ರಸ್ತೆ ಗುಂಡಿ ತಪ್ಪಿಸಲು ಹೋಗಿ ಗಂಭೀರ ಗಾಯಗೊಂಡು ಜೀವನ್ಮರಣ ಹೋರಾಟ ನಡೆಸುತ್ತಿರುವ ಯುವಕ
ಬೆಂಗಳೂರಿನ ನೆಲಮಂಗಲದಲ್ಲಿ ಪೈಪ್‌ಲೈನ್ ಕಾಮಗಾರಿಯ ಗುಂಡಿ ಸರಿಯಾಗಿ ಮುಚ್ಚದ ಕಾರಣ ಬೈಕ್ ಅಪಘಾತ ಸಂಭವಿಸಿದೆ. ಬೈಕ್ ಸವಾರ ತಬ್ರೇಜ್ ಮತ್ತೊಬ್ಬರ ಬ್ರೇಕ್ ತಪ್ಪಿಸಲು ಹೋಗಿ ಗಂಭೀರ ಗಾಯಗೊಂಡಿದ್ದಾರೆ. ಸಿಸಿಟಿವಿಯಲ್ಲಿ ಸೆರೆಯಾದ ಈ ಘಟನೆಯಲ್ಲಿ ತಬ್ರೇಜ್ ನಿಮಾನ್ಸ್ ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿದ್ದಾರೆ. ನೆಲಮಂಗಲ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಬೆಂಗಳೂರು, ಡಿ. 18: ಬೈಕ್ ಸವಾರರೊಬ್ಬರು ಅಪಘಾತವನ್ನು ತಪ್ಪಿಸಲು ಹೋಗಿ ಬಿದ್ದು ಗಂಭೀರ ಗಾಯ ಮಾಡಿಕೊಂಡಿದ್ದಾರೆ. ಬೆಂಗಳೂರಿನ ನೆಲಮಂಗಲದ ಸುಭಾಷ್ ನಗರದ ಬಜಾಜ್ ಶೋ ರೂಮ್ ಬಳಿ ಈ ಘಟನೆ ನಡೆದಿದೆ. ಮುಂದಿನಿಂದ ಹೋಗುತ್ತಿದ್ದ ಬೈಕ್ ಸವಾರ ಗುಂಡಿ ಇದೆ ಎಂದು ಏಕಾಏಕಿ ಬ್ರೇಕ್ ಹಾಕಿದ್ದಾನೆ. ಹಿಂದೆಯಿಂದ ವೇಗವಾಗಿ ಬರುತ್ತಿದ್ದ ತಬ್ರೇಜ್ ಎಂಬ ಬೈಕ್ ಸವಾರ ಅಪಘಾತ ತಪ್ಪಿಸಲು ಹೋಗಿ ಬೈಕ್ಗೆ ಡಿಕ್ಕಿ ಹೊಡೆದಿದ್ದಾರೆ. ಇದರ ಪರಿಣಾಮ ತಬ್ರೇಜ್ಗೆ ಗಂಭೀರ ಗಾಯಗಳಾಗಿವೆ. ತಬ್ರೇಜ್ ಇಸ್ಲಾಂಪುರದ ನಿವಾಸಿ ಎಂದು ಹೇಳಲಾಗಿದೆ. ಇದೀಗ ಅವರಿಗೆ ನಿಮಾನ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಅಪಘಾತದ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇದೀಗ ತಬ್ರೇಜ್ ಗಂಭೀರ ಗಾಯದಿಂದ ಜೀವನ್ಮರಣ ಹೋರಾಟ ನಡೆಸುತ್ತಿದ್ದಾರೆ. ಸುಭಾಷ್ ನಗರದ ಬಜಾಜ್ ಶೋ ರೂಮ್ ಬಳಿ ಪೈಪ್ ಲೈನ್ ಮಾಡಲು ತೆಗೆದಿದ್ದ ಗುಂಡಿ ಸಂಪೂರ್ಣವಾಗಿ ಮುಚ್ಚದ ಪರಿಣಾಮ ಈ ಅಪಘಾತ ನಡೆದಿದೆ. ಇದೀಗ ಈ ಘಟನೆಯ ಬಗ್ಗೆ ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

