ಬಸ್ ಚಲಾಯಿಸುತ್ತಿರುವಾಗಲೇ ಚಾಲಕನಿಗೆ ಪಿಡ್ಸ್‌: 9 ವಾಹನಗಳಿಗೆ ಡಿಕ್ಕಿ ಹೊಡೆದ ಬಿಎಂಟಿಸಿ

Updated on: Oct 11, 2025 | 4:31 PM

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಬಿಎಂಟಿಸಿ ಬಸ್ 9 ವಾಹನಗಳಿಗೆ ಡಿಕ್ಕಿ ಹೊಡೆದಿದೆ. 3 ಆಟೋ, 3 ಕಾರು, ಬೈಕ್‌ಗಳು ಅಪಘಾತಕ್ಕೀಡಾಗಿವೆ. ಕಬ್ಬನ್ ಪಾರ್ಕ್ ಪೊಲೀಸರು ಬಸ್ ಚಾಲಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಗಾಯಗೊಂಡ ಆಟೋ ಚಾಲಕರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಬೆಂಗಳೂರು, ಅಕ್ಟೋಬರ್​ 11: ನಗರದ ಚಿನ್ನಸ್ವಾಮಿ ಸ್ಟೇಡಿಯಂನ 9ನೇ ಗೇಟ್ ಬಳಿ 3 ಆಟೋ, 3 ಕಾರು, ಬೈಕ್‌ಗಳು ಸೇರಿದಂತೆ 9 ವಾಹನಗಳಿಗೆ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದು ಸರಣಿ ಅಪಘಾತ (serial accident) ಸಂಭವಿಸಿದೆ. ಆಟೋ ಚಾಲಕನ ಸ್ಥಿತಿ ಗಂಭೀರವಾಗಿದೆ. ಬಿಎಂಟಿಸಿ ಬಸ್ ಚಾಲಕನಿಗೆ ಪಿಡ್ಸ್‌ ಬಂದಿದ್ದರಿಂದ ಅವಘಡ ಸಂಭವಿಸಿದೆ ಎನ್ನಲಾಗುತ್ತಿದೆ. ಸ್ಥಳಕ್ಕೆ ಕಬ್ಬನ್ ಪಾರ್ಕ್ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಸದ್ಯ ಬಸ್ ಚಾಲಕ ಕಬ್ಬನ್​ಪಾರ್ಕ್ ಸಂಚಾರ ಪೊಲೀಸರ ವಶದಲ್ಲಿದ್ದಾರೆ.

ವರದಿ: ಪ್ರದೀಪ್ ಕ್ರೈಂ

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.