ಬೆಂಗಳೂರಲ್ಲಿ ಸಿಸಿಬಿ ಬಿಗ್ ಬೇಟೆ: ಲಗೇಜ್ ಬ್ಯಾಗ್‌ನಲ್ಲಿತ್ತು 21 ಕೋಟಿ ರೂ. ಮೌಲ್ಯದ ಡ್ರಗ್ಸ್; ಮೂವರು ನೈಜೀರಿಯನ್ನರ ಬಂಧನ!
ನಗರದಲ್ಲಿ ಸಿಸಿಬಿ (CCB) ಅಧಿಕಾರಿಗಳು ಬೃಹತ್ ಮಾದಕ ವಸ್ತು ಮಾರಾಟ ಜಾಲವನ್ನು ಭೇದಿಸಿದ್ದು, 21 ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್ ಅನ್ನು ಜಪ್ತಿ ಮಾಡಿದ್ದಾರೆ. ಈ ಸಂಬಂಧ ಮೂವರು ನೈಜೀರಿಯಾ ಪ್ರಜೆಗಳನ್ನು ಬಂಧಿಸಲಾಗಿದೆ. ಬಂಧಿತರು ಮಾದನಾಯಕನಹಳ್ಳಿಯ ಬೈಲಕೊನೆಹಳ್ಳಿಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು ಎಂದು ತಿಳಿದು ಬಂದಿದೆ.
ಬೆಂಗಳೂರು, ಜೂನ್ 29: ನಗರದಲ್ಲಿ ಸಿಸಿಬಿ (CCB) ಅಧಿಕಾರಿಗಳು ಬೃಹತ್ ಮಾದಕ ವಸ್ತು ಮಾರಾಟ ಜಾಲವನ್ನು ಭೇದಿಸಿದ್ದು, 21 ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್ ಅನ್ನು ಜಪ್ತಿ ಮಾಡಿದ್ದಾರೆ. ಈ ಸಂಬಂಧ ಮೂವರು ನೈಜೀರಿಯಾ ಪ್ರಜೆಗಳನ್ನು ಬಂಧಿಸಲಾಗಿದೆ. ಬಂಧಿತರು ಮಾದನಾಯಕನಹಳ್ಳಿಯ ಬೈಲಕೊನೆಹಳ್ಳಿಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು ಎಂದು ತಿಳಿದು ಬಂದಿದೆ.
ದಾಳಿಯ ವೇಳೆ 10 ಕೆಜಿ 270 ಗ್ರಾಂ ಎಂಡಿಎಂಎ ಕ್ರಿಸ್ಟಲ್ ಅನ್ನು ಸೀಸ್ ಮಾಡಲಾಗಿದ್ದು, ಇದರ ಮಾರುಕಟ್ಟೆ ಮೌಲ್ಯ ಸುಮಾರು 21 ಕೋಟಿ ರೂಪಾಯಿ ಎಂದು ಅಂದಾಜಿಸಲಾಗಿದೆ. ಆರೋಪಿಗಳಿಂದ ನಾಲ್ಕು ಮೊಬೈಲ್ ಫೋನ್‌ಗಳು ಮತ್ತು ಎರಡು ದ್ವಿಚಕ್ರ ವಾಹನಗಳನ್ನು ಸಹ ವಶಪಡಿಸಿಕೊಳ್ಳಲಾಗಿದೆ. ನೈಜೀರಿಯಾ ಪ್ರಜೆಗಳು ಲಗೇಜ್ ಬ್ಯಾಗ್‌ನಲ್ಲಿ ಡ್ರಗ್ಸ್ ಅನ್ನು ಅಡಗಿಸಿಟ್ಟು ಸಾಗಿಸುತ್ತಿದ್ದರು ಎಂದು ತಿಳಿದುಬಂದಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

