AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಎಂಟಿಸಿ ಚಾಲಕ ಹೃದಯಾಘಾತದಿಂದ ಸಾವು: ಪರಿಹಾರ ನೀಡುವವರೆಗೂ ಡ್ಯೂಟಿ ಮಾಡಲ್ಲ ಎಂದ ಚಾಲಕರು

ಬಿಎಂಟಿಸಿ ಚಾಲಕ ಹೃದಯಾಘಾತದಿಂದ ಸಾವು: ಪರಿಹಾರ ನೀಡುವವರೆಗೂ ಡ್ಯೂಟಿ ಮಾಡಲ್ಲ ಎಂದ ಚಾಲಕರು

ರಾಮು, ಆನೇಕಲ್​
| Edited By: |

Updated on:Apr 25, 2026 | 10:26 PM

Share

ಬಿಎಂಟಿಸಿ ಎಲೆಕ್ಟ್ರಿಕ್ ಬಸ್ ಚಾಲಕ ರಮೇಶ್ ಹೃದಯಾಘಾತದಿಂದ ನಿಧನರಾಗಿದ್ದು, ಅವರ ಸಾವಿಗೆ ನ್ಯಾಯ ಸಿಗುವವರೆಗೂ ಬಸ್ ಓಡಿಸುವುದಿಲ್ಲ ಎಂದು ಚಾಲಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಹಿಂದಿನ ಪ್ರಕರಣಗಳಲ್ಲೂ ಪರಿಹಾರ ಸಿಕ್ಕಿಲ್ಲ ಎಂದು ಅಳಲು ತೋಡಿಕೊಂಡಿರುವ ಚಾಲಕರು, ಮೃತ ರಮೇಶ್‌ಗೆ ಸೂಕ್ತ ಪರಿಹಾರ ಮತ್ತು ಭವಿಷ್ಯದಲ್ಲಿ ಚಾಲಕರಿಗೆ ಸುರಕ್ಷತೆ ಖಾತರಿಪಡಿಸುವಂತೆ ಒತ್ತಾಯಿಸಿದ್ದಾರೆ.

ಆನೇಕಲ್​​, ಏಪ್ರಿಲ್​ 25: ಕರ್ತವ್ಯದಲಿದ್ದಾಗಲೇ ಬಿಎಂಟಿಸಿ ಬಸ್ ಚಾಲಕ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ವ್ಯಾಪ್ತಿಯಲ್ಲಿ ನಡೆದಿದೆ. ಘಟನೆಯ ಬೆನ್ನಲ್ಲೇ ಬಿಎಂಟಿಸಿ ಡಿಪೋದಲ್ಲಿ ಸಹೋದ್ಯೋಗಿಗಳು ಬಸ್‌ಗಳನ್ನು ನಿಲ್ಲಿಸಿ ಪ್ರತಿಭಟನೆಗೆ ಇಳಿದಿದ್ದು, ಮೃತರ ಕುಟುಂಬಕ್ಕೆ ಪರಿಹಾರ ನೀಡುವಂತೆ ಒತ್ತಾಯಿಸಿದ್ದಾರೆ. ಈ ಹಿಂದೆ ಮೃತಪಟ್ಟ ಚಾಲಕರ ಕುಟುಂಬಕ್ಕೆ ಸೂಕ್ತ ಪರಿಹಾರ ಸಿಕ್ಕಿಲ್ಲ ಎಂದು ಆರೋಪಿಸಿರುವ ನೌಕರರು, ಬಸ್‌ಗಳನ್ನು ಹೊರತೆಗೆಯದೆ ಪ್ರತಿಭಟಿಸಿದರು. ರಮೇಶ್ ಕುಟುಂಬಕ್ಕೆ ತಕ್ಷಣವೇ ಪರಿಹಾರ ಘೋಷಿಸಬೇಕು, ಇಲ್ಲವಾದರೆ ಡಿಪೋ ಮುಂದೆ ಶವವನ್ನಿಟ್ಟು ಧರಣಿ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Published on: Apr 25, 2026 10:18 PM
Follow Us