AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೈಕ್​​ ಗುದ್ದಿದ ರಭಸಕ್ಕೆ ಹಾರಿಬಿದ್ದು ಯುವತಿ ಸಾವು: ಎದೆ ಝಲ್​​ ಎನಿಸೋ ದೃಶ್ಯ ಇಲ್ಲಿದೆ

ಬೈಕ್​​ ಗುದ್ದಿದ ರಭಸಕ್ಕೆ ಹಾರಿಬಿದ್ದು ಯುವತಿ ಸಾವು: ಎದೆ ಝಲ್​​ ಎನಿಸೋ ದೃಶ್ಯ ಇಲ್ಲಿದೆ

ಪ್ರಸನ್ನ ಹೆಗಡೆ
|

Updated on: Feb 17, 2026 | 3:19 PM

Share

ಬೆಂಗಳೂರಿನ ರಾಜಾಜಿನಗರದಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ HDFC ಬ್ಯಾಂಕ್ ಉದ್ಯೋಗಿ, 26 ವರ್ಷದ ಯೋಗೇಶ್ವರಿ ಸಾವನ್ನಪ್ಪಿದ್ದಾರೆ. ಮಧ್ಯಾಹ್ನ ಊಟಕ್ಕೆ ಹೋಗಿದ್ದ ವೇಳೆ ವೇಗವಾಗಿ ಬಂದ ಬೈಕ್ ಡಿಕ್ಕಿ ಹೊಡೆದಿದೆ. ಸಿಸಿಟಿವಿಯಲ್ಲಿ ಸೆರೆಯಾದ ದೃಶ್ಯಾವಳಿಗಳನ್ನು ಆಧಾರಿಸಿ ರಾಜಾಜಿನಗರ ಪೊಲೀಸ್ ಠಾಣೆಯಲ್ಲಿ ಬೈಕ್ ಸವಾರನ ವಿರುದ್ಧ ಎಫ್‌ಐಆರ್ ದಾಖಲಾಗಿದ್ದು, ಘಟನೆಗೆ ಬಗ್ಗೆ ತನಿಖೆ ನಡೆಯುತ್ತಿದೆ.

ಬೆಂಗಳೂರು, ಫೆಬ್ರವರಿ 17: ರಸ್ತೆ ದಾಟುತ್ತಿದ್ದ ಯುವತಿಗೆ ವೇಗವಾಗಿ ಬಂದ ಬೈಕ್​​ ಡಿಕ್ಕಿಯಾದ ಪರಿಣಾಮ ಮೃತಪಟ್ಟಿರುವ ಘಟನೆ ಬೆಂಗಳೂರಿನ ರಾಜಾಜಿನಗರದಲ್ಲಿ ನಡೆದಿದೆ. ಯೋಗೇಶ್ವರಿ (26) ಮೃತ ದುರ್ದೈವಿ. ರಾಜಾಜಿನಗರದ HDFC ಬ್ಯಾಂಕ್ ಹೋಮ್ ಲೋನ್ ವಿಭಾಗದಲ್ಲಿ ಉದ್ಯೋಗಿಯಾಗಿದ್ದ ಯೋಗೇಶ್ವರಿ, ಮಧ್ಯಾಹ್ನ ಊಟ ತರಲು ಹೋಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ.  ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಅವರನ್ನು ಕೂಡಲೇ ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ. ರಾಜಾಜಿನಗರ ಪೊಲೀಸ್ ಠಾಣೆಯಲ್ಲಿ ಬೈಕ್ ಸವಾರನ ವಿರುದ್ಧ ಎಫ್‌ಐಆರ್ ದಾಖಲಾಗಿದ್ದು, ಘಟನೆಗೆ ಬಗ್ಗೆ ತನಿಖೆ ನಡೆಯುತ್ತಿದೆ.

ವರದಿ: ನಟರಾಜ್​​, ಟಿವಿ9 ಬೆಂಗಳೂರು

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.