ಕಸ್ಟಮರ್ ಮನೆಯಲ್ಲಿ ಚಿನ್ನ ಕದ್ದ ಕ್ಯಾಬ್​​ ಚಾಲಕ ಲಾಕ್​​: ದೋಚಿದ್ದಿದ್ದು ಬರೋಬ್ಬರಿ 25 ಲಕ್ಷ ಮೌಲ್ಯದ ಬಂಗಾರ!

Edited By:

Updated on: Mar 09, 2026 | 2:12 PM

ಬೆಂಗಳೂರಿನಲ್ಲಿ ಕ್ಯಾಬ್ ಚಾಲಕ ಅಬ್ದುಲ್ ರೆಹಮಾನ್, ಗ್ರಾಹಕರ ಮನೆಯಿಂದ 25 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕದ್ದ ಪ್ರಕರಣದಲ್ಲಿ ಹೆಬ್ಬಾಳ ಪೊಲೀಸರಿಂದ ಬಂಧಿತನಾಗಿದ್ದಾನೆ. ಮುಂಬೈಗೆ ಹೊರಟಿದ್ದ ದಂಪತಿ ಕಾರಿನಲ್ಲಿ ಮಾತನಾಡುವುದನ್ನು ಕೇಳಿಸಿಕೊಂಡು ಮನೆಯಲ್ಲಿ ಚಿನ್ನ ಇರಿಸಿರುವ ವಿಷಯ ತಿಳಿದು, ಚಾಲಕ ಕಳ್ಳತನಕ್ಕೆ ಯೋಜನೆ ರೂಪಿಸಿದ್ದ. ಸಿಸಿಟಿವಿ ದೃಶ್ಯ ಆಧರಿಸಿ ಆರೋಪಿಯನ್ನು ಪತ್ತೆಹಚ್ಚಿ ಬಂಧಿಸಲಾಗಿದ್ದು, ಚಿನ್ನ ವಶಕ್ಕೆ ಪಡೆಯಲಾಗಿದೆ.

ಬೆಂಗಳೂರು, ಮಾರ್ಚ್​ 09: ಕಸ್ಟಮರ್ ಮನೆಯಲ್ಲಿ 25 ಲಕ್ಷ ಮೌಲ್ಯದ ಚಿನ್ನಾಭರಣ ದೊಚ್ಚಿದ್ದ ಕ್ಯಾಬ್ ಚಾಲಕನನ್ನು ಹೆಬ್ಬಾಳ ಪೊಲೀಸರು ಬಂಧಿಸಿದ್ದಾರೆ. ಅಬ್ದುಲ್ ರೆಹಮಾನ್ ಬಂಧಿತ ಆರೋಪಿಯಾಗಿದ್ದು, ಚಿನ್ನಾಭರಣ ಸಮೇತ ಚಾಲಕನನ್ನು ಪೊಲೀಸರು ಲಾಕ್​​ ಮಾಡಿದ್ದಾರೆ. ಫೆಬ್ರವರಿ 11 ಶಾಪಿಂಗ್​​ಗೆ ಮುಂಬೈಗೆ ಹೊರಟಿದ್ದ ದಂಪತಿ, ಹೆಬ್ಬಾಳದಿಂದ ಯಶವಂತಪುರಕ್ಕೆ ಕ್ಯಾಬ್ ಬುಕ್ ಮಾಡಿದ್ದರು. ಈ ವೇಳೆ ಸೈಯದ್ ಸಲ್ಮಾನ್ ಪತ್ನಿಗೆ ಮನೆಯಲ್ಲಿ ಚಿನ್ನಾಭರಣ ಇರುವ ಕಪಾಟು ಲಾಕ್ ಮಾಡಿದ್ದೀಯಾ ಎಂದು ಕೇಳಿದ್ದರು. ಮಾರ್ಗ ಮಧ್ಯೆ ಮೂರು ದಿನಗಳ ಕಾಲ ಮನೆಗೆ ವಾಪಾಸ್ ಬರಲ್ಲ ಎಂದು ಇವರು ಮಾತಾಡಿದ್ದನ್ನೂ ಸಹ ಆರೋಪಿ ಕೇಳಿಸಿಕೊಂಡಿದ್ದ. ಸೈಯದ್ ಕುಟುಂಬವನ್ನು ಯಶವಂತಪುರಕ್ಕೆ ಡ್ರಾಪ್ ಮಾಡಿ ಹೆಬ್ಬಾಳಕ್ಕೆ ಬಂದಿದ್ದ ಅಬ್ದುಲ್ ರೆಹಮಾನ್,  ಸೈಯದ್ ಸಲ್ಮಾನ್ ಮನೆಯಲ್ಲಿ ಕಳ್ಳತನ ನಡೆಸಿದ್ದ. ಈ ಸಂಬಂಧ ಸಿಸಿ ಕ್ಯಾಮೆರಾ ಪರಿಶೀಲನೆ ವೇಳೆ ಕ್ಯಾಬ್ ಚಾಲಕ ಬಂದಿರೋದು ಪತ್ತೆಯಾಗಿದ್ದು, ಆತನ ವಿಚಾರಣೆ ನಡೆಸಿದಾಗ ಸತ್ಯ ಬಯಲಾಗಿದೆ. ಈತ ಈ ಹಿಂದೆಯೂ ಇದೇ ರಿತಿಯ ಕೃತ್ಯಗಳಲ್ಲಿ ಭಾಗಿಯಾಗಿದ್ದು, ಜಾಮೀನಿನ ಮೇಲೆ ಹೊರ ಬಂದಿದ್ದ ಎಂಬುದು ಗೊತ್ತಾಗಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Loading...
Unable to load recommendations.
Follow Us
ಶಿವಪ್ರಸಾದ್​ ಬಿ.

2015 ರಲ್ಲಿ ಸಮಯ ವಾಹಿನಿ ಮೂಲಕ ಎಲೆಕ್ಟ್ರಾನಿಕ್ ಮಾಧ್ಯಮದಲ್ಲಿ ವರದಿಗಾರನಾಗಿ ವೃತ್ತಿ ಆರಂಭಿಸಿದೆ. ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಹಿರಿಯ ಕ್ರೈಮ್ ವರದಿಗಾರನಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ . ಬೆಂಗಳೂರು ನಗರದಲ್ಲಿ ನಡೆಯುವ ಅಪರಾಧ ಕೃತ್ಯಗಳ ಬಗ್ಗೆ ನಿರಂತರ ವರದಿಗಳನ್ನು ಮಾಡುತ್ತಿದ್ದೇನೆ. ಮೂಲತಃ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನವನಾಗಿದ್ದು, ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಎಂಎಸ್ (ಕಮ್ಯೂನಿಕೇಷನ್) ಸ್ನಾತಕೋತ್ತರ ಪದವಿ ಹಾಗೂ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದಲ್ಲಿ ಕಾನೂನು ಪದವೀಧರನಾಗಿದ್ದೇನೆ.

Read More