ಬೆಂಗಳೂರಿನಲ್ಲಿ ಬಸ್ ಓಡಿಸುವಾಗಲೇ ಹೃದಯಾಘಾತದಿಂದ ಬಿಎಂಟಿಸಿ ಚಾಲಕ ಸಾವು; ಆಮೇಲೇನಾಯ್ತು?

|

Updated on: Nov 06, 2024 | 9:33 PM

ಬೆಂಗಳೂರಿನಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ಬಿಎಂಟಿಸಿ ಚಾಲಕರೊಬ್ಬರಿಗೆ ಬಸ್ ಚಲಾಯಿಸುವಾಗಲೇ ಹೃದಯಾಘಾತವಾಗಿದೆ. ರಸ್ತೆಯಲ್ಲಿ ಬಸ್ ಹೋಗುತ್ತಿದ್ದಾಗಲೇ ಅವರು ಸೀಟ್​ನಿಂದ ಕೆಳಗೆ ಬಿದ್ದಿದ್ದಾರೆ. ಇದರಿಂದ ಬಸ್​ ನಿಯಂತ್ರಣ ತಪ್ಪಿ ರಸ್ತೆಯ ತುಂಬ ಚಲಿಸಲಾರಂಭಿಸಿದೆ. ಆಮೇಲೇನಾಯ್ತು?

ಬೆಂಗಳೂರು: ಬೆಂಗಳೂರು ನಗರದಲ್ಲಿ ಇಂದು ನಡೆದ ಆಘಾತಕಾರಿ ಘಟನೆಯೊಂದರಲ್ಲಿ 40 ವರ್ಷದ ಬಿಎಂಟಿಸಿ ಬಸ್ ಚಾಲಕರೊಬ್ಬರು ವಾಹನ ಚಲಾಯಿಸುವಾಗಲೇ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಈ ಬಸ್ ನೆಲಮಂಗಲದಿಂದ ದಾಸನಪುರಕ್ಕೆ ತೆರಳುತ್ತಿದ್ದಾಗ ಬೆಳಗ್ಗೆ 11 ಗಂಟೆಗೆ ಈ ಘಟನೆ ನಡೆದಿದೆ. ಈ ಘಟನೆಯ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಹೃದಯಾಘಾತದಿಂದ ಡೈವರ್ ಕುಸಿದು ಬಿದ್ದ ಕ್ಷಣವನ್ನು ಬಸ್​ನಲ್ಲಿ ಅಳವಡಿಸಲಾಗಿದ್ದ ಕ್ಯಾಮೆರಾ ತೋರಿಸುತ್ತದೆ. ಚಾಲಕ ಎದೆನೋವಿನಿಂದ ಕೆಳಗೆ ಬೀಳುತ್ತಿದ್ದಂತೆ ಸಮಯಪ್ರಜ್ಞೆ ಮೆರೆದ ಕಂಡಕ್ಟರ್ ತಾನೇ ಬಸ್​ ಅನ್ನು ನಿಯಂತ್ರಣಕ್ಕೆ ತೆಗೆದುಕೊಂಡು ರಸ್ತೆಯಲ್ಲಿದ್ದ ಹಲವರ ಪ್ರಾಣ ಉಳಿಸಿದ್ದಾರೆ.

 

ಇನ್ನಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ