ಬೆಂಗಳೂರಿಗರೇ… ನಾಳೆಯಿಂದ ಮೂರು ದಿನ ಇರೋದಿಲ್ಲ ಕಾವೇರಿ ನೀರು ಸರಬರಾಜು

Updated on: Sep 14, 2025 | 7:41 PM

ಕಾವೇರಿ ನೀರು ಸರಬರಾಜು ತುರ್ತು ನಿರ್ವಾಹಣಾ ಕಾಮಗಾರಿ ಹಿನ್ನೆಲೆ ಬೆಂಗಳೂರಿನಲ್ಲಿ 3 ದಿನ ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಹೌದು ಸೆಪ್ಟೆಂಬರ್‌ 15, 16 ಮತ್ತು 17 ರಂದು ಕಾವೇರಿ ನೀರು ಪೂರೈಕೆ ಸ್ಥಗಿತವಾಗಲಿದ್ದು, ಸಾರ್ವಜನಿಕರು ನೀರನ್ನು ಸಂಗ್ರಹಿಸಿಟ್ಟುಕೊಳ್ಳಲು ಜಲಮಂಡಳಿ ಮನವಿ ಮಾಡಿದೆ.

ಬೆಂಗಳೂರು, ಸೆಪ್ಟೆಂಬರ್‌ 14: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಾವೇರಿ ನೀರು ಪೂರೈಕೆಯಲ್ಲಿ (Cauvery water supply) ವ್ಯತ್ಯಯ ಉಂಟಾಗಲಿದೆ. ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆ ಸೆಪ್ಟೆಂಬರ್‌ 15, 16 ಮತ್ತು 17 ರಂದು ನಗರದಲ್ಲಿ ಕಾವೇರಿ ನೀರು ಪೂರೈಕೆ ಇರೋದಿಲ್ಲ. ಕಾವೇರಿ ನೀರು ಸರಬರಾಜು ಯೋಜನೆಯ ಜಲರೇಚಕ ಯಂತ್ರಾಗಾರಗಳ ಸ್ಥಗಿತತೆಯಿಂದ ಕಾವೇರಿ ನೀರು ಸರಬರಾಜುವಿನಲ್ಲಿ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಅಗತ್ಯಕ್ಕೆ ತಕ್ಕಷ್ಟು ನೀರು ಸಂಗ್ರಹಿಸಿಟ್ಟುಕೊಳ್ಳಲು ಜಲ ಮಂಡಳಿ ಮನವಿಯನ್ನು ಮಾಡಿದೆ.

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ