ಬೆಂಗಳೂರಿನಲ್ಲಿ 7 ಕೋಟಿ ರೂ.ದರೋಡೆ: ಖದೀಮರ ಸುಳಿವು ಸಿಕ್ತಾ?
ಬೆಂಗಳೂರಿನ ಡೈರಿ ಸರ್ಕಲ್ ಬಳಿ ಎಟಿಎಂ ವಾಹನದಲ್ಲಿ ಬರೋಬ್ಬರಿ 7 ಕೋಟಿ 11 ಲಕ್ಷ ರೂಪಾಯಿ ದರೋಡೆ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದೆ. ಈ ಪ್ರಕರಣ ಸಂಬಂಧ ಸಿಎಂ ಸಿದ್ದರಾಮಯ್ಯನವರು ಗೃಹ ಸಚಿವ ಡಾ ಜಿ ಪರಮೇಶ್ವರ್ ಜೊತೆ ಸಭೆ ಮಾಡಿದ್ದು, ಪ್ರಕರಣದ ಮಾಹಿತಿ ಪಡೆದುಕೊಂಡಿದ್ದಾರೆ. ಬಳಿಕ ಸಚಿವ ಪರಮೇಶ್ವರ್ ಅವರು ಹಿರಿಯ ಪೊಲೀಸ್ ಅಧಿಕಾರಿಗಳ ಸಭೆ ನಡೆಸಿದ್ದು, 24 ಗಂಟೆಗೊಳಗೆ ಪ್ರಕರಣವನ್ನು ಭೇದಿಸಬೇಕೆಂದು ಖಡಕ್ ಸೂಚನೆ ನೀಡಿದ್ದಾರೆ. ಅಲ್ಲದೇ ದರೋಡೆಕೋರರ ಬಗ್ಗೆ ಪರೋಕ್ಷವಾಗಿ ಸುಳಿವು ಕೊಟ್ಟಿದ್ದಾರೆ.
ಬೆಂಗಳೂರು, ನವೆಂಬರ್ 19): ನಗರದ ಡೈರಿ ಸರ್ಕಲ್ ಬಳಿ ಎಟಿಎಂ ವಾಹನದಲ್ಲಿ ಬರೋಬ್ಬರಿ 7 ಕೋಟಿ 11 ಲಕ್ಷ ರೂಪಾಯಿ ದರೋಡೆ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದೆ. ಈ ಪ್ರಕರಣ ಸಂಬಂಧ ಸಿಎಂ ಸಿದ್ದರಾಮಯ್ಯನವರು ಗೃಹ ಸಚಿವ ಡಾ ಜಿ ಪರಮೇಶ್ವರ್ ಜೊತೆ ಸಭೆ ಮಾಡಿದ್ದು, ಪ್ರಕರಣದ ಮಾಹಿತಿ ಪಡೆದುಕೊಂಡಿದ್ದಾರೆ. ಬಳಿಕ ಸಚಿವ ಪರಮೇಶ್ವರ್ ಅವರು ಹಿರಿಯ ಪೊಲೀಸ್ ಅಧಿಕಾರಿಗಳ ಸಭೆ ನಡೆಸಿದ್ದು, 24 ಗಂಟೆಗೊಳಗೆ ಪ್ರಕರಣವನ್ನು ಭೇದಿಸಬೇಕೆಂದು ಖಡಕ್ ಸೂಚನೆ ನೀಡಿದ್ದಾರೆ. ಅಲ್ಲದೇ ದರೋಡೆಕೋರರ ಬಗ್ಗೆ ಪರೋಕ್ಷವಾಗಿ ಸುಳಿವು ಕೊಟ್ಟಿದ್ದಾರೆ.
ಇದನ್ನೂ ಓದಿ: ಬೆಂಗಳೂರಿನಲ್ಲಿ 7 ಕೋಟಿ ರೂ ಕಳ್ಳತನ: ದರೋಡೆ ಎಲ್ಲಿ-ಹೇಗಾಯ್ತು? ಇಲ್ಲಿದೆ ಸಂಪೂರ್ಣ ವಿವರ
ಇನ್ನು ಸಭೆ ಬಳಿಕ ಮಾತನಾಡಿದ ಪರಮೇಶ್ವರ್, ಬೆಂಗಳೂರಿನಲ್ಲಿ ಹಾಡಹಗಲೇ 7 ಕೋಟಿ 11 ಲಕ್ಷ ನಗದು ದರೋಡೆ ಪ್ರಕರಣದ ಬಗ್ಗೆ ಸಭೆಯಲ್ಲಿ ಸಿಎಂಗೆ ಮಾಹಿತಿ ನೀಡಿದ್ದೇವೆ. ಹಾಗೇ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆಯೂ ಸಭೆ ನಡೆಸಿದದ್ದು, ಆರೋಪಿಗಳನ್ನು ಪತ್ತೆ ಹಚ್ಚುವಂತೆ ಸೂಚಿಸಿದ್ದೇನೆ. ಇನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಲವು ಮಾಹಿತಿ ಸಿಕ್ಕಿದ್ದು, ಅದು ಏನು ಅಂತಾ ಈಗ ಹೇಳಲು ಆಗಲ್ಲ ಎಂದರು. ಈ ಮೂಲಕ ಪರೋಕ್ಷವಾಗಿ ಆರೋಪಿಗಳ ಸುಳಿವು ಸಿಕ್ಕಿರುವುದಾಗಿ ತಿಳಿಸಿದ್ದಾರೆ.
