ಬೆಂಗಳೂರು: ಧಗಧಗನೇ ಹೊತ್ತಿ ಉರಿದ ಬಿಎಂಟಿಸಿ ಬಸ್, ಚಾಲಕನ ಸಮಯಪ್ರಜ್ಞೆಯಿಂದ ಪ್ರಯಾಣಿಕರು ಬಚಾವ್!
ಬಿಎಂಟಿಸಿ ಬಸ್ಸೊಂದು ಧಗಧಗನೆ ಹೊತ್ತಿ ಉರಿದ ಘಟನೆ ಬೆಂಗಳೂರಿನ ಹೆಚ್ಎಎಲ್ ಏರ್ಪೋರ್ಟ್ ಮುಖ್ಯ ಗೇಟ್ ಬಳಿ ಸಂಭವಿಸಿದೆ. ಅದೃಷ್ಟವಶಾತ್, ಪ್ರಯಾಣಿಕರೆಲ್ಲ ಜೀವಾಪಾಯದಿಂದ ಪಾರಾಗಿದ್ದಾರೆ. ಅಗ್ನಿಶಾಮಕ ದಳ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿದರೂ ಅಷ್ಟರಲ್ಲಾಗಲೇ ಬಸ್ ಬಹುತೇಕ ಸುಟ್ಟು ಕರಕಲಾಗಿದೆ. ಘಟನೆಯ ವಿಡಿಯೋ ಇಲ್ಲಿದೆ.
ಬೆಂಗಳೂರು, ಸೆಪ್ಟೆಂಬರ್ 15: ಎಂಜಿನ್ನಲ್ಲಿ ಕಾಣಿಸಿಕೊಂಡ ಬೆಂಕಿ ದಿಢೀರನೇ ವ್ಯಾಪಿಸಿ ಇಡೀ ಬಿಎಂಟಿಸಿ ಬಸ್ ಧಗಧಗನೆ ಹೊತ್ತಿ ಉರಿದ ಘಟನೆ ಬೆಂಗಳೂರಿನ ಹೆಚ್ಎಎಲ್ ಏರ್ಪೋರ್ಟ್ ಮುಖ್ಯ ಗೇಟ್ ಬಳಿ ಸೊಮವಾರ ಮುಂಜಾನೆ ಸಂಭವಿಸಿದೆ. ಮೆಜೆಸ್ಟಿಕ್ನಿಂದ ಕಾಡುಗೋಡಿಗೆ ತೆರಳುತ್ತಿದ್ದ ಬಿಎಂಟಿಸಿ ಬಸ್ನ ಎಂಜಿನ್ನಲ್ಲಿ ಬೆಳಗ್ಗೆ 5.15ಕ್ಕೆ ಬೆಂಕಿ ಕಾಣಿಸಿದೆ. ತಕ್ಷಣವೇ ಎಚ್ಚೆತ್ತ ಚಾಲಕ ಬಸ್ ನಿಲ್ಲಿಸಿ ಎಲ್ಲ ಪ್ರಯಾಣಿಕರನ್ನು ಕೆಳಗಿಳಿಸಿದ್ದಾರೆ. ಕೂಡಲೇ ಇಡೀ ಬಸ್ ಹೊತ್ತಿ ಉರಿದಿದೆ. ಚಾಲಕನ ಸಮಯಪ್ರಜ್ಞೆಯಿಂದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಹೆಚ್ಎಎಲ್ ಅಗ್ನಿಶಾಮಕ ದಳ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿದರು.
