AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಲ್ಲಿ 7 ಕೋಟಿ ದರೋಡೆ: ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್​​ ಹೇಳಿದ್ದೇನು?

ಬೆಂಗಳೂರಲ್ಲಿ 7 ಕೋಟಿ ದರೋಡೆ: ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್​​ ಹೇಳಿದ್ದೇನು?

TV9 Web
| Edited By: |

Updated on:Nov 20, 2025 | 1:16 PM

Share

ಬೆಂಗಳೂರಿನಲ್ಲಿ ನಡೆದ 7 ಕೋಟಿ ರೂಪಾಯಿ ನಗದು ದರೋಡೆ ಪ್ರಕರಣದ ತನಿಖೆ ತೀವ್ರಗೊಂಡಿದೆ. ದರೋಡೆಕೋರರು ನಕಲಿ ನಂಬರ್ ಪ್ಲೇಟ್‌ಗಳನ್ನು ಬಳಸಿ, ವಾಹನಗಳನ್ನು ಬದಲಿಸಿ ರಾಜ್ಯದಿಂದ ಪರಾರಿಯಾಗಿರುವ ಶಂಕೆ ವ್ಯಕ್ತವಾಗಿದೆ. ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದು, ಆರೋಪಿಗಳನ್ನು ಶೀಘ್ರ ಬಂಧಿಸುವುದಾಗಿ ಗೃಹ ಸಚಿವ ಪರಮೇಶ್ವರ್ ತಿಳಿಸಿದ್ದಾರೆ.

ಬೆಂಗಳೂರು, ನವೆಂಬರ್​ 20: ಎಟಿಎಂಗಳಿಗೆ ಹಣ ಪೂರೈಸುತ್ತಿದ್ದ ವಾಹನವನ್ನು ಅಡ್ಡಗಟ್ಟಿ 7 ಕೋಟಿ 11 ಲಕ್ಷ ನಗದು ದರೋಡೆ ಪ್ರಕರಣದ ತನಿಖೆ ಮುಂದುವರಿದಿದೆ.  ಪೊಲೀಸರು ಈಗಾಗಲೇ ದರೋಡೆ ಕುರಿತು ಅಗತ್ಯ ಮಾಹಿತಿಗಳನ್ನು ಕಲೆಹಾಕಿದ್ದಾರೆ. ಆರೋಪಿಗಳು ನಕಲಿ ನಂಬರ್ ಪ್ಲೇಟ್‌ಗಳನ್ನು ಬಳಸಿ ರಾಬರಿ ಮಾಡಿರುವುದು ತನಿಖೆಯಲ್ಲಿ ದೃಢಪಟ್ಟಿದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್​ ಹೇಳಿದ್ದಾರೆ. ಆರೋಪಿಗಳು ರಾಜ್ಯದಿಂದ ಹೊರಗೆ ಹೋಗಿದ್ದಾರೆಯೇ ಎಂಬ ಕುರಿತು ಪೊಲೀಸರು ಪರಿಶೀಲಿಸುತ್ತಿದ್ದಾರೆ. ನಗರದಾದ್ಯಂತ ಅಳವಡಿಸಲಾದ ಸಿಸಿಟಿವಿ ಕ್ಯಾಮರಾಗಳ ದೃಶ್ಯಾವಳಿಗಳನ್ನು ಪರಿಶೀಲನೆ ನಡೆಸಲಾಗುತ್ತಿದೆ. ವಿಜಯಪುರದಲ್ಲಿ ನಡೆದ ಇದೇ ರೀತಿಯ ಎರಡು ಪ್ರಕರಣಗಳಲ್ಲಿ ಅಪರಾಧಿಗಳನ್ನು ಹಿಡಿದ ಉದಾಹರಣೆಗಳಿದ್ದು, ಈ ಪ್ರಕರಣದಲ್ಲೂ ಆರೋಪಿಗಳನ್ನು ಬಂಧಿಸಲಾಗುವುದು ಎಂದು ಗೃಹ ಸಚಿವರು ತಿಳಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​ ಮಾಡಿ.

 

Published on: Nov 20, 2025 01:14 PM