವ್ರ ಪ್ರತಿಭಟನೆಗೆ ಕಾರಣವಾಗಿದೆ. ಕರ್ನಾಟಕ ರಕ್ಷಣಾ ವೇದಿಕೆ ಮತ್ತು ಇತರ ಕನ್ನಡ ಪರ ಸಂಘಟನೆಗಳು, ಕಾಲೇಜು ಮುಂಭಾಗ ಪ್ರತಿಭಟನೆ ನಡೆಸಿವೆ. ಪ್ರತಿಭಟನೆಯ ವಿಡಿಯೋ ಇಲ್ಲಿದೆ.
ಬೆಂಗಳೂರು, ಜನವರಿ 5: ಕನ್ನಡ ಮಾತನಾಡದಂತೆ ಹಾಸ್ಟೆಲ್ ವಾರ್ಡನ್ ಧಮ್ಕಿ ಹಾಕಿರುವುದನ್ನು ಖಂಡಿಸಿ ಬೆಂಗಳೂರಿನ ಆನೇಕಲ್ ತಾಲೂಕಿನ ಬನ್ನೇರುಘಟ್ಟ ರಸ್ತೆಯ ಕಲ್ಕೆರೆ ಸಮೀಪದ ಪ್ರತಿಷ್ಠಿತ ಖಾಸಗಿ ಕಾಲೇಜಿನ ಆವರಣದಲ್ಲಿ ಕನ್ನಡಪರ ಸಂಘಟನೆಗಳು ಸೋಮವಾರ ಭಾರಿ ಪ್ರತಿಭಟನೆ ನಡೆಸಿದವು. ಪರಿಣಾಮವಾಗಿ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿಗಳ ಇಂದು ನಡೆಯಬೇಕಿದ್ದ ಇಂಟರ್ನಲ್ ಪರೀಕ್ಷೆ ಮುಂದೂಡಿಕೆಯಾಗಿದೆ. ಪ್ರತಿಭಟನೆ ತೀವ್ರಗೊಳ್ಳುತ್ತಿದ್ದಂತೆಯೇ ಎಚ್ಚೆತ್ತುಕೊಂಡಿರುವ ಕಾಲೇಜು ಆಡಳಿತ ಮಂಡಳಿ, ಹಾಸ್ಟೆಲ್ ವಾರ್ಡನ್ ಸುರೇಶ್ ಎಂಬವರನ್ನು ಕೆಲಸದಿಂದ ವಜಾಗೊಳಿಸಿದೆ.
ಕನ್ನಡ ಮಾತನಾಡಿದ ವಾರ್ಡನ್ ದಬ್ಬಾಳಿಕೆ ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಕಾಲೇಜು ಮುಂಭಾಗ ಪ್ರತಿಭಟನೆ ನಡೆಸಿದ್ದಾರೆ. ‘ಕರ್ನಾಟಕದ ಖಾಸಗಿ ಕಾಲೇಜುಗಳಲ್ಲಿ ಕರ್ನಾಟಕದ ವಿದ್ಯಾರ್ಥಿಗಳ ಮೇಲೆ ದೌರ್ಜನ್ಯ ನಿಲ್ಲಬೇಕು. ಉಪನ್ಯಾಸಕರ ಮೇಲಿನ ದಬ್ಬಾಳಿಕೆ ನಿಲ್ಲಬೇಕು’ ಎಂದು ಕಾರ್ಯಕರ್ತರು ಘೋಷಣೆಗಳನ್ನು ಕೂಗಿದರು.
ಇದನ್ನೂ ಓದಿ: ಕನ್ನಡ ಮಾತನಾಡದಂತೆ ಧಮ್ಕಿ ಹಾಕಿದ ಹಾಸ್ಟೆಲ್ ವಾರ್ಡನ್: ವಿಡಿಯೋ ವೈರಲ್
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್ ಮಾತು
ರಾಜಶೇಖರ್ ತಾಯಿಗೆ ಡಿಕೆ ಶಿವಕುಮಾರ್ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ಸನ್ರೂಫ್ ಬಳಿ ನಿಂತು ಕೈ ಬೀಸುತ್ತಿದ್ದಾಗ ಬ್ರೇಕ್ ಹಾಕಿದ ಕಾರು
ಡ್ರಗ್ಸ್ ದಂಧೆಕೋರರಿಗೆ ಶಾಕ್: 3 ಕೆ.ಜಿ. MDMA ಸೀಜ್, ಇಬ್ಬರು ಅರೆಸ್ಟ್

