ಬೆಂಗಳೂರು: ಹೆದ್ದಾರಿಯಲ್ಲಿ ವೀಲಿಂಗ್ ಮಾಡ್ತಿದ್ದ 6ಜನ ಪುಂಡರ ಬಂಧನ; 13 ಬೈಕ್ ಜಪ್ತಿ
ಇತ್ತೀಚೆಗೆ ವೀಲಿಂಗ್ ಪುಂಡರ ಹಾವಳಿ ಹೆಚ್ಚಾಗಿದೆ. ಅದರಲ್ಲೂ ಹಬ್ಬಗಳ ಸಮಯದಲ್ಲಿ ಹೆ್ದ್ದಾರಿಗೆ ಇಳಿಯುವ ಈ ಪುಂಡರು, ಅಪಾಯಕಾರಿ ವೀಲಿಂಗ್ ಮೂಲಕ ಇತರ ವಾಹನ ಸವಾರರಿಗೆ ತೊಂದರೆ ಕೊಡುತ್ತಿದ್ದರು. ಈ ಹಿನ್ನಲೆ ಸವಾರರು ಹಲವಾರು ಬಾರಿ ದೂರುಗಳನ್ನು ಕೂಡ ಕೊಟ್ಟಿದ್ದರು. ಇದರಿಂದ ಎಚ್ಚೆತ್ತ ನೆಲಮಂಗಲ ಸಂಚಾರಿ ಪೊಲೀಸರು, ಪ್ಲ್ಯಾನ್ ಮಾಡಿ ಬಂಧಿಸಿದ್ದಾರೆ.
ಬೆಂಗಳೂರು ಗ್ರಾಮಾಂತರ, ಮಾ.10: ರಾಷ್ಟ್ರೀಯ ಹೆದ್ದಾರಿಯಲ್ಲಿ ವೀಲಿಂಗ್ ಮಾಡುತ್ತಿದ್ದ ಆರು ಜನ ಪುಂಡರನ್ನು ಬಂಧಿಸಿದ ಘಟನೆ ಬೆಂಗಳೂರು ಗ್ರಾಮಾಂತರ(Bengaluru Rural) ಜಿಲ್ಲೆಯ ನೆಲಮಂಗಲ ತಾಲೂಕಿನಲ್ಲಿ ನಡೆದಿದೆ. ಈ ಕುರಿತು ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, 13ಬೈಕ್ಗಳನ್ನು ಜಪ್ತಿ ಮಾಡಲಾಗಿದೆ. ಇವರು ಶಿವರಾತ್ರಿ ಸೇರಿದಂತೆ ಇತರೆ ಹಬ್ಬಗಳ ಸಂದರ್ಭಗಳಲ್ಲಿ ಅಪಾಯಕಾರಿ ವೀಲಿಂಗ್ ಮಾಡುವ ಮೂಲಕ ಇತರೆ ವಾಹನ ಸವಾರರಿಗೆ ತೊಂದರೆ ಕೊಡುತ್ತಿದ್ದರು. ಈ ಹಿನ್ನಲೆ ಪ್ಲ್ಯಾನ್ ಮಾಡಿದ ಪೊಲೀಸರು, ಮೊದಲು ವೀಲಿಂಗ್ ದೃಶ್ಯವನ್ನ ಸರೆ ಹಿಡಿದು ಆರೋಪಿಗಳನ್ನು ಬಂಧಿಸಿದ್ದಾರೆ.
ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ
Published on: Mar 10, 2024 09:18 AM
Follow Us
Latest Videos
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
