Video: ಬೆಂಗಳೂರಿನಲ್ಲಿ ಸಾಕು ಪ್ರಾಣಿಗಳ ಮಾರಣಹೋಮ

Updated on: Dec 11, 2025 | 12:57 PM

ಬೆಂಗಳೂರಿನ ಬಾಣಸವಾಡಿಯಲ್ಲಿ 50ಕ್ಕೂ ಹೆಚ್ಚು ನಾಯಿಗಳು, ಬೆಕ್ಕುಗಳು ಹಾಗೂ ಮರಿಗಳನ್ನು ಕ್ರೂರವಾಗಿ ಹತ್ಯೆ ಮಾಡಲಾಗಿದೆ. ಖಾಸಗಿ ಮೈದಾನದಲ್ಲಿ ನಡೆದ ಈ ಪ್ರಾಣಿ ಮಾರಣಹೋಮದ ಬಗ್ಗೆ ಬಾಣಸವಾಡಿ ಪೊಲೀಸರಿಗೆ ದೂರು ನೀಡಿದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಈ ಅಮಾನವೀಯ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಬೆಂಗಳೂರು, ಡಿ.11: ಬೆಂಗಳೂರಿನಲ್ಲಿ ಪ್ರಾಣಿಗಳ ಮಾರಣಹೋಮ ನಡೆದಿದೆ. ಬಾಣಸವಾಡಿ ಬಳಿಯ ಖಾಸಗಿ ಮೈದಾನದಲ್ಲಿ ಪ್ರಾಣಿಗಳನ್ನು ಹತ್ಯೆ ಮಾಡಲಾಗಿದೆ. ನಾಯಿ, ಬೆಕ್ಕು ಹಾಗೂ ಬೆಕ್ಕಿನ ಮರಿಗಳ ಮೇಲೆ ದಾರುಣ ಹಲ್ಲೆ ನಡೆಸಲಾಗಿದೆ. ಮಾನವೀಯತೆ ಮರೆತು ಸಾಕುಪ್ರಾಣಿಗಳ ಮೇಲೆ ವಿಕೃತಿ ಮೆರೆದಿದ್ದಾರೆ. ಈ ಬಗ್ಗೆ ಬಾಣಸವಾಡಿ ಪೊಲೀಸ್ ಠಾಣೆಗೆ ದೂರು ನೀಡಿದರೂ ಯಾವುದೇ ಪ್ರಯೋಜನ ಆಗಿಲ್ಲ. ಬಾಣಸವಾಡಿ ಬಳಿಯ ಪಂಚಮುಖಿ ದೇವಸ್ಥಾನದ ಬಳಿಯ ಮೈದಾನದಲ್ಲಿ ಸುಮಾರು 50ಕ್ಕೂ ಹೆಚ್ಚು ಪ್ರಾಣಿಗಳನ್ನು ಕೊಲ್ಲಲಾಗಿದೆ ಎಂದು ಸ್ಥಳೀಯರು ಹೇಳಿದ್ದಾರೆ. ಈ ಬಗ್ಗೆ ವಿಡಿಯೋವೊಂದು ವೈರಲ್​ ಆಗಿದೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Akshay Pallamajalu

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More