ಬೆಂಗಳೂರು ರಸ್ತೆ ಗುಂಡಿ ಅವಾಂತರಕ್ಕೆ ವಿದ್ಯಾರ್ಥಿನಿ ಬಲಿ
ರಸ್ತೆ ಗುಂಡಿಯ ಸಮಸ್ಯೆಯ ಕಾರಣದಿಂದಾಗಿ ಬೆಂಗಳೂರಿನಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದ್ದು, ಕಾಲೇಜಿಗೆ ತೆರಳುತ್ತಿದ್ದ ವಿದ್ಯಾರ್ಥಿನಿ ಸಾವನ್ನಪ್ಪಿದ್ದಾಳೆ. 22 ವರ್ಷ ವಯಸ್ಸಿನ ಧನುಶ್ರೀ ಸಾವನ್ನಪ್ಪಿದ ಯುವತಿ. ಬೂದಿಗೆರೆ ಕ್ರಾಸ್ ಬಳಿ ಈ ಘಟನೆ ನಡೆದಿದ್ದು, ರಸ್ತೆ ಗುಂಡಿ ತಪ್ಪಿಸಲು ಹೋಗಿ ಟಿಪ್ಪರ್ ಧನುಶ್ರೀಯ ಸ್ಕೂಟಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಸ್ಕೂಟಿಯಲ್ಲಿದ್ದ ಆಕೆ ಕೆಳಗೆ ಬಿದ್ದಿದ್ದು, ಆಕೆಯ ಮೇಲೆ ಟಿಪ್ಪರ್ ಹರಿದಿದೆ.
ಬೆಂಗಳೂರು, ಸೆಪ್ಟೆಂಬರ್ 29: ಎಲ್ಲಿ ನೋಡಿದ್ರೂ ರಸ್ತೆ ಗುಂಡಿಗಳದ್ದೇ (Pothole) ಸಮಸ್ಯೆ. ಗುಂಡಿ ಬಿದ್ದ ರಸ್ತೆಗಳ ಕಾರಣದಿಂದಾಗಿ ವಾಹನ ಸವಾರರು ಪ್ರತಿನಿತ್ಯ ಪರದಾಡುತ್ತಿದ್ದಾರೆ. ಇದೇ ಕಾರಣದಿಂದಾಗಿ ಅಪಘಾತಗಳು ಕೂಡ ಸಂಭವಿಸುತ್ತಿದೆ. ಇದೀಗ ಇಂತಹದ್ದೇ ಘಟನೆ ಬೆಂಗಳೂರಿನ ಬೂದಿಗೆರೆ ಕ್ರಾಸ್ ಬಳಿ ನಡೆದಿದ್ದು, ರಕ್ಕಸ ರಸ್ತೆ ಗುಂಡಿಗೆ ವಿದ್ಯಾರ್ಥಿನಿ ಬಲಿಯಾಗಿದ್ದಾಳೆ. 22 ವರ್ಷ ವಯಸ್ಸಿನ ಧನುಶ್ರೀ ಎಂಬ ಯುವತಿ ಕಾಲೇಜಿಗೆ ಸ್ಕೂಟಿಯಲ್ಲಿ ಹೋಗುತ್ತಿರುವಾಗ ಈ ಅಪಘಾತ ಸಂಭವಿಸಿದ್ದು, ರಸ್ತೆ ಗುಂಡಿ ತಪ್ಪಿಸಲು ಹೋಗಿ ಟಿಪ್ಪರ್ ಧನುಶ್ರೀಯ ಸ್ಕೂಟಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ಪರಿಣಾಮ ಸ್ಕೂಟಿಯಲ್ಲಿದ್ದ ಆಕೆ ಕೆಳಗೆ ಬಿದ್ದಿದ್ದು, ಆಕೆಯ ಮೇಲೆಯೇ ಟಿಪ್ಪರ್ ಹರಿದಿದೆ. ಆಕೆ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾಳೆ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
