ಬೆಂಗಳೂರು, ಸೆಪ್ಟೆಂಬರ್ 12: ಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ನಿವಾಸದ ಬಳಿ ಇದ್ದಕ್ಕಿದ್ದಂತೆ ಕಾರಿಗೆ ಬೆಂಕಿ ತಗುಲಿದ ಘಟನೆ ಸ್ಥಳೀಯರಲ್ಲಿ ಆತಂಕವನ್ನು ಹುಟ್ಟುಹಾಕಿತು. ಕಾರು ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಕಾರಿನ ಟೈರ್ ಮತ್ತು ಡೀಸೆಲ್ ಟ್ಯಾಂಕ್ ಸ್ಫೋಟಗೊಂಡಿದೆ ಎಂದು ವರದಿಯಾಗಿದೆ. ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿಯನ್ನು ನಿಯಂತ್ರಿಸಿದ್ದಾರೆ. ಘಟನೆಯ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಆದರೆ, ಸಿಎಂ ನಿವಾಸದ ಸಮೀಪ ನಡೆದ ಈ ಘಟನೆ ಆತಂಕಕ್ಕೆ ಕಾರಣವಾಯಿತು.
Published On - 1:50 pm, Fri, 12 September 25