Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಲಕನನ್ನು ಬಲಿ ಪಡೆದ ಬಿಬಿಎಂಪಿ ಲಾರಿಗೆ ಬೆಂಕಿ: ಸ್ಥಳಕ್ಕೆ ಡಿಸಿಎಂ ಆಗಮಿಸುವಂತೆ ಪಟ್ಟು

ಬಾಲಕನನ್ನು ಬಲಿ ಪಡೆದ ಬಿಬಿಎಂಪಿ ಲಾರಿಗೆ ಬೆಂಕಿ: ಸ್ಥಳಕ್ಕೆ ಡಿಸಿಎಂ ಆಗಮಿಸುವಂತೆ ಪಟ್ಟು

ವಿವೇಕ ಬಿರಾದಾರ
|

Updated on:Mar 29, 2025 | 5:15 PM

ಬೆಂಗಳೂರಿನ ಥಣಿಸಂದ್ರದಲ್ಲಿ ಬಿಬಿಎಂಪಿ ಕಸದ ಲಾರಿ ಡಿಕ್ಕಿಯಾಗಿ 10 ವರ್ಷದ ಬಾಲಕ ಐಮಾನ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಅಪಘಾತದಲ್ಲಿ ಬಾಲಕನ ತಂದೆಗೆ ಗಾಯಗಳಾಗಿವೆ. ಬಾಲಕನ ಸಾವಿನಿಂದ ಕೆರಳಿದ ಜನರು ಲಾರಿಗೆ ಬೆಂಕಿ ಹಚ್ಚಿದ್ದಾರೆ. ಲಾರಿ ಚಾಲಕನ ಮೇಲೆ ಮದ್ಯಪಾನದ ಆರೋಪವಿದೆ. ಪೋಷಕರು ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಗಳ ಆಗಮನಕ್ಕೆ ಆಗ್ರಹಿಸಿದ್ದಾರೆ.

ಬಿಬಿಎಂಪಿ (BBMP) ಕಸದ ಲಾರಿ ಡಿಕ್ಕಿಯಾಗಿ ಬೈಕ್​ನಲ್ಲಿದ್ದ ಬಾಲಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಂಗಳೂರಿನ (Bengaluru) ಥಣಿಸಂದ್ರ ರೈಲ್ವೆ ನಿಲ್ದಾಣದ ಬಳಿ ನಡೆದಿದೆ. ಬೈಕ್​ನಲ್ಲಿ ತೆರಳುತ್ತಿದ್ದ 10 ವರ್ಷದ ಐಮಾನ್ ಮೃತ ಬಾಲಕ. ಬಾಲಕನ ಮೃತಪಟ್ಟಿದ್ದನ್ನು ಕಂಡು ರೊಚ್ಚಿಗೆದ್ದ ಸಾರ್ವಜನಿಕರು ಬಿಬಿಎಂಪಿ ಕಸದ ಲಾರಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು. ಚಾಲಕ ಲಾರಿಯಿಂದ ಕೆಳಗಿಳಿದಿದ್ದಾರೆ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಹೆಣ್ಣೂರು ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಅಪಘಾತದಲ್ಲಿ ಐವಾನ್​ ತಂದೆಗೆ ಗಾಯವಾಗಿದ್ದು, ಅಂಬೇಡ್ಕರ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಲಾರಿ ಚಾಲಕ ಮದ್ಯ ಸೇವಿಸಿ ವಾಹನ ಚಾಲನೆ ಮಾಡುತ್ತಿದ್ದ ಎಂನ ಆರೋಪ ಕೇಳಿಬಂದಿದೆ. ಸ್ಥಳಕ್ಕೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮಿಸುವಂತೆ ಪೋಷಕರು ಆಗ್ರಹಿಸಿದ್ದಾರೆ.

Published on: Mar 29, 2025 05:14 PM