ಹೊಸ ವರ್ಷಾಚರಣೆಗೆ ಬ್ರಿಗೇಡ್, ಎಂಜಿ ರೋಡ್ ಸಜ್ಜು: ಸ್ಪಾಟ್​​ಗಳತ್ತ ಜಮಾಯಿಸುತ್ತಿರುವ ಜನರು

Updated on: Dec 31, 2025 | 4:33 PM

ಬೆಂಗಳೂರಿನ ಬ್ರಿಗೇಡ್ ರಸ್ತೆ ಹೊಸ ವರ್ಷ 2026ರ ಸ್ವಾಗತಕ್ಕೆ ಸಜ್ಜಾಗಿದೆ. ದೀಪಾಲಂಕಾರ, ಬ್ಯಾರಿಕೇಡ್‌ಗಳು, ಸಿಸಿಟಿವಿ ಕ್ಯಾಮರಾ ಹಾಗೂ ವಾಚಿಂಗ್ ಟವರ್‌ಗಳ ಮೂಲಕ ಭದ್ರತೆ ಖಚಿತಪಡಿಸಲಾಗಿದೆ. ಮಹಿಳೆಯರ ಸುರಕ್ಷತೆಗೆ ವಿಶೇಷ ಒತ್ತು ನೀಡಲಾಗಿದ್ದು, 20,000ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ. ರಾಜ್ಯದಾದ್ಯಂತ ಆಗಮಿಸುವ ಜನರಿಗೆ ಸುರಕ್ಷಿತ ಸಂಭ್ರಮಕ್ಕೆ ವೇದಿಕೆ ಸಿದ್ಧವಾಗಿದೆ.

ಬೆಂಗಳೂರು, ಡಿಸೆಂಬರ್​ 31: ಹೊಸ ವರ್ಷದ ಸಂಭ್ರಮಾಚರಣೆಗೆ ಬೆಂಗಳೂರಿನ ಎಂ.ಜಿ.ರೋಡ್, ಬ್ರಿಗೇಡ್ ರೋಡ್, ಚರ್ಚ್​ ಸ್ಟ್ರೀಟ್​​ ಸಕಲ ರೀತಿಯಲ್ಲೂ ಸಜ್ಜಾಗಿದೆ. ಎಲ್ಲೆಡೆ ಸಂಭ್ರಮ ಕಳೆಗಟ್ಟಿದೆ. ಪಾರ್ಟಿ ಹಾಟ್ ಸ್ಪಾಟ್​ಗಳಲ್ಲಿ ಜನರು ಜಮಾಯಿಸುತ್ತಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಸಂಚಾರ ಪೊಲೀಸರು ಚರ್ಚ್ ಸ್ಟ್ರೀಟ್​​ನಲ್ಲಿ ಬ್ಯಾರಿಕೇಡ್ ಸೇರಿದಂತೆ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಪಬ್​ಗಳ ಪ್ರವೇಶಕ್ಕೆ ಟಿಕೆಟ್​ ಬುಕ್ಕಿಂಗ್ ಸೋಲ್ಡ್​ಔಟ್ ಆಗಿವೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Published on: Dec 31, 2025 04:31 PM