AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಲ್ಲಿ ಅಬ್ಬರಿಸಿದ ವರುಣ: ಕೆರೆಗಳಂತಾದ ರಸ್ತೆಗಳು; ಸವಾರರು ಪರದಾಟ

ಬೆಂಗಳೂರಲ್ಲಿ ಅಬ್ಬರಿಸಿದ ವರುಣ: ಕೆರೆಗಳಂತಾದ ರಸ್ತೆಗಳು; ಸವಾರರು ಪರದಾಟ

ಲಕ್ಷ್ಮಿ ನರಸಿಂಹ ಸ್ವಾಮಿ ಎಲ್.
| Edited By: |

Updated on: Aug 10, 2026 | 5:12 PM

Share

ಮುಖ್ಯಾಂಶಗಳು

  • ಬೆಂಗಳೂರು ಮಹಾನಗರದ ಹಲವೆಡೆ ಮಳೆ
  • ಧಾರಾಕಾರ ಮಳೆಗೆ ಪಾದಚಾರಿಗಳು, ದ್ವಿಚಕ್ರ ವಾಹನ ಸವಾರರು ಹೈರಾಣು
  • ಮಳೆಯಿಂದಾಗಿ ರಸ್ತೆ ಕಾಣದೆ ಡಿವೈಡರ್​ಗೆ ಕಾರು ಡಿಕ್ಕಿ

ಬೆಂಗಳೂರಿನ ಹಲವೆಡೆ ಧಾರಾಕಾರ ಮಾನ್ಸೂನ್ ಮಳೆಯಿಂದಾಗಿ ರಸ್ತೆಗಳು ಕೆರೆಗಳಂತಾಗಿವೆ. ಮೆಜೆಸ್ಟಿಕ್, ರಾಜಾಜಿನಗರ, ಕೆ.ಆರ್. ಮಾರ್ಕೆಟ್ ಸೇರಿದಂತೆ ನಗರದ ವಿವಿಧೆಡೆ ನೀರು ನಿಂತು ವಾಹನ ಸವಾರರು ತೀವ್ರ ಪರದಾಟ ನಡೆಸಿದರು. ಭಾರೀ ಮಳೆಯು ನಗರದ ದೈನಂದಿನ ಚಟುವಟಿಕೆಗಳ ಮೇಲೆ ಪರಿಣಾಮ ಬೀರಿದೆ. ಸಾರ್ವಜನಿಕರು ಮಳೆ ನೀರು ನಿಂತ ರಸ್ತೆಗಳಲ್ಲಿ ಪ್ರಯಾಣಿಸಲು ಹರಸಾಹಸ ಪಡುವಂತಾಯಿತು.

ಬೆಂಗಳೂರು, ಆಗಸ್ಟ್​​ 10: ನಗರದಲ್ಲಿ ಇಂದು ಕೂಡ ಮಳೆರಾಯನ ಎಂಟ್ರಿ ಆಗಿದೆ. ಬೆಳಿಗ್ಗೆಯಿಂದ ಮೋಡ ಕವಿದ ವಾತಾವರಣವಿದ್ದು, ಸಂಜೆ ಆಗುತ್ತಿದ್ದಂತೆ ಮಳೆ ಆರಂಭವಾಗಿದೆ. ವಿಜಯನಗರ, ನಾಗರಬಾವಿ, ಟೌನ್‌ಹಾಲ್, ಮಲ್ಲೇಶ್ವರಂ, ಪ್ಯಾಲೇಸ್ ಗುಟ್ಟಹಳ್ಳಿ, ಸ್ಯಾಟಲೈಟ್, ಯಶವಂತಪುರ, ವಿಧಾನಸೌಧ, ಕೆ.ಆರ್. ಸರ್ಕಲ್, ಚಾಲುಕ್ಯ ಸರ್ಕಲ್, ಮೆಜೆಸ್ಟಿಕ್, ಕೆ.ಆರ್. ಮಾರ್ಕೆಟ್, ಕಾರ್ಪೊರೇಷನ್ ಸುತ್ತಮುತ್ತ ಹಾಗೂ ಶಿವಾಜಿನಗರ ಸೇರಿದಂತೆ ಹಲವೆಡೆ ಮಳೆ ಸುರಿದಿದೆ. ಧಾರಾಕಾರ ಸುರಿದ ಮಳೆಗೆ ಪಾದಚಾರಿಗಳು ಹಾಗೂ ದ್ವಿಚಕ್ರ ವಾಹನ ಸವಾರರು ತೀವ್ರ ಹೈರಾಣಾಗಿ ಅಂಡರ್‌ಪಾಸ್ ಹಾಗೂ ಬಸ್ ನಿಲ್ದಾಣಗಳಲ್ಲಿ ಆಶ್ರಯ ಪಡೆದರು. ಇನ್ನೊಂದೆಡೆ ನೆಲಮಂಗಲ-ಹಾಸನ ರಾಷ್ಟ್ರೀಯ ಹೆದ್ದಾರಿಯ ಕೆಂಪಲಿಂಗನಹಳ್ಳಿ ಬಳಿ ಮಳೆಯಿಂದಾಗಿ ರಸ್ತೆ ಸರಿಯಾಗಿ ಕಾಣದೆ ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಡಿವೈಡರ್​ಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ ಕಾರು ಚಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸ್ಥಳಕ್ಕೆ ನೆಲಮಂಗಲ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದರು. ಹೆದ್ದಾರಿಯಲ್ಲಿ ಕೆಲಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Follow Us
ಲಕ್ಷ್ಮಿ ನರಸಿಂಹ ಸ್ವಾಮಿ ಎಲ್.
ಲಕ್ಷ್ಮಿ ನರಸಿಂಹ ಸ್ವಾಮಿ ಎಲ್.

ಲಕ್ಷ್ಮಿ ನರಸಿಂಹ ಸ್ವಾಮಿ. ಎಲ್ ಆದ ನಾನು ಮೂಲತಃ ಬೆಂಗಳೂರಿನವಾಗಿದ್ದು, ಪೂರ್ವ ತಾಲೂಕಿನ ದೊಡ್ಡಗುಬ್ಬಿ ಎಂಬ ಗ್ರಾಮದಲ್ಲಿ ವಾಸವಿದ್ದೇನೆ. ಕಳೆದ 6 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಪ್ರಸ್ತುತ ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಬೆಂಗಳೂರು ವರದಿಗಾರನಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಐತಿಹಾಸಿಕ ಸರ್ಕಾರಿ ಕಲಾ ಕಾಲೇಜಿನಲ್ಲಿ ಸ್ನಾತಕ ಪದವಿ ಪೂರೈಸಿದ ಬಳಿಕ ಬೆಂಗಳೂರು ವಿಶ್ವವಿದ್ಯಾಲಯ (ಜ್ಞಾನಭಾರತಿ) ದಲ್ಲಿ M.A (ಪತ್ರಿಕೋದ್ಯಮ ಮತ್ತು ಸಂವಹನ) ಸ್ನಾತಕೋತ್ತರ ಪದವಿ ಪೂರೈಸಿದ್ದೇನೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರ ಅಡಿಯ ನಗರ ಪಾಲಿಕೆಗಳು, ಬೆಸ್ಕಾಂ, ಜಲಮಂಡಳಿ, ಆಹಾರ, ಆರೋಗ್ಯ, ಶಿಕ್ಷಣ ಸೇರಿ ವಿವಿಧ ಕ್ಷೇತ್ರಗಳಲ್ಲಿ ನಾಗರಿಕರಿಗೆ ಎದುರಾಗುವ ಸಮಸ್ಯೆಗಳಿಗೆ, ಸಂಕಷ್ಟಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಈವರೆಗೂ ಶ್ರಮವಹಿಸಿದ್ದು, ಮುಂದಿನ ದಿನಗಳಲ್ಲೂ ನಾಗರಿಕರ ಸೇವೆಯನ್ನೂ ಮುಂದುವರೆಸುವ ಗುರಿಯೊಂದಿಗೆ ಉತ್ತಮ ಸಮಾಜಕ್ಕಾಗಿ ಬದ್ಧನಾಗಿದ್ದೇನೆ..

Read More