AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾರಿಗೆ ಕಾರು ಡಿಕ್ಕಿ: ಭೀಕರ ಅಪಘಾತಕ್ಕೆ ಮೂವರು ಯುವಕರು ಬಲಿ

ಲಾರಿಗೆ ಕಾರು ಡಿಕ್ಕಿ: ಭೀಕರ ಅಪಘಾತಕ್ಕೆ ಮೂವರು ಯುವಕರು ಬಲಿ

ಪ್ರಸನ್ನ ಹೆಗಡೆ
|

Updated on: Mar 08, 2026 | 8:04 AM

Share

ಬೆಂಗಳೂರು ಹೊರವಲಯದ ಅಗರ ಕ್ರಾಸ್ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ವೇಗವಾಗಿ ಬಂದ ಕಾರು, ಹಾರೋಹಳ್ಳಿ ಕಡೆಗೆ ತೆರಳುತ್ತಿದ್ದ ಲಾರಿಯ ಹಿಂಭಾಗಕ್ಕೆ ಡಿಕ್ಕಿ ಹೊಡೆದಿದೆ. ಸೈಫ್ ಪಾಷಾ, ಯೂಸುಫ್ ಖಾನ್ ಮತ್ತು ಅಜರ್ ಪಾಷಾ ಎಂಬುವವರು ದುರ್ಮರಣಕ್ಕೀಡಾಗಿದ್ದು, ಮೃತದೇಹಗಳನ್ನು ರಾಜರಾಜೇಶ್ವರಿ ಆಸ್ಪತ್ರೆಗೆ ರವಾನಿಸಲಾಗಿದೆ.

ಬೆಂಗಳೂರು, ಮಾರ್ಚ್​ 08: ನಗರದ ಹೊರವಲಯದ ಅಗರ ಕ್ರಾಸ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಮೂವರು ಯುವಕರು ಸ್ಥಳದಲ್ಲೇ ದುರ್ಮರಣಕ್ಕೀಡಾಗಿದ್ದಾರೆ. ಮೃತಪಟ್ಟ ಯುವಕರನ್ನು ಸೈಫ್ ಪಾಷಾ, ಯೂಸುಫ್ ಖಾನ್ ಮತ್ತು ಅಜರ್ ಪಾಷಾ ಎಂದು ಗುರುತಿಸಲಾಗಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಬೆಂಗಳೂರಿನಿಂದ ಹಾರೋಹಳ್ಳಿ ಕಡೆಗೆ ಚಲಿಸುತ್ತಿದ್ದ ಲಾರಿಯ ಹಿಂಭಾಗಕ್ಕೆ ಅತಿ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗವು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಮೃತದೇಹಗಳನ್ನು ಬೆಂಗಳೂರಿನ ರಾಜರಾಜೇಶ್ವರಿ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ. ಕಗ್ಗಲಿಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Follow Us