ಬೆಂಗಳೂರು ರಸ್ತೆಯಲ್ಲಿ ಯುವಕರ ‘ಬಿಯರ್’ ದರ್ಬಾರ್: ಟ್ರಿಪಲ್ ರೈಡಿಂಗ್, ಮದ್ಯಪಾನ ಮಾಡಿದ ವಿಡಿಯೋ ವೈರಲ್
ಬೆಂಗಳೂರಿನ ಬಿಟಿಎಂ ರಸ್ತೆಯಲ್ಲಿ ಸಂಚಾರಿ ನಿಯಮಗಳನ್ನು ಉಲ್ಲಂಘಿಸಿ ಸ್ಕೂಟರ್‌ನಲ್ಲಿ ಟ್ರಿಪಲ್ ರೈಡಿಂಗ್ ಮಾಡಿ, ಹೆಲ್ಮೆಟ್ ಇಲ್ಲದೆ ಚಲಿಸುವ ವಾಹನದಲ್ಲಿ ಬಿಯರ್ ಕುಡಿದ ಯುವಕರ ವಿಡಿಯೋ ವೈರಲ್ ಆಗಿದೆ. ಈ ಬೇಜವಾಬ್ದಾರಿ ವರ್ತನೆ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದ್ದು, ಬೆಂಗಳೂರು ಸಂಚಾರಿ ಪೊಲೀಸರು ವಾಹನ ಸಂಖ್ಯೆ ಆಧರಿಸಿ ಎಫ್‌ಐಆರ್ ದಾಖಲಿಸಿ, ಆರೋಪಿಗಳ ಪತ್ತೆಗೆ ಕ್ರಮ ಕೈಗೊಂಡಿದ್ದಾರೆ. ರಸ್ತೆ ಸುರಕ್ಷತೆಗೆ ಇದು ಎಚ್ಚರಿಕೆಯ ಕರೆಗಂಟೆ.
ಬೆಂಗಳೂರು, ಮಾ.23: ಸಿಲಿಕಾನ್ ಸಿಟಿಯ ಬಿಟಿಎಂ ರಸ್ತೆಯಲ್ಲಿ (BTM Road) ಸಂಚಾರಿ ನಿಯಮಗಳನ್ನು ಗಾಳಿಗೆ ತೂರಿದ ಯುವಕರ ಗುಂಪೊಂದು ಅತಿರೇಖಾದ ವರ್ತನೆ ತೋರಿದ್ದಾರೆ. ಸ್ಕೂಟರ್‌ನಲ್ಲಿ ಮೂವರು ಯುವಕರು ಹೆಲ್ಮೆಟ್ ಇಲ್ಲದೆ ‘ಟ್ರಿಪಲ್ ರೈಡಿಂಗ್’ ಮಾಡುತ್ತಿರುವುದಲ್ಲದೆ, ಚಲಿಸುವ ವಾಹನದಲ್ಲೇ ಬಿಯರ್ ಕುಡಿಯುತ್ತಾ ಸಾರ್ವಜನಿಕರಿಗೆ ಕಿರಿಕಿರಿ ಉಂಟುಮಾಡಿರುವ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಆಕ್ರೋಶಕ್ಕೆ ಕಾರಣವಾಗಿದೆ. ಮೂವರು ಯುವಕರು ಯಾವುದೇ ಭಯವಿಲ್ಲದೆ ಸ್ಕೂಟರ್‌ನಲ್ಲಿ ತೆರಳುತ್ತಿದ್ದು, ಹಿಂಬದಿ ಕುಳಿತಿದ್ದ ಯುವಕ ಬಿಯರ್ ಬಾಟಲಿ ಹಿಡಿದು ಮದ್ಯಪಾನ ಮಾಡುತ್ತಾ ವಿಕೃತವಾಗಿ ಕೈ ಸನ್ನೆಗಳನ್ನು ಮಾಡುತ್ತಿದ್ದಾನೆ. ಈ ಯುವಕರು ಟ್ರಿಪಲ್ ರೈಡಿಂಗ್, ಹೆಲ್ಮೆಟ್ ರಹಿತ ಪ್ರಯಾಣ ಮತ್ತು ಸಾರ್ವಜನಿಕ ಸ್ಥಳದಲ್ಲಿ ಮದ್ಯಪಾನದಂತಹ ಗಂಭೀರ ಅಪರಾಧಗಳನ್ನು ಎಸಗಿದ್ದಾರೆ. ಇವರ ಈ ಬೇಜವಾಬ್ದಾರಿ ವರ್ತನೆ ಸ್ವತಃ ಅವರಿಗಷ್ಟೇ ಅಲ್ಲದೆ, ರಸ್ತೆಯಲ್ಲಿ ಹೋಗುವ ಇತರ ಸಾರ್ವಜನಿಕರಿಗೂ ಪ್ರಾಣಾಪಾಯ ತಂದೊಡ್ಡುವಂತಿತ್ತು. ಈ ದೃಶ್ಯವನ್ನು ಹಿಂದಿನಿಂದ ಬರುತ್ತಿದ್ದ ಕಾರಿನ ಡ್ಯಾಶ್‌ಕ್ಯಾಮ್‌ನಲ್ಲಿ ಸೆರೆಹಿಡಿಯಲಾಗಿದ್ದು, @karnatakaportf ಎಂಬ ಎಕ್ಸ್ (X) ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ವಿಡಿಯೋವನ್ನು ಬೆಂಗಳೂರು ಸಂಚಾರಿ ಪೊಲೀಸರಿಗೆ ಟ್ಯಾಗ್ ಮಾಡಲಾಗಿದ್ದು, ಕಠಿಣ ಕ್ರಮಕ್ಕೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.ವಿಡಿಯೋ ಗಮನಿಸಿರುವ ಬೆಂಗಳೂರು ಸಂಚಾರಿ ಪೊಲೀಸರು (BTP), ವಾಹನ ಸಂಖ್ಯೆಯನ್ನು ಆಧರಿಸಿ ಎಫ್‌ಐಆರ್ ದಾಖಲಿಸಲು ಮತ್ತು ಆರೋಪಿಗಳನ್ನು ಪತ್ತೆಹಚ್ಚಲು ಕ್ರಮ ಕೈಗೊಂಡಿದ್ದಾರೆ ಎಂದು ತಿಳಿದುಬಂದಿದೆ.
ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಯತೀಂದ್ರಗೆ ಮತ್ತೊಂದು ಜಾಕ್ ಪಾಟ್, ಸಿದ್ದರಾಮಯ್ಯ ಮುನಿಸು ತಣಿಸುವ ಪ್ರಯತ್ನ
‘ಖಾಕಿ’ ಧರಿಸಿದರೆ ಜೋಶ್ ಬರುತ್ತೆ: ಪೊಲೀಸರ ಬಗ್ಗೆ ಡಾಲಿ ಧನಂಜಯ್ ಮಾತು
GBDA ಯೋಜನೆ ಕುರಿತು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಂದೇಶ
‘ನನ್ನ ಕನಸನ್ನು ಹೆಗಲ ಮೇಲೆ ಹೊತ್ತುಕೊಂಡ ಯಶ್: ಗೀತು ಮೋಹನ್ದಾಸ್ ಭಾವುಕ

