ಬೆಂಗಳೂರು: ರೌಡಿಶೀಟರ್​ಗಳಿಗೆ ಸಿಸಿಬಿ ಬಿಗ್ ಶಾಕ್, ರಾತ್ರೋರಾತ್ರಿ ಮಿಂಚಿನ ಕಾರ್ಯಾಚರಣೆ

Updated on: Jul 04, 2026 | 9:17 AM

ಬೆಂಗಳೂರಿನಲ್ಲಿ ಸಿಸಿಬಿ ಡಿಸಿಪಿ ಶ್ರೀಹರಿಬಾಬು ನೇತೃತ್ವದಲ್ಲಿ 30ಕ್ಕೂ ಹೆಚ್ಚು ರೌಡಿಶೀಟರ್‌ಗಳ ಮನೆಗಳ ಮೇಲೆ ಶುಕ್ರವಾರ ತಡರಾತ್ರಿ ದಾಳಿ ನಡೆದಿದೆ. ಇಂದಿರಾನಗರದ ಪ್ರಭಾಕರ್ ಎಂಬಾತನ ಮನೆಯಲ್ಲಿ ಮಾರಕಾಸ್ತ್ರಗಳು ಪತ್ತೆಯಾಗಿವೆ. ಅಪರಾಧ ಹಿನ್ನೆಲೆ ಇರೋರಿಗೆ ಬಿಸಿ ಮುಟ್ಟಿಸಿದ ಸಿಸಿಬಿ ತಂಡ, ಸಮಾಜದ ಸ್ವಾಸ್ಥ್ಯ ಕೆಡಿಸಿದರೆ ಕಠಿಣ ಕ್ರಮದ ಎಚ್ಚರಿಕೆ ನೀಡಿದೆ.

ಬೆಂಗಳೂರು, ಜುಲೈ 4: ಬೆಂಗಳೂರಿನಲ್ಲಿ ಸೆಂಟ್ರಲ್ ಕ್ರೈಮ್ ಬ್ರಾಂಚ್ (ಸಿಸಿಬಿ) ಪೊಲೀಸರು ರೌಡಿಶೀಟರ್‌ಗಳ ವಿರುದ್ಧ ದೊಡ್ಡ ಕಾರ್ಯಾಚರಣೆಯನ್ನು ನಡೆಸಿದ್ದಾರೆ. ಸಿಸಿಬಿ ಡಿಸಿಪಿ ಶ್ರೀಹರಿಬಾಬು ಅವರ ನೇತೃತ್ವದಲ್ಲಿ, ತಡರಾತ್ರಿ 30ಕ್ಕೂ ಹೆಚ್ಚು ರೌಡಿಶೀಟರ್‌ಗಳ ಮನೆಗಳ ಮೇಲೆ ಏಕಾಏಕಿ ದಾಳಿ ಮಾಡಲಾಯಿತು. ಬೆಂಗಳೂರು ಪೂರ್ವ ಮತ್ತು ಈಶಾನ್ಯ ವಿಭಾಗಗಳಲ್ಲಿ ಈ ಶೋಧಕಾರ್ಯವನ್ನು ಕೈಗೊಳ್ಳಲಾಯಿತು.

ಇಂದಿರಾನಗರದಲ್ಲಿರುವ ಪ್ರಭಾಕರ್ ಎಂಬ ರೌಡಿಶೀಟರ್ ಮನೆಯಲ್ಲಿ ಮಾರಕಾಸ್ತ್ರಗಳು ಪತ್ತೆಯಾಗಿವೆ. ಪೊಲೀಸರು ವಶಪಡಿಸಿಕೊಂಡ ಮಾರಕಾಸ್ತ್ರಗಳ ಫೋಟೋಗಳನ್ನು ಬಿಡುಗಡೆ ಮಾಡಿದ್ದಾರೆ. ಅಪರಾಧ ಹಿನ್ನೆಲೆ ಹೊಂದಿರುವವರಿಗೆ ಸಿಸಿಬಿ ತಂಡವು “ಬಿಸಿ ಮುಟ್ಟಿಸಿದೆ” ಎಂದು ಹೇಳಲಾಗಿದೆ. 30ಕ್ಕೂ ಹೆಚ್ಚು ರೌಡಿಶೀಟರ್‌ಗಳ ಮನೆಗಳಲ್ಲಿ ಶೋಧ ಕಾರ್ಯ ನಡೆಸಿ, ಅವರಿಗೆ ಕಠಿಣ ಎಚ್ಚರಿಕೆ ನೀಡಲಾಗಿದೆ. ಸಮಾಜದ ಸ್ವಾಸ್ಥ್ಯವನ್ನು ಕೆಡಿಸುವ ಯಾವುದೇ ಅಪರಾಧ ಕೃತ್ಯಗಳಲ್ಲಿ ಮತ್ತೆ ಭಾಗಿಯಾದರೆ, ಅಂತಹವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಸಿಸಿಬಿ ಸ್ಪಷ್ಟಪಡಿಸಿದೆ. ಈ ಮೆಗಾ ಆಪರೇಷನ್ ನಗರದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಒಂದು ಪ್ರಮುಖ ಹೆಜ್ಜೆಯಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More