ಬೆಂಗಳೂರು: ಹೆದ್ದಾರಿಯಲ್ಲಿ ವೀಲಿಂಗ್ ಮಾಡ್ತಿದ್ದ 6ಜನ ಪುಂಡರ ಬಂಧನ; 13 ಬೈಕ್ ಜಪ್ತಿ

Edited By:

Updated on: Mar 10, 2024 | 9:19 AM

ಇತ್ತೀಚೆಗೆ ವೀಲಿಂಗ್​ ಪುಂಡರ ಹಾವಳಿ ಹೆಚ್ಚಾಗಿದೆ. ಅದರಲ್ಲೂ ಹಬ್ಬಗಳ ಸಮಯದಲ್ಲಿ ಹೆ್ದ್ದಾರಿಗೆ ಇಳಿಯುವ ಈ ಪುಂಡರು, ಅಪಾಯಕಾರಿ ವೀಲಿಂಗ್​ ಮೂಲಕ ಇತರ ವಾಹನ ಸವಾರರಿಗೆ ತೊಂದರೆ ಕೊಡುತ್ತಿದ್ದರು. ಈ ಹಿನ್ನಲೆ ಸವಾರರು ಹಲವಾರು ಬಾರಿ ದೂರುಗಳನ್ನು ಕೂಡ ಕೊಟ್ಟಿದ್ದರು. ಇದರಿಂದ ಎಚ್ಚೆತ್ತ ನೆಲಮಂಗಲ ಸಂಚಾರಿ ಪೊಲೀಸರು, ಪ್ಲ್ಯಾನ್​ ಮಾಡಿ ಬಂಧಿಸಿದ್ದಾರೆ.

ಬೆಂಗಳೂರು ಗ್ರಾಮಾಂತರ, ಮಾ.10: ರಾಷ್ಟ್ರೀಯ ಹೆದ್ದಾರಿಯಲ್ಲಿ ವೀಲಿಂಗ್ ಮಾಡುತ್ತಿದ್ದ ಆರು ಜನ ಪುಂಡರನ್ನು ಬಂಧಿಸಿದ ಘಟನೆ ಬೆಂಗಳೂರು ಗ್ರಾಮಾಂತರ(Bengaluru Rural) ಜಿಲ್ಲೆಯ ನೆಲಮಂಗಲ ತಾಲೂಕಿನಲ್ಲಿ ನಡೆದಿದೆ. ಈ ಕುರಿತು ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, 13ಬೈಕ್​ಗಳನ್ನು ಜಪ್ತಿ ಮಾಡಲಾಗಿದೆ. ಇವರು ಶಿವರಾತ್ರಿ ಸೇರಿದಂತೆ ಇತರೆ ಹಬ್ಬಗಳ ಸಂದರ್ಭಗಳಲ್ಲಿ ಅಪಾಯಕಾರಿ ವೀಲಿಂಗ್ ಮಾಡುವ ಮೂಲಕ ಇತರೆ ವಾಹನ ಸವಾರರಿಗೆ ತೊಂದರೆ ಕೊಡುತ್ತಿದ್ದರು. ಈ ಹಿನ್ನಲೆ ಪ್ಲ್ಯಾನ್​ ಮಾಡಿದ ಪೊಲೀಸರು, ಮೊದಲು ವೀಲಿಂಗ್ ದೃಶ್ಯವನ್ನ ಸರೆ ಹಿಡಿದು ಆರೋಪಿಗಳನ್ನು ಬಂಧಿಸಿದ್ದಾರೆ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

Published on: Mar 10, 2024 09:18 AM
Follow Us
ಬಿ ಮೂರ್ತಿ, ನೆಲಮಂಗಲ

ದೊಡ್ಡಬಳ್ಳಾಪುರ ತಾಲ್ಲೂಕಿನ ಮಧುರೆ ಹೋಬಳಿಯ ಬೀರಯ್ಯನಪಾಳ್ಯದ ಮೂರ್ತಿ.ಬಿ.ನಾನು ಓದಿದ್ದು ಪಿಯುಸಿ,ಹೆಸರಘಟ್ಟ ಫಿಲ್ಮ್ ಆ್ಯಂಡ್ ಟಿವಿ ಕಾಲೇಜಿನಲ್ಲಿ ಕೆಲಸಗಾರನಾಗಿ ಕ್ಯಾಮರಾ ಕಲಿತು ದಿನಪತ್ರಿಕೆಗಳಿಗೆ ಪೋಟೋ ಕಳಿಸುವ ಕೆಲಸ ಬಳಿಕ 17ವರ್ಷದ ಹಿಂದೆ ನೇರವಾಗಿ ಟಿವಿನೈ ನಲ್ಲಿ ಕ್ಯಾಮರಾಮೆನ್ ಕೆಲಸಕ್ಕೆ ಸೇರಲಾಯಿತು. ಕಳೆದ 6ವರ್ಷದ ಹಿಂದೆ ಇದ್ದಕ್ಕಿದ್ದಂತೆ ಕ್ರೈಂ ಸಿಟಿ,ರಕ್ತಮಂಗಲ ಅಂತೆಲ್ಲ ಖ್ಯಾತಿ ಪಡೆದಿದ್ದ ನೆಲಮಂಗಲಕ್ಕೆ ಕ್ಯಾಮರಾ ಮ್ಯಾನ್ ಹಾಗೂ ವರದಿಗಾರನಾಗಿ ಕೆಲಸ ಮಾಡುವ ಅವಕಾಶ ನಮ್ಮ ಸೀನಿಯರ್ ಗಳಿಂದ ಕೂಡಿ ಬಂತು,ತನಗಿಂತ ಚನ್ನಾಗಿ ಕೆಲಸ ಮಾಡುವ ಕ್ಯಾಮರಾ ಮ್ಯಾನ್ ಗಳು ಇದ್ದರು ನನಗೆ ಅವಕಾಶ ಸಿಕ್ಕಿದ್ದಕ್ಕೆ ನನಗೆ ಹೆಮ್ಮೆ ಇದೆ,ನಾನು ಈ ಭಾಗದಲ್ಲಿ ಬಂದಾಗಿನಿಂದ ರೌಡಿಶೀಟರಗಳ ಉಪಟಳ ಕಂಟ್ರೋಲ್ಗೆ ಬಂದಿದೆ,ಯಾವುದೇ ಒಂದು ಚಿಕ್ಕದಾಗಲಿ ದೊಡ್ಡ ಮಟ್ಟದ ಕ್ರೈಂ ಅದ್ರೂ ಮೊದಲು ನಮ್ಮಲ್ಲಿ ನ್ಯೂಸ್ ಕವರ್ ಆಗಿರುತ್ತೆ,

Read More