ಬೆಂಗಳೂರಿನಲ್ಲಿ ಬಸ್ ಓಡಿಸುವಾಗಲೇ ಹೃದಯಾಘಾತದಿಂದ ಬಿಎಂಟಿಸಿ ಚಾಲಕ ಸಾವು; ಆಮೇಲೇನಾಯ್ತು?
ಬೆಂಗಳೂರಿನಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ಬಿಎಂಟಿಸಿ ಚಾಲಕರೊಬ್ಬರಿಗೆ ಬಸ್ ಚಲಾಯಿಸುವಾಗಲೇ ಹೃದಯಾಘಾತವಾಗಿದೆ. ರಸ್ತೆಯಲ್ಲಿ ಬಸ್ ಹೋಗುತ್ತಿದ್ದಾಗಲೇ ಅವರು ಸೀಟ್ನಿಂದ ಕೆಳಗೆ ಬಿದ್ದಿದ್ದಾರೆ. ಇದರಿಂದ ಬಸ್ ನಿಯಂತ್ರಣ ತಪ್ಪಿ ರಸ್ತೆಯ ತುಂಬ ಚಲಿಸಲಾರಂಭಿಸಿದೆ. ಆಮೇಲೇನಾಯ್ತು?
ಬೆಂಗಳೂರು: ಬೆಂಗಳೂರು ನಗರದಲ್ಲಿ ಇಂದು ನಡೆದ ಆಘಾತಕಾರಿ ಘಟನೆಯೊಂದರಲ್ಲಿ 40 ವರ್ಷದ ಬಿಎಂಟಿಸಿ ಬಸ್ ಚಾಲಕರೊಬ್ಬರು ವಾಹನ ಚಲಾಯಿಸುವಾಗಲೇ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಈ ಬಸ್ ನೆಲಮಂಗಲದಿಂದ ದಾಸನಪುರಕ್ಕೆ ತೆರಳುತ್ತಿದ್ದಾಗ ಬೆಳಗ್ಗೆ 11 ಗಂಟೆಗೆ ಈ ಘಟನೆ ನಡೆದಿದೆ. ಈ ಘಟನೆಯ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಹೃದಯಾಘಾತದಿಂದ ಡೈವರ್ ಕುಸಿದು ಬಿದ್ದ ಕ್ಷಣವನ್ನು ಬಸ್ನಲ್ಲಿ ಅಳವಡಿಸಲಾಗಿದ್ದ ಕ್ಯಾಮೆರಾ ತೋರಿಸುತ್ತದೆ. ಚಾಲಕ ಎದೆನೋವಿನಿಂದ ಕೆಳಗೆ ಬೀಳುತ್ತಿದ್ದಂತೆ ಸಮಯಪ್ರಜ್ಞೆ ಮೆರೆದ ಕಂಡಕ್ಟರ್ ತಾನೇ ಬಸ್ ಅನ್ನು ನಿಯಂತ್ರಣಕ್ಕೆ ತೆಗೆದುಕೊಂಡು ರಸ್ತೆಯಲ್ಲಿದ್ದ ಹಲವರ ಪ್ರಾಣ ಉಳಿಸಿದ್ದಾರೆ.
ಇನ್ನಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Latest Videos