AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಸರಾ ರಜೆ ಎಫೆಕ್ಟ್​​: ಬೆಂಗಳೂರಿನಲ್ಲಿ ಮಧ್ಯರಾತ್ರಿಯೂ ಭಾರೀ ಟ್ರಾಫಿಕ್ ಜಾಮ್; ವಾಹನ ಸವಾರರ ಪರದಾಟ

ದಸರಾ ರಜೆ ಎಫೆಕ್ಟ್​​: ಬೆಂಗಳೂರಿನಲ್ಲಿ ಮಧ್ಯರಾತ್ರಿಯೂ ಭಾರೀ ಟ್ರಾಫಿಕ್ ಜಾಮ್; ವಾಹನ ಸವಾರರ ಪರದಾಟ

ರಾಚಪ್ಪಾಜಿ ನಾಯ್ಕ್
| Edited By: |

Updated on: Oct 18, 2026 | 9:04 AM

Share

ದಸರಾ ಹಬ್ಬದ ರಜೆಯ ಹಿನ್ನೆಲೆಯಲ್ಲಿ ಜನರು ತಮ್ಮ ಊರುಗಳತ್ತ ಹೊರಟಿರುವ ಕಾರಣ ಬೆಂಗಳೂರು ಮಧ್ಯರಾತ್ರಿಯಲ್ಲೂ ಭಾರೀ ಟ್ರಾಫಿಕ್ ಜಾಮ್‌ನಿಂದ ತತ್ತರಿಸಿದೆ. ಯಶವಂತಪುರ ಸರ್ಕಲ್, ಗೊರಗುಂಟೆಪಾಳ್ಯ ರಸ್ತೆಗಳಲ್ಲಿ ವಾಹನಗಳು ನಿಂತಲ್ಲೇ ನಿಂತಿವೆ. ರಾಜಾಜಿನಗರದಿಂದ ಯಶವಂತಪುರ ತಲುಪಲು ವಾಹನ ಸವಾರರಿಗೆ ಎರಡು ಗಂಟೆಗಳಿಗೂ ಹೆಚ್ಚು ಸಮಯ ತಗುಲಿದ್ದು, ಪ್ರಯಾಣಿಕರು ಅಳಲು ತೋಡಿಕೊಂಡಿದ್ದಾರೆ.

ಬೆಂಗಳೂರು, ಅಕ್ಟೋಬರ್​​ 18: ದಸರಾ ಹಬ್ಬದ ರಜೆಯ ಹಿನ್ನಲೆಯಲ್ಲಿ ಬೆಂಗಳೂರು ನಗರದಲ್ಲಿ ಮಧ್ಯರಾತ್ರಿಯಲ್ಲೂ ಭಾರೀ ಸಂಚಾರ ದಟ್ಟಣೆ ಕಂಡುಬಂದಿದೆ. ಸಾಲು ಸಾಲು ರಜೆ ಸಿಕ್ಕಿರುವ ಕಾರಣ ನಗರದಲ್ಲಿ ಕೆಲಸ ಮಾಡುವ ಜನರು ತಮ್ಮ ಸ್ವಂತ ಊರುಗಳತ್ತ ಪ್ರಯಾಣ ಬೆಳೆಸಿದ್ದಾರೆ. ನಿನ್ನೆ ಶನಿವಾರವಾದ ಕಾರಣ ಹೆಚ್ಚಿನ ಸಂಖ್ಯೆಯಲ್ಲಿ ಜನರು ನಗರವನ್ನು ತೊರೆದಿದ್ದಾರೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ಸುತ್ತಮುತ್ತಲಿನ ಹೊರವಲಯಗಳು ಹಾಗೂ ನಗರವನ್ನು ಸಂಪರ್ಕಿಸುವ ಪ್ರಮುಖ ರಸ್ತೆಗಳಲ್ಲಿ ಟ್ರಾಫಿಕ್ ಜಾಮ್ ಸಮಸ್ಯೆ ಉಂಟಾಗಿದೆ. ಯಶವಂತಪುರ ಸರ್ಕಲ್ ಮತ್ತು ಗೊರಗುಂಟೆಪಾಳ್ಯ ರಸ್ತೆಗಳಲ್ಲಿ ಮಧ್ಯರಾತ್ರಿ 1 ಗಂಟೆಯಾದರೂ ವಾಹನಗಳ ಸಾಲುಗಟ್ಟಿ ನಿಂತಿರುವುದು ಕಂಡುಬಂದಿದೆ. ರಾಜಾಜಿನಗರದಿಂದ ಯಶವಂತಪುರ ತಲುಪಲು ಎರಡು ಗಂಟೆಗೂ ಹೆಚ್ಚು ಸಮಯ ತಗುಲಿದ ಬಗ್ಗೆ ಪ್ರಯಾಣಿಕರು ತಿಳಿಸಿದ್ದಾರೆ. ಮಳೆ ಮತ್ತು ಜನರು ಹೆಚ್ಚಿನ ಸಂಖ್ಯೆಯಲ್ಲಿ ಹೊರಟಿರುವುದು ಸಂಚಾರ ದಟ್ಟಣೆಗೆ ಕಾರಣವಾಗಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ರಾಚಪ್ಪಾಜಿ ನಾಯ್ಕ್
ರಾಚಪ್ಪಾಜಿ ನಾಯ್ಕ್

ರಾಚಪ್ಪಾಜಿ ನಾಯ್ಕ್ ಅವರು ಮೂಲತಃ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನವರು. ಕಳೆದ 2 ವರ್ಷದಿಂದ ಟಿವಿ9 ಕನ್ನಡದ ಬೆಂಗಳೂರು ಕ್ರೈಂ ಬ್ಯೂರೊ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಕರ್ನಾಟಕ ರಾಜ್ಯದಲ್ಲಿ ನಡೆದ ಪ್ರಮುಖ ಅಪಾರಧ ವಿಷಯಗಳ ಮೇಲಿನ ವರದಿ ಮಾಡಿದ ಅನುಭವವಿದೆ. ಬೆಂಗಳೂರು ಮಾತ್ರವಲ್ಲದೆ ರಾಜ್ಯದ ಬೇರೆ ಬೇರೆ ಭಾಗಗಳಲ್ಲಿ ನಡೆದ ಪ್ರಮುಖ ಬೆಳವಣಿಗೆಯ ವರದಿ ಮಾಡಿದ್ದಾರೆ.

Read More