ಬೆಂಗಳೂರು: ಕತ್ತಲಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವತಿಗೆ ಬ್ಯಾಡ್ ಟಚ್, ಕಾಮುಕನ ಕೃತ್ಯದ ವಿಡಿಯೋ ವೈರಲ್
ಮಹಿಳಾ ಇನ್ಫ್ಲುಯೆನ್ಸರ್ ಒಬ್ಬರು ವ್ಲಾಗ್ ಮಾಡುವಾಗ ಬಾಲಕನೊಬ್ಬ ಆಕೆಯ ಎದೆಯನ್ನು ಸ್ಪರ್ಶಿಸಿ ಓಡಿ ಹೋದ ಘಟನೆ ಇತ್ತೀಚೆಗೆ ಬಿಟಿಎಂ ಲೇಔಟ್ನಲ್ಲಿ ನಡೆದಿತ್ತು. ಇದೀಗ ಅಂಥದ್ದೇ ಘಟನೆ ರಾಮಮೂರ್ತಿ ನಗರದಲ್ಲಿ ನಡೆದಿದೆ. ಸಿಸಿಟಿವಿ ವಿಡಿಯೋ ಇಲ್ಲಿದೆ.
ಬೆಂಗಳೂರು, ನವೆಂಬರ್ 27: ಬೆಂಗಳೂರಿನ ರಾಮಮೂರ್ತಿ ನಗರದಲ್ಲಿ ಕತ್ತಲಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವತಿಗೆ ಬೈಕ್ನಲ್ಲಿ ಬಂದ ಕಾಮುಕನೊಬ್ಬ ಬ್ಯಾಡ್ ಟಚ್ ಮಾಡಿದ ಘಟನೆ ನಡೆದಿದ್ದು, ಕೃತ್ಯದ ಸಿಸಿಟಿವಿ ವಿಡಿಯೋ ಈಗ ವೈರಲ್ ಆಗುತ್ತಿದೆ. ಬೆಂಗಳೂರಿನ ರಾಮಮೂರ್ತಿ ನಗರದಲ್ಲಿ ನವೆಂಬರ್ 11 ರ ರಾತ್ರಿ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಬೈಕ್ ಸವಾರ ಅರುಣ್ ಎಂಬಾತ ಅಸಭ್ಯ ವರ್ತನೆ ತೋರಿದ್ದು, ಈ ಬಗ್ಗೆ ರಾಮಮೂರ್ತಿ ನಗರ ಠಾಣೆಯಲ್ಲಿ ಯುವತಿ ದೂರು ದಾಖಲಿಸಿದ್ದಾರೆ. ದೂರಿನ ಆಧಾರದ ಮೇಲೆ ಆರೋಪಿ ಅರುಣ್ನನ್ನು ಪೊಲೀಸರು ಬಂಧಿಸಿದ್ದಾರೆ. ದೂರು ನೀಡಿದ ಎರಡೇ ಗಂಟೆಗಳಲ್ಲಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ರಾಮಮೂರ್ತಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಬೆಂಗಳೂರು: ವ್ಲಾಗ್ ಮಾಡುವಾಗ ಎದೆ ಸ್ಪರ್ಶಿಸಿ ಓಡಿ ಹೋದ ಬಾಲಕ, ಕಣ್ಣೀರಿಟ್ಟ ಯುವತಿ
ಮಹಿಳಾ ಇನ್ಫ್ಲುಯೆನ್ಸರ್ ಒಬ್ಬರು ವ್ಲಾಗ್ ಮಾಡುವಾಗ ಬಾಲಕನೊಬ್ಬ ಆಕೆಯ ಎದೆಯನ್ನು ಸ್ಪರ್ಶಿಸಿ ಓಡಿ ಹೋದ ಘಟನೆ ಇತ್ತೀಚೆಗೆ ಬಿಟಿಎಂ ಲೇಔಟ್ನಲ್ಲಿ ನಡೆದಿತ್ತು. ಇದೀಗ ಅಂಥದ್ದೇ ಘಟನೆ ಮತ್ತೆ ನಗರದಲ್ಲಿ ಸಂಭವಿಸಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ
Namma Metro: ಬೆಂಗಳೂರಿನ ನಾಗಸಂದ್ರ ಮೆಟ್ರೋ ನಿಲ್ದಾಣದಲ್ಲಿ ಅಗ್ನಿ ಅವಘಡ
ನೀಟ್ ಪರೀಕ್ಷೆ: ಜೀನ್ಸ್ ಪ್ಯಾಂಟ್ ಧರಿಸಿ ಬಂದಿದ್ದವರಿಗೆ ನೋ ಎಂಟ್ರಿ
ಪ್ರಕಾಶ್ ರಾಜ್ ವಿರುದ್ಧ ಅರೆಸ್ಟ್ ವಾರೆಂಟ್; 4 ಕಡೆ ವೋಟರ್ ಐಡಿ ಇರುವ ಆರೋಪ

