ಬೆಂಗಳೂರು ರಸ್ತೆಯಲ್ಲಿ ಯುವಕರ ‘ಬಿಯರ್’ ದರ್ಬಾರ್: ಟ್ರಿಪಲ್ ರೈಡಿಂಗ್, ಮದ್ಯಪಾನ ಮಾಡಿದ ವಿಡಿಯೋ ವೈರಲ್

Updated on: Mar 23, 2026 | 2:24 PM

ಬೆಂಗಳೂರಿನ ಬಿಟಿಎಂ ರಸ್ತೆಯಲ್ಲಿ ಸಂಚಾರಿ ನಿಯಮಗಳನ್ನು ಉಲ್ಲಂಘಿಸಿ ಸ್ಕೂಟರ್‌ನಲ್ಲಿ ಟ್ರಿಪಲ್ ರೈಡಿಂಗ್ ಮಾಡಿ, ಹೆಲ್ಮೆಟ್ ಇಲ್ಲದೆ ಚಲಿಸುವ ವಾಹನದಲ್ಲಿ ಬಿಯರ್ ಕುಡಿದ ಯುವಕರ ವಿಡಿಯೋ ವೈರಲ್ ಆಗಿದೆ. ಈ ಬೇಜವಾಬ್ದಾರಿ ವರ್ತನೆ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದ್ದು, ಬೆಂಗಳೂರು ಸಂಚಾರಿ ಪೊಲೀಸರು ವಾಹನ ಸಂಖ್ಯೆ ಆಧರಿಸಿ ಎಫ್‌ಐಆರ್ ದಾಖಲಿಸಿ, ಆರೋಪಿಗಳ ಪತ್ತೆಗೆ ಕ್ರಮ ಕೈಗೊಂಡಿದ್ದಾರೆ. ರಸ್ತೆ ಸುರಕ್ಷತೆಗೆ ಇದು ಎಚ್ಚರಿಕೆಯ ಕರೆಗಂಟೆ.

ಬೆಂಗಳೂರು, ಮಾ.23: ಸಿಲಿಕಾನ್ ಸಿಟಿಯ ಬಿಟಿಎಂ ರಸ್ತೆಯಲ್ಲಿ (BTM Road) ಸಂಚಾರಿ ನಿಯಮಗಳನ್ನು ಗಾಳಿಗೆ ತೂರಿದ ಯುವಕರ ಗುಂಪೊಂದು ಅತಿರೇಖಾದ ವರ್ತನೆ ತೋರಿದ್ದಾರೆ. ಸ್ಕೂಟರ್‌ನಲ್ಲಿ ಮೂವರು ಯುವಕರು ಹೆಲ್ಮೆಟ್ ಇಲ್ಲದೆ ‘ಟ್ರಿಪಲ್ ರೈಡಿಂಗ್’ ಮಾಡುತ್ತಿರುವುದಲ್ಲದೆ, ಚಲಿಸುವ ವಾಹನದಲ್ಲೇ ಬಿಯರ್ ಕುಡಿಯುತ್ತಾ ಸಾರ್ವಜನಿಕರಿಗೆ ಕಿರಿಕಿರಿ ಉಂಟುಮಾಡಿರುವ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಆಕ್ರೋಶಕ್ಕೆ ಕಾರಣವಾಗಿದೆ. ಮೂವರು ಯುವಕರು ಯಾವುದೇ ಭಯವಿಲ್ಲದೆ ಸ್ಕೂಟರ್‌ನಲ್ಲಿ ತೆರಳುತ್ತಿದ್ದು, ಹಿಂಬದಿ ಕುಳಿತಿದ್ದ ಯುವಕ ಬಿಯರ್ ಬಾಟಲಿ ಹಿಡಿದು ಮದ್ಯಪಾನ ಮಾಡುತ್ತಾ ವಿಕೃತವಾಗಿ ಕೈ ಸನ್ನೆಗಳನ್ನು ಮಾಡುತ್ತಿದ್ದಾನೆ. ಈ ಯುವಕರು ಟ್ರಿಪಲ್ ರೈಡಿಂಗ್, ಹೆಲ್ಮೆಟ್ ರಹಿತ ಪ್ರಯಾಣ ಮತ್ತು ಸಾರ್ವಜನಿಕ ಸ್ಥಳದಲ್ಲಿ ಮದ್ಯಪಾನದಂತಹ ಗಂಭೀರ ಅಪರಾಧಗಳನ್ನು ಎಸಗಿದ್ದಾರೆ. ಇವರ ಈ ಬೇಜವಾಬ್ದಾರಿ ವರ್ತನೆ ಸ್ವತಃ ಅವರಿಗಷ್ಟೇ ಅಲ್ಲದೆ, ರಸ್ತೆಯಲ್ಲಿ ಹೋಗುವ ಇತರ ಸಾರ್ವಜನಿಕರಿಗೂ ಪ್ರಾಣಾಪಾಯ ತಂದೊಡ್ಡುವಂತಿತ್ತು. ಈ ದೃಶ್ಯವನ್ನು ಹಿಂದಿನಿಂದ ಬರುತ್ತಿದ್ದ ಕಾರಿನ ಡ್ಯಾಶ್‌ಕ್ಯಾಮ್‌ನಲ್ಲಿ ಸೆರೆಹಿಡಿಯಲಾಗಿದ್ದು, @karnatakaportf ಎಂಬ ಎಕ್ಸ್ (X) ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ವಿಡಿಯೋವನ್ನು ಬೆಂಗಳೂರು ಸಂಚಾರಿ ಪೊಲೀಸರಿಗೆ ಟ್ಯಾಗ್ ಮಾಡಲಾಗಿದ್ದು, ಕಠಿಣ ಕ್ರಮಕ್ಕೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.ವಿಡಿಯೋ ಗಮನಿಸಿರುವ ಬೆಂಗಳೂರು ಸಂಚಾರಿ ಪೊಲೀಸರು (BTP), ವಾಹನ ಸಂಖ್ಯೆಯನ್ನು ಆಧರಿಸಿ ಎಫ್‌ಐಆರ್ ದಾಖಲಿಸಲು ಮತ್ತು ಆರೋಪಿಗಳನ್ನು ಪತ್ತೆಹಚ್ಚಲು ಕ್ರಮ ಕೈಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಅಕ್ಷಯ್​ ಪಲ್ಲಮಜಲು​​

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More